🔥 TRENDING Priyanka Gandhi Renews Demand for CEC’... Virat Kohli's Masterclass Leads India... Virat Kohli reaches 15,000 ODI runs as... Mehbooba Mufti Meets Mirwaiz Umar Afte... Kohli, Gill guide India to victory in... Congress May Face SP in First Uttar Pr...
28 Sep 2026•
ગુજરાતી मराठी ਪੰਜਾਬੀ বাংলা
ಪ್ರಶಸ್ತಿ ಪಡೆದ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ ಶಾಸಿಕಿ ಜಿ ಕರೆಮ್ಮ ಗೋಪಾಲಕೃಷ್ಣ 150 ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಪ್ರಶಸ್ತಿ ಪಡೆದ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ ಶಾಸಿಕಿ ಜಿ ಕರೆಮ್ಮ ಗೋಪಾಲಕೃಷ್ಣ 150 ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

✍️ Reporter: MAHAMAD WALI QURESHI 🗓 20 Sep 2026, 11:08 AM 👁 69
Watch on: ▶️ YouTube
Share: 💬 WhatsApp 📘 Facebook 𝕏 Post
ಪ್ರಶಸ್ತಿ ಪಡೆದ ಶಿಕ್ಷಕರ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ: ಶಾಸಕಿ ಕರೆಮ್ಮ ಗೋಪಾಲ ಕೃಷ್ಣ: 150 ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ನೀಡ್ 24 ನ್ಯೂಸ್

ಜಾಲಹಳ್ಳಿ,ಸೆ.20-ನೈತಿಕ ಮೌಲ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ, ಸನ್ನಡತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ, ಪ್ರಶಸ್ತಿ ಪಡೆದ ಶಿಕ್ಷಕರ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ ಎಂದು ದೇವದುರ್ಗ ಶಾಸಕಿ ಕರೆಮ್ಮ ಗೋಪಾಲಕೃಷ್ಣ ಹೇಳಿದರು.

ಗ್ರಾಮದ ಶ್ರೀ ಜಗಧಾರಾಧ್ಯ ಜಯಶಾಂತ ಲಿಂಗೇಶ್ವರ ಸಹಕಾರ ಸಭಾಭವನದಲ್ಲಿ ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ರಾಯಚೂರು ಜಿಲ್ಲಾ ಶೈಕ್ಷಣಿಕ ಸಮಾವೇಶ ಹಾಗೂ ಉತ್ತಮ ಶಿಕ್ಷಕ-ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಕೇವಲ ಪಠ್ಯ ಪುಸ್ತಕದಲ್ಲಿರುವ ವಿಷಯ ಗಳನ್ನು ಬೋಧಿಸುವವರಲ್ಲ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿ, ಅದನ್ನು ಬೆಳೆಸುವ ಜವಾಬ್ದಾರಿಯೂ ಶಿಕ್ಷಕರ ಮೇಲಿದೆ. ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಗಮನಾರ್ಹವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳನ್ನು ಕಲಿಸುವ ಅಗತ್ಯವಿದೆ ಎಂದರು.

ಮೊಬೈಲ್ ಬಳಕೆ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಓದು, ಬರವಣಿಗೆ ಹಾಗೂ ಅಕ್ಷರ ಜ್ಞಾನದ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಶಿಕ್ಷಕರು ಮಾರ್ಗದರ್ಶನ ನೀಡಬೇಕು. ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡು, ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಯ ಆಸಕ್ತಿ ಬೆಳೆಸಬೇಕು. ವಿದ್ಯಾರ್ಥಿಗಳನ್ನು ಸರಿದಾರಿಗೆ ಕೊಂಡೊಯ್ಯುವಲ್ಲಿ ಶಿಕ್ಷಕರ ಮಾರ್ಗದರ್ಶನ ನಿರ್ಣಾಯಕವಾಗಿದೆ ಎಂದು ಹೇಳಿದರು.

