ಅರಕೇರಾದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪೂವಿತಾ ಎಸ್. ಚಾಲನೆ - ಅಧಿಕಾರಿಗಳೇ ಜನರ ಬಳಿಗೆ, ಸ್ಥಳದಲ್ಲೇ ಸಮಸ್ಯೆ ಪರಿಹಾರ, ಕಂದಾಯ ಸಮಸ್ಯೆಗೆ ಆದ್ಯತೆ, 125 ದಿನಗಳ ಉದ್ಯೋಗಕ್ಕೆ ಕ್ರಿಯಾ ಯೋಜನೆ
ಅರಕೇರಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪೂವಿತಾ ಎಸ್. ಚಾಲನೆ - ಸರ್ಕಾರಿ ಯೋಜನೆಗಳು ಜನರಿಗೆ ತಲುಪಿಸುವುದು, ಕುಂದುಕೊರತೆ ಸ್ಥಳದಲ್ಲೇ ಪರಿಹಾರ, ದೇವದುರ್ಗ-ಅರಕೇರಾದಲ್ಲಿ ಕಂದಾಯ ಸಮಸ್ಯೆಗೆ ಆದ್ಯತೆ, ಬರ ಪರಿಸ್ಥಿತಿಯಲ್ಲಿ ಬೆಳೆ ಸಂರಕ್ಷಣೆ, ವಿಬಿ-ಜಿ ರಾಮ್ಜಿ ಯೋಜನೆಯಡಿ 125 ದಿನ ಉದ್ಯೋಗ, ಬಾಲ್ಯವಿವಾಹ ನಿಷೇಧ ಪ್ರತಿಜ್ಞೆ, ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣೆ
ಅರಕೇರಾದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ
ರಾಯಚೂರು/ಅರಕೇರಾ: ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಮತ್ತು ಜನರ ಕುಂದುಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಉದ್ದೇಶದಿಂದ ಅರಕೇರಾ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಅಧಿಕಾರಿಗಳೇ ಜನರ ಬಳಿಗೆ ತೆರಳಿ ಅಹವಾಲುಗಳನ್ನು ಸ್ವೀಕರಿಸಿ, ನಿಯಮಾನುಸಾರ ಸ್ಥಳದಲ್ಲಿಯೇ ಹಾಗೂ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ದೇವದುರ್ಗ ಮತ್ತು ಅರಕೇರಾ ತಾಲೂಕುಗಳಲ್ಲಿ ಕಂದಾಯ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಬೆಳೆ ಸಂರಕ್ಷಣೆ ಹಾಗೂ ನೀರಾವರಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಾಲ್ಯವಿವಾಹ, ಬಾಲಗರ್ಭಧಾರಣೆ ಹಾಗೂ ಪೋಕ್ಸೋ ಪ್ರಕರಣಗಳ ತಡೆಗಟ್ಟುವಿಕೆ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗಾಗಿ ಜಾರಿಯಲ್ಲಿರುವ ವಿವಿಧ ಯೋಜನೆಗಳ ಮಾಹಿತಿ ನೀಡಲು ಮಳಿಗೆಗಳನ್ನು ತೆರೆಯಲಾಗಿತ್ತು.
ಸಮಾಜ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್ ಪ್ರವೇಶ ಹಾಗೂ ಇತರೆ ಸೌಲಭ್ಯಗಳು, ಆಹಾರ ಇಲಾಖೆಯಿಂದ ಪಡಿತರ ಚೀಟಿ, ಅನ್ನಭಾಗ್ಯ ಯೋಜನೆ ಮತ್ತು ಇ-ಕೆವೈಸಿ ಕುರಿತು ಮಾಹಿತಿ ಹಾಗೂ ಸೇವೆಗಳನ್ನು ಒದಗಿಸಲಾಯಿತು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ಜಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 125 ದಿನಗಳ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರ ವೈಯಕ್ತಿಕ ಹಾಗೂ ಗ್ರಾಮಮಟ್ಟದ ಸಮಸ್ಯೆಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದ್ದು, ಸ್ವೀಕರಿಸಿದ ಅಹವಾಲುಗಳನ್ನು ನಿಯಮಾನುಸಾರ ಪರಿಶೀಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಯಿತು.
ಈ ಸಂದರ್ಭದಲ್ಲಿ ಬಾಲ್ಯವಿವಾಹ ಮುಕ್ತ ಭಾರತ 100 ದಿನಗಳ ಅಭಿಯಾನದ ಅಂಗವಾಗಿ ಬಾಲ್ಯವಿವಾಹ ನಿಷೇಧದ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕಂದಾಯ ಇಲಾಖೆಗಳ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಎನ್.ಆರ್.ಎಲ್.ಎಂ., ಕಂದಾಯ ಇಲಾಖೆ ಹಾಗೂ ಸ್ವಸಹಾಯ ಸಂಘಗಳ ವತಿಯಿಂದ ಸ್ಥಾಪಿಸಲಾಗಿದ್ದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.