🔥 TRENDING பள்ளி காலாண்டு விடுமுறை: ஏற்காட்டில் க... Louisiana Court Rules in Favor of Jone... Heavy Rain in Uttar Pradesh Claims 56... Thar SUV crashes into motorcycle on Dw... Virat Kohli's Six-Fueled Century Sets... Health Ministry advises lowest effecti...
28 Sep 2026•
ગુજરાતી मराठी ਪੰਜਾਬੀ বাংলা
ಸೆ. 19 ರಂದು ದೇವದುರ್ಗ ಜಾಲಹಳ್ಳಿಯಲ್ಲಿ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಖಾಸಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಬದ್ಧ ನಾಗರಾಜ ಮಸ್ಕಿ

ಸೆ. 19 ರಂದು ದೇವದುರ್ಗ ಜಾಲಹಳ್ಳಿಯಲ್ಲಿ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಖಾಸಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಬದ್ಧ ನಾಗರಾಜ ಮಸ್ಕಿ

✍️ Reporter: MAHAMAD WALI QURESHI 🗓 14 Sep 2026, 04:38 PM 👁 60
Watch on: ▶️ YouTube
Share: 💬 WhatsApp 📘 Facebook 𝕏 Post
ಸೆ.19ರಂದು ದೇವದುರ್ಗ ಜಾಲಹಳ್ಳಿಯಲ್ಲಿ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ

ಖಾಸಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಂಘಟನೆ ಬದ್ಧ ನಾಗರಾಜ ಮಸ್ಕಿ

ನೀಡ್ 24 ನ್ಯೂಸ್

ದೇವದುರ್ಗ: ಜಾಲಹಳ್ಳಿ,ಸೆ.14-ರಾಯಚೂರು ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರಿ.) ವತಿಯಿಂದ ರಾಯಚೂರು ಜಿಲ್ಲಾ ಶೈಕ್ಷಣಿಕ ಸಮಾವೇಶ2026' ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ'ವನ್ನು ಸೆ.19ರಂದು ಜಾಲಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ವಕೀಲ ನಾಗರಾಜ ಮಸ್ಕಿ ತಿಳಿಸಿದರು.

ಜಾಲಹಳ್ಳಿಯ ವಿದ್ಯಾಧಾರೆ ಶಾಲೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವದುರ್ಗ ತಾಲೂಕಿನ ಜಾಲಹಳ್ಳಿಯ ಶ್ರೀ ಜಗದ್ದಾರಾಧ್ಯ ಜಯಶಾಂತಲಿಂಗೇಶ್ವರ ಸಹಕಾರ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ಸಮಾವೇಶ ನಡೆಯಲಿದೆ. ಖಾಸಗಿ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಶಿಕ್ಷಕರನ್ನು

ಗುರುತಿಸಿ, ಅವರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು, ಶಿಕ್ಷಕರ ವೃತ್ತಿಪರ ಕೌಶಲ್ಯ ವೃದ್ಧಿಸುವುದು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸುವು ಚರ್ಚಿಸುವುದು ಸಮಾವೇಶದ

ಪ್ರಮುಖ ಉದ್ದೇಶವಾಗಿದೆ. ಸಂಘಟನೆಯ ವತಿಯಿಂದ ಈಗಾಗಲೇ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳು, ಗುಣಮಟ್ಟದ ಶಿಕ್ಷಣ ಕುರಿತ ಕಾರ್ಯಾಗಾರಗಳು, ಕಾನೂನು ಅರಿವು ಸೇರಿದಂತೆ ಹಲವು ಶೈಕ್ಷಣಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಶಿಕ್ಷಣ ಕ್ಷೇತ್ರದ

ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಗಣ್ಯರ ಉಪಸ್ಥಿತಿ ಜಾಲಹಳ್ಳಿ ಮಹಾಸಂಸ್ಥಾನ ಬೃಹನ್ಮಠದ ಪರಮಪೂಜ್ಯ ಶ್ರೀ ವಿದ್ಯಾಮಾನ್ಯ ಶಿವಾಭಿನವ ಷ.ಬ್ರ. ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ತಾಲೂಕಿನ ವಿವಿಧ ಮಠಾಧೀಶರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಯಚೂರು ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಹಂಪನಗೌಡ ಬಾದರ್ಲಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಯಚೂರು ಲೋಕಸಭಾ ಸದಸ್ಯ ಜಿ. ಕುಮಾರ ನಾಯಕ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.

ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಬಸನಗೌಡ ತುರವಿಹಾಳ, ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಡಾ. ಎಸ್. ಶಿವರಾಜ ಪಾಟೀಲ್, ಮಾನಪ್ಪ ಡಿ. ವಜ್ಜಲ್, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು, ಶರಣಗೌಡ ಪಾಟೀಲ್ ಬಯ್ಯಾಪೂರ, ಎ. ವಸಂತಕುಮಾರ, ಬಸನಗೌಡ ಬಾದರ್ಲಿ ಸೇರಿದಂತೆ ಹಲವು ಜನಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದ ಗಣ್ಯರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ನಾಗರಾಜ ಮಸ್ಕಿ ತಿಳಿಸಿದರು.

ದೇವದುರ್ಗ ತಾಲೂಕಿನಲ್ಲಿ ಮೊದಲ ಬಾರಿ ಸಮಾವೇಶ ದೇವದುರ್ಗ ತಾಲೂಕು ಅಧ್ಯಕ್ಷ ಶಂಕರಲಿಂಗಯ್ಯ ಸ್ವಾಮಿ

ಮಾತನಾಡಿ, ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಆಯೋಜಿಸಲಾಗುತ್ತಿದೆ. ಇದು ಒಕ್ಕೂಟದ ನಾಲ್ಕನೇ ಜಿಲ್ಲಾ ಶೈಕ್ಷಣಿಕ ಸಮಾವೇಶವಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಸೆ.19ರಂದು ಬೆಳಗ್ಗೆ ಬಸವೇಶ್ವರ ವೃತ್ತದಿಂದ ಬಾವಚಿತ್ರದೊಂದಿಗೆ ಮೆರವಣಿಗೆ ಆರಂಭವಾಗಿ, ಅಂಬೇಡ್ಕರ್ ವೃತ್ತ, ವಾಲ್ಮೀಕಿ ವೃತ್ತದ ಮೂಲಕ ಜಗದ್ದಾರಾಧ್ಯ ಜಯಶಾಂತಲಿಂಗೇಶ್ವರ ಸಹಕಾರ ಸಭಾಭವನ ತಲುಪಲಿದೆ. ಬಳಿಕ ಸಮಾವೇಶದ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರು ಸೇರಿದಂತೆ ಸಂಘಟನೆಯಲ್ಲಿ ನೋಂದಾಯಿಸಿಕೊಂಡಿರುವ ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಹಂತದ ಶಿಕ್ಷಕರಿಗೆ ಅವರ ಸೇವೆ ಹಾಗೂ ಸಾಧನೆ ಆಧರಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಅಂತಹ ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುವ ಮೂಲಕ ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೋತ್ಸಾಹ ನೀಡುವುದು ಸಮಾವೇಶದ ಉದ್ದೇಶವಾಗಿದೆ ಎಂದು ಶಂಕರಲಿಂಗಯ್ಯ ಸ್ವಾಮಿ ಹೇಳಿದರು.

ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಪ್ರೇಮಿಗಳು, ಶಿಕ್ಷಕರು, ವಿದ್ಯಾರ್ಥಿಗಳ ಪಾಲಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಒಕ್ಕೂಟದ ಅಧ್ಯಕ್ಷ ಶಾಸಕ ಹಂಪನಗೌಡ ಬಾದರ್ಲಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಮಸ್ಕಿ, ಸ್ವಾಗತ ಸಮಿತಿ ಅಧ್ಯಕ್ಷ ಶಂಕರಲಿಂಗಯ್ಯ ಸ್ವಾಮಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ದೇಸಾಯಿ, ಮಲ್ಲಪ್ಪ ಕುಂಬಾರ, ಮಾರೆಪ್ಪ ಕೊತ್ತದೊಡ್ಡಿ, ಮಂಜುನಾಥ ಲಿಂಗಸುಗೂರು, ಮಹಿಬೂ, ಚನ್ನಪ್ಪ ಗಟ್ಟೂರು, ರಾಜಶೇಖರ ಸಂಕೇಶ್ವರಾಳ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.. ವರದಿ ವಲಿ ಖುರೇಷಿ
📲Get App