🔥 TRENDING પંડોળી ગામમાં નાવડી પલટી, પત્રકાર આસિફ... BRICS Week Highlights Alternatives to... Rajasthan United to Host Gokulam Keral... ಅಂತರ್ಜಾತೀಯ ವಿವಾಹಿತ ಮಹಿಳೆಗೆ ಬಹಿಷ್ಕಾರ ಅಖ... CM Dr. Mohan Yadav inaugurates BJP's n... Indore Food Dept Bans Sale of 600kg Ma...
06 Nov 2026•
ગુજરાતી मराठी ਪੰਜਾਬੀ বাংলা

ಜನಗಣತಿ-2027 ಎರಡನೇ ಹಂತದ ಜನಸಂಖ್ಯೆ ಗಣತಿಗೆ 2 ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟನೆ - ಡಿಜಿಟಲ್ ವಿಧಾನದಲ್ಲಿ ನಿಖರ, ಪಾರದರ್ಶಕ ದತ್ತಾಂಶ ಸಂಗ್ರಹಕ್ಕೆ ಜಿಲ್ಲಾಧಿಕಾರಿ ಪೂವಿತಾ ಎಸ್. ಸೂಚನೆ

✍️ Reporter: Ningappa 🗓 06 Nov 2026, 10:28 PM 👁 10
Share: 💬 WhatsApp 📘 Facebook 𝕏 Post

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನಗಣತಿ-2027 ಎರಡನೇ ಹಂತದ ಜನಸಂಖ್ಯೆ ಗಣತಿ ಕಾರ್ಯಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2 ದಿನಗಳ ತರಬೇತಿ ಕಾರ್ಯಾಗಾರ - ಜಿಲ್ಲಾಧಿಕಾರಿ ಪೂವಿತಾ ಎಸ್. ಉದ್ಘಾಟನೆ - ಪ್ರಥಮ ಬಾರಿಗೆ ಡಿಜಿಟಲ್ ವಿಧಾನದಲ್ಲಿ ಜನಗಣತಿ, ನಿಖರ ಮಾಹಿತಿ ಸಂಗ್ರಹಕ್ಕೆ ಸೂಚನೆ

ಜನಗಣತಿ-2027 ಎರಡನೇ ಹಂತದ ಗಣತಿಗೆ 2 ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟನೆ

ರಾಯಚೂರು: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಗಣತಿ-2027ರ ಎರಡನೇ ಹಂತದ ಜನಸಂಖ್ಯೆ ಗಣತಿ ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗಾಗಿ ಆಯೋಜಿಸಲಾಗಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜನಗಣತಿಯು ದೇಶದ ಅಭಿವೃದ್ಧಿ ಯೋಜನೆಗಳ ರೂಪಣೆ ಹಾಗೂ ಅನುಷ್ಠಾನಕ್ಕೆ ಅಗತ್ಯವಿರುವ ಸಮಗ್ರ ಮತ್ತು ನಿಖರ ದತ್ತಾಂಶ ಒದಗಿಸುವ ಮಹತ್ವದ ಕಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಗತ್ಯ ತರಬೇತಿ ಪಡೆದು, ಸಂಪೂರ್ಣ ಜವಾಬ್ದಾರಿ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ದೇಶದಲ್ಲಿ ಪ್ರಥಮ ಬಾರಿಗೆ ಡಿಜಿಟಲ್ ವಿಧಾನದ ಮೂಲಕ ಜನಗಣತಿ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಾಂತ್ರಿಕ ಪ್ರಕ್ರಿಯೆಗಳ ಕುರಿತು ಸಮಗ್ರ ಅರಿವು ಹೊಂದಿರಬೇಕು. ಪ್ರತಿಯೊಂದು ಕುಟುಂಬದ ಮಾಹಿತಿಯನ್ನು ನಿಖರವಾಗಿ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪದೋಷಗಳಿಗೆ ಅವಕಾಶವಿಲ್ಲದಂತೆ ಸಂಗ್ರಹಿಸಬೇಕು ಎಂದು ಸೂಚಿಸಿದರು.

ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು, ಕ್ಷೇತ್ರಮಟ್ಟದಲ್ಲಿ ಜನಗಣತಿ ಕಾರ್ಯವನ್ನು ಸುಗಮವಾಗಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
📲Get App