🔥 TRENDING सुमेरपुर पंचायत समिति की नवगठित ग्राम... ದೇವದುರ್ಗದಲ್ಲಿ ಕಾಟಾಚಾರಕ್ಕೆ ರಾಜ್ಯೋತ್ಸವ ಆ... चतरा में जेटेट-2026 परीक्षा शांतिपूर्ण... रैम्पूर, मथुरा सोहरीया: सड़क घोटाले मे... दिल्ली के रामलीला मैदान में INDIA गठबं... विद्या ज्योति स्कूल के संस्थापक तरुण म...
01 Nov 2026•
ગુજરાતી मराठी ਪੰਜਾਬੀ বাংলা

ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಮೌಲಾನಾ ಆಜಾದ್ ಶಾಲೆ ನಿರ್ಮಾಣಕ್ಕೆ ವಿರೋಧ: ಸಾರ್ವಜನಿಕರ ಆಕ್ರೋಶ

✍️ Reporter: Khaja Hussain 🗓 01 Nov 2026, 09:09 PM 👁 13
Share: 💬 WhatsApp 📘 Facebook 𝕏 Post
**ದೇವದುರ್ಗ | ಬ್ರೇಕಿಂಗ್ ನ್ಯೂಸ್**

# ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಮೌಲಾನಾ ಆಜಾದ್ ಶಾಲೆ ನಿರ್ಮಾಣಕ್ಕೆ ವಿರೋಧ: ಸಾರ್ವಜನಿಕರ ಆಕ್ರೋಶ

### ಮಕ್ಕಳಿಗೆ ಸಾರಿಗೆ ಸಮಸ್ಯೆಯಾಗುವ ಆತಂಕ; ಪಟ್ಟಣದ ವ್ಯಾಪ್ತಿಯಲ್ಲಿಯೇ ಶಾಲೆ ನಿರ್ಮಿಸುವಂತೆ ಖಾಜಾ ಪಾಷ ಆಗ್ರಹ

**ದೇವದುರ್ಗ, ನ. 1:** ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಗೌರಂಪೇಟೆ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೌಲಾನಾ ಆಜಾದ್ ಶಾಲೆಯನ್ನು ಪಟ್ಟಣದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿ ನಿರ್ಮಿಸಲು ಮುಂದಾಗಿರುವುದಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಶಾಲೆಯನ್ನು ಪಟ್ಟಣದಿಂದ ದೂರದಲ್ಲಿ ನಿರ್ಮಿಸಿದರೆ ಪ್ರತಿನಿತ್ಯ ಶಾಲೆಗೆ ತೆರಳುವ ಮಕ್ಕಳಿಗೆ ಸಾರಿಗೆ ಹಾಗೂ ಸಂಚಾರದ ಸಮಸ್ಯೆ ಎದುರಾಗಲಿದೆ. ವಿಶೇಷವಾಗಿ ಚಿಕ್ಕ ಮಕ್ಕಳು ಶಾಲೆಗೆ ಹೋಗಿ ಬರಲು ತೊಂದರೆಯಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷ ಖಾಜಾ ಪಾಷ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಮಕ್ಕಳ ಶಿಕ್ಷಣ ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮೌಲಾನಾ ಆಜಾದ್ ಶಾಲೆಯನ್ನು ಪಟ್ಟಣದ ವ್ಯಾಪ್ತಿಯಲ್ಲಿಯೇ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ದೇವದುರ್ಗ ಮತಕ್ಷೇತ್ರದ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು. ಮಕ್ಕಳಿಗೆ ಅನುಕೂಲವಾಗುವ ಸ್ಥಳದಲ್ಲಿ ಶಾಲೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಖಾಜಾ ಪಾಷ ಸೇರಿದಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App