🔥 TRENDING चंद्रपूरमध्ये पोलीस अधीक्षक आयुष नोपान... Jammu & Kashmir Forecasts Lower Peak P... J&K High Court Transfers 84 Judicial O... Six Nehru-era Decisions Identified as... International Film Festival of India i... CJP to Kick Off ‘Kya Bolti Public’ Cam...
19 Nov 2026•
ગુજરાતી मराठी ਪੰਜਾਬੀ বাংলা

ನ. 22ರೊಳಗೆ ಕಾಲುವೆಗೆ ನೀರು ಹರಿಸದಿದ್ದರೆ ರಾಯಚೂರು ಜಿಲ್ಲಾ ಬಂದ್: ರೈತ ಸಂಘದ ಎಚ್ಚರಿಕೆ

✍️ Reporter: Khaja Hussain 🗓 19 Nov 2026, 09:37 PM 👁 31
Watch on: 📘 Facebook
Share: 💬 WhatsApp 📘 Facebook 𝕏 Post
**ದೇವದುರ್ಗ ಬ್ರೇಕಿಂಗ್ ನ್ಯೂಸ್**

# ನ. 22ರೊಳಗೆ ಕಾಲುವೆಗೆ ನೀರು ಹರಿಸದಿದ್ದರೆ ರಾಯಚೂರು ಜಿಲ್ಲಾ ಬಂದ್: ರೈತ ಸಂಘದ ಎಚ್ಚರಿಕೆ

### ನೀರು ಬಿಡದಿದ್ದರೆ ರಾಜ್ಯ ಹೆದ್ದಾರಿಯಲ್ಲಿ ಅಹೋರಾತ್ರಿ ಧರಣಿ; ಗೋಲಿಬಾರ್‌ಗೂ ಹೆದರುವುದಿಲ್ಲ ಎಂದ ಪ್ರಭಾಕರ ಪಾಟೀಲ ಇಂಗಳದಾಳ

**ದೇವದುರ್ಗ:** ನವೆಂಬರ್ 22ರೊಳಗೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದಿದ್ದರೆ ರಾಯಚೂರು ಜಿಲ್ಲೆ ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು. ಸರ್ಕಾರ ಗೋಲಿಬಾರ್ ನಡೆಸಿದರೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ, ರಾಜ್ಯ ಹೆದ್ದಾರಿಯ ಮೇಲೆಯೇ ವಾಸ್ತವ್ಯ ಹೂಡಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ ಇಂಗಳದಾಳ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಭಾಗದ ರೈತರು ಎದುರಿಸುತ್ತಿರುವ ನೀರಿನ ಸಮಸ್ಯೆ ಹಾಗೂ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸಭೆ ನಡೆದಾಗಿನಿಂದಲೂ ರೈತರಿಗೆ ನೀರು ಹರಿಸುವಂತೆ ನಿರಂತರವಾಗಿ ಒತ್ತಾಯಿಸುತ್ತಿದ್ದೇವೆ. ಆದರೆ, ಈ ಭಾಗದ ರೈತರಿಗೆ ನೀರು ನೀಡಲು ಸರ್ಕಾರ ಹಿಂದೇಟು ಹಾಕುತ್ತಿದ್ದು, ಈಗಾಗಲೇ ನೆರೆಯ ತೆಲಂಗಾಣ ರಾಜ್ಯಕ್ಕೆ 10 ಟಿಎಂಸಿ ನೀರು ಹರಿಸಿರುವುದು ಇಲ್ಲಿನ ರೈತರಿಗೆ ಮಾಡಿದ ಅನ್ಯಾಯವಾಗಿದೆ ಎಂದು ಆರೋಪಿಸಿದರು.

**ಮುಖ್ಯಮಂತ್ರಿಗಳ ಭರವಸೆ:**

ನೀರಾವರಿ ಸಮಸ್ಯೆ ಕುರಿತು ಇದೇ ತಿಂಗಳ 14ರಂದು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದು, ಅವರು ನೀರು ಹರಿಸುವ ಭರವಸೆ ನೀಡಿದ್ದಾರೆ. ರೈತರ ಹಿತದೃಷ್ಟಿಯಿಂದ ವಿವಿಧ ರೈತ ಸಂಘಟನೆಗಳು ಒಗ್ಗೂಡಿ ಶಹಾಪುರ ತಾಲೂಕಿನ ಭೀಮರಾಯನಗುಡಿ (ಬಿ.ಗುಡಿ) ಬಾಪೂಗೌಡ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಿ ಸರ್ಕಾರದ ಗಮನ ಸೆಳೆದಿದ್ದೇವೆ ಎಂದರು.

ಕಾಲುವೆ ನೀರನ್ನು ನಂಬಿಕೊಂಡು ರೈತರು ಈಗಾಗಲೇ ಮೆಣಸಿನಕಾಯಿ ಬಿತ್ತನೆ ಮಾಡಿದ್ದು, ಬೀಜ, ಗೊಬ್ಬರ, ಔಷಧ ಸೇರಿದಂತೆ ಪ್ರತಿ ಎಕರೆಗೆ ಸುಮಾರು ₹1.50 ಲಕ್ಷದವರೆಗೆ ಖರ್ಚು ಮಾಡಿದ್ದಾರೆ. ಇದೀಗ ಬೆಳೆಗಳಿಗೆ ನೀರಿನ ತೀವ್ರ ಅವಶ್ಯಕತೆ ಇದ್ದು, ನೀರು ಹರಿಸದಿದ್ದರೆ ಬೆಳೆ ಒಣಗಿ ರೈತರು ಸಾಲದ ಸುಳಿಗೆ ಸಿಲುಕುವ ಆತಂಕ ಎದುರಾಗಿದೆ. ಆದ್ದರಿಂದ ಬೆಳೆ ಉಳಿಸಲು ಜನವರಿ ತಿಂಗಳವರೆಗೂ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ನವೆಂಬರ್ 22ರೊಳಗೆ ಸರ್ಕಾರ ಕಾಲುವೆಗಳಿಗೆ ನೀರು ಹರಿಸಿದರೆ ಸ್ವಾಗತಿಸಲಾಗುವುದು. ಇಲ್ಲವಾದಲ್ಲಿ ರಾಯಚೂರು ಜಿಲ್ಲಾ ಬಂದ್‌ಗೆ ಕರೆ ನೀಡಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಹಾಜಿ ಮಸ್ತಾನಸಾಬ್ ಬಿ. ಗಣೇಕಲ್, ಮುಖಂಡರಾದ ಹನುಮಗೌಡ ಜಾಲಹಳ್ಳಿ, ಉಮ್ಮಣ್ಣ ಮಲದಕಲ್ ಸೇರಿದಂತೆ ಹಲವು ರೈತ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಖಾಜಾ ಹುಸೇನ್ ಬಾಬಾ
ಜಾಲಹಳ್ಳಿ
📲Get App