ಅಂಕುಶದೊಡ್ಡಿ ಸರ್ಕಾರಿ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಸಿ.ಜಿ.ಐ ಮತ್ತು ಇಂಡಿವಿಲೇಜ್ ಫೌಂಡೇಶನ್ ಸಹಯೋಗದಲ್ಲಿ 6 ಉಚಿತ ಲ್ಯಾಪ್ಟಾಪ್ ವಿತರಣೆ
ರಾಯಚೂರು/: ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿ.ಜಿ.ಐ ಸಂಸ್ಥೆ ಹಾಗೂ ಇಂಡಿವಿಲೇಜ್ ಫೌಂಡೇಶನ್ ