🔥 TRENDING Baraita Resident Wins ₹1.5 Crore Lotte... Patna traffic plan for Chhath Puja 202... બનાસકાંઠા ગોતરકા માં ભાઈબીજના દિવસે ૧૧... ବଢ଼ିଲା ଯୁକ୍ତ ୨ ଫର୍ମ ପୂରଣ ତାରିଖ सह्याद्रीच्या कुशीतील मुरबाड शहरात मनस... પાટણ જિલ્લામાં સાતલપુર તાલુકાના મઢુત્ર...
12 Nov 2026•
ગુજરાતી मराठी ਪੰਜਾਬੀ বাংলা

ನಿವಾಸಿಗಳ ಮನವಿಗೆ ಸ್ಪಂದಿಸಿದ ಗ್ರಾ.ಪಂ. ಅಧಿಕಾರಿಗಳು - ಟ್ಯಾಂಕರ್ ಮೂಲಕ ನೀರು ಪೂರೈಕೆ - ಜಾಲಹಳ್ಳಿ 5ನೇ ವಾರ್ಡ್ನಲ್ಲಿ ಐದು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

✍️ Reporter: Ningappa 🗓 12 Nov 2026, 12:43 PM 👁 10
Share: 💬 WhatsApp 📘 Facebook 𝕏 Post

ಜಾಲಹಳ್ಳಿ 5ನೇ ವಾರ್ಡ್ನಲ್ಲಿ ಐದು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ - ನಿವಾಸಿಗಳ ಮನವಿಗೆ ಸ್ಪಂದಿಸಿದ ಗ್ರಾ.ಪಂ. ಅಧಿಕಾರಿಗಳು - ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ - ಗ್ರಾ.ಪಂ ಸದಸ್ಯೆ ರಜಿಯಾ ಬೇಗಂ ನೇತೃತ್ವದಲ್ಲಿ ಮನವಿ - ನೀರಿನ ಸಮಸ್ಯೆಯಿಂದ ನಿವಾಸಿಗಳಿಗೆ ಕೊಂಚ ನಿರಾಳತೆ

ರಾಯಚೂರು: ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡ್ನಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದೆ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ವಾರ್ಡ್ನಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಸಾರ್ವಜನಿಕರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸಮರ್ಪಕವಾಗಿ ನೀರು ಪೂರೈಸುವಂತೆ ಗ್ರಾಮ ಪಂಚಾಯಿತಿ ಸದಸ್ಯೆ ರಜಿಯಾ ಬೇಗಂ ಹೈದರ್ ಸಾಬ್ ಉದ್ದಾರ್ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಳೆದ ಐದು ದಿನಗಳಿಂದ ನೀರು ಪೂರೈಕೆಯಾಗದ ಕಾರಣ ಮನೆಗಳ ದೈನಂದಿನ ಚಟುವಟಿಕೆಗಳಿಗೂ ತೊಂದರೆಯಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ನೀರು ಪೂರೈಸಬೇಕು ಎಂದು ವಾರ್ಡ್ ನಿವಾಸಿಗಳು ಒತ್ತಾಯಿಸಿದ್ದರು.

ವಾರ್ಡ್ ನಿವಾಸಿಗಳ ಮನವಿಗೆ ಸ್ಪಂದಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಮೂಲಕ 5ನೇ ವಾರ್ಡ್ನಲ್ಲಿ ಕುಡಿಯುವ ನೀರು ಪೂರೈಕೆ ಮಾಡಿದರು. ಇದರಿಂದ ನಿವಾಸಿಗಳಿಗೆ ತಾತ್ಕಾಲಿಕವಾಗಿ ನೀರಿನ ಸಮಸ್ಯೆಯಿಂದ ಕೊಂಚ ನಿರಾಳತೆ ದೊರೆತಿದೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರೇಶ್ ಅರಕೇರಾ, ಸದಸ್ಯ ಶಿವಪ್ಪ ನಾಯಕ ಗಾಂಜಿ, ಮುಖಂಡರಾದ ಹುಸೇನ್ ನಾಸಿ, ರಂಗಪ್ಪ ತೊಗರಿ, ಅಮೀರ್ ಪಟೇಲ್, ಆರಿಫ್, ಮುಬಾರಕ್ ಆಗವಾಯಿ, ರಾಜ್ ಮೊಹಮ್ಮದ್ ಸೇರಿದಂತೆ 5ನೇ ವಾರ್ಡ್ನ ಮಹಿಳೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
📲Get App