ಕೇವಲ ಅಕ್ಷರ ಜ್ಞಾನ ನೀಡುವುದಕ್ಕೆ ಸೀಮಿತವಾಗದೆ ಸತ್ಯ, ತಾಳ್ಮೆ, ಪ್ರೀತಿ, ಸನ್ನಡತೆ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯಂತಹ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತೆ ಶಿಕ್ಷಣ ನೀಡುವುದು ಅಗತ್ಯವಾಗಿದೆ. ಪ್ರಶಸ್ತಿ ಪಡೆದಿರುವ ಶಿಕ್ಷಕರ ಜವಾಬ್ದಾರಿ ಇನ್ನಷ್ಟು ಹೆಚ್ಚಿದ್ದು, ಈ ಗೌರವವು ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಪ್ರೇರಣೆಯಾಗಬೇಕು, ಖಾಸಗಿ ಶಾಲೆ ಶಿಕ್ಷಕರ ಭವನಕ್ಕೆ ಮತ್ತು ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ಹಣ ನೀಡುತ್ತೇನೆ ಎಂದು ಹೇಳಿದರು,

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಇಂದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ಅರ್ಥಪೂರ್ಣ ಹಾಗೂ ಜೀವನಾಧಾರಿತ ಶಿಕ್ಷಣದ ಅಗತ್ಯವಿದೆ. ಶಿಕ್ಷಕರ ಪರಿಶ್ರಮದಿಂದ ಅನೇಕ ವಿದ್ಯಾರ್ಥಿಗಳು ಉನ್ನತ ಸ್ಥಾನಗಳನ್ನು ಪಡೆದು ತಾವು ಕಲಿತ ಶಾಲೆ ಹಾಗೂ ಕಾಲೇಜುಗಳಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಅರ್ಹ ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಶಿಕ್ಷಕರು ವಿಶೇಷ ಗಮನ ಹರಿಸಬೇಕು. ಸರ್ಕಾರಿ ಮಟ್ಟದಲ್ಲಿ ಆಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶೈಕ್ಷಣಿಕ ಸಮಾವೇಶ ಆಯೋಜಿಸಿರುವುದು ವಿಶೇಷವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವೆ ಗುಣಮಟ್ಟದ ಶಿಕ್ಷಣ ನೀಡುವ

ಆರೋಗ್ಯಕರ ಪೈಪೋಟಿ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಆದರೆ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆ ಬೆಳೆಸುವುದಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 150 ಶಿಕ್ಷಕ-ಶಿಕ್ಷಕಿಯರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದ ಶಿಕ್ಷಕರು ತಮ್ಮ ಸೇವಾ ಅನುಭವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಎದುರಾಗುತ್ತಿರುವ ಸವಾಲುಗಳ ಕುರಿತು ಚರ್ಚಿಸಿದರು.

ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ನಾಗರಾಜ ಮಸ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಉಪನ್ಯಾಸವನ್ನು ಕರ್ನಾಟಕದ ಪ್ರಸಿದ್ಧ ಸಾಮಾಜಿಕ ಚಿಂತಕರು, ಬರಹಗಾರರು ಮತ್ತು ಮಾಧ್ಯಮ ನಿರ್ಮಾಪಕರಾದ ವಿವೇಕಾನಂದ ಹೆಚ್. ಕೆ. ಮಾಡಿದರು, ಮಹಾಸಂಸ್ಥಾನ ಬೃಹನ್ಮಠ ಜಾಲಹಳ್ಳಿ ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮೈಲಾರಲಿಂಗೇಶ್ವರ ಸಂಸ್ಥಾನ ದೇವರಗುಂಡುಗುರ್ತಿ ನಿಜಲಿಂಗ ಮಹಾಸ್ವಾಮಿಗಳು ಹಾಗೂ ಹಾಲುಮತ ಗುರುಗಳಾದ ಸಿದ್ದಯ್ಯ ತಾತಾ ಗುರುವಿನ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀದೇವಿ ಆರ್. ನಾಯಕ, ಶಂಕರಲಿಂಗಯ್ಯತಾತಾ, ಬಿಆರ್ ಸಿ ಶಿವರಾಜ ಪೂಜಾರಿ,ಚನ್ನಪ್ಪ ಬೂದಿನಾಳ, ಮಲ್ಲಿಕಾರ್ಜುನ ಗಟ್ಟೂರು, ಮಾರಪ್ಪ ಕೊತ್ತದೊಡ್ಡಿ, ವಿಜಯರೆಡ್ಡಿ ಜಾಲಹಳ್ಳಿ, ಸುಭಾಷ್ ಪಾಟೀಲ್, ಬೂತಪ್ಪ ದೇವರಮನೆ, ಅಯ್ಯಪ್ಪ ಕೊಂಗಂಡಿ, ನಿಖಿಲ್ ಕುಮಾರ ಸೇರಿದಂತೆ ವಿವಿಧ ತಾಲೂಕುಗಳ ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದಾರು..
📲Get App