ನವೆಂಬರ್ .25 ರಂದು ಜಾಲಹಳ್ಳಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡಿಗರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಗೆ ಕರವೇ ಮುಖಂಡರಿಂದ ಆಹ್ವಾನ; ವಿವಿಧ ವೃತ್ತಗಳ ಮೂಲಕ ಕನ್ನಡಾಭಿಮಾನಿಗಳ ಮೆರವಣಿಗೆ
ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್
### ನವೆಂಬರ್ .25 ರಂದು ಜಾಲಹಳ್ಳಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
### ಕನ್ನಡಿಗರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಗೆ ಕರವೇ ಮುಖಂಡರಿಂದ ಆಹ್ವಾನ; ವಿವಿಧ ವೃತ್ತಗಳ ಮೂಲಕ ಕನ್ನಡಾಭಿಮಾನಿಗಳ ಮೆರವಣಿಗೆ
ಜಾಲಹಳ್ಳಿ, ನ.23: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ನವೆಂಬರ್ 25ರಂದು 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ದೇವದುರ್ಗ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಸೋಮವಾರ ಜಾಲಹಳ್ಳಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಅಂದು ಬೆಳಿಗ್ಗೆ 10.30 ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಆರಂಭಗೊಂಡು ಭಗೀರಥ ವೃತ್ತ, ಶ್ರೀ ಲಕ್ಷ್ಮೀರಂಗನಾಥ ದೇವಸ್ಥಾನ ಹಾಗೂ ವಾಲ್ಮೀಕಿ ವೃತ್ತದ ಮೂಲಕ ಸಂಚರಿಸಿ ಸಮುದಾಯ ಆರೋಗ್ಯ ಕೇಂದ್ರದ ಸಮೀಪದ ಧ್ವಜ ಕಟ್ಟೆಯ ಬಳಿ ತಲುಪಲಿದೆ. ಅಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಮಾತನಾಡಿ, ಸಮಸ್ತ ಕನ್ನಡಿಗರು, ನಾಡಿನ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗುರು-ಹಿರಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡದ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು ಎಂದು ಆತ್ಮೀಯವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕರವೇ ದೇವದುರ್ಗ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಹೆರುಂಡಿ, ಭೀಮರಾಯ ಮಕಾಶಿ, ವಿಕಲಚೇತನರ ಹೋಬಳಿ ಅಧ್ಯಕ್ಷ ರಂಗಪ್ಪ ಬಂಡಿ, ಯುವ ಮುಖಂಡ ಭೀಮಣ್ಣ ನಾಯಕ, ದೇವದುರ್ಗ ತಾಲೂಕು ಸಂಚಾಲಕ ವೆಂಕಟೇಶ, ಹೋಬಳಿ ಉಪಾಧ್ಯಕ್ಷ ಅಮರೇಶ, ಮಲ್ಲು ಹಡಪದಿ, ಗುರುನಾಥ ರೆಡ್ಡಿ, ತಾಲೂಕು ಪ್ರಧಾನ ಕಾರ್ಯದರ್ಶಿ ಸೇರಿದಂತೆ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಖಾಜಾ ಹುಸೇನ್ ಬಾಬಾ
ಜಾಲಹಳ್ಳಿ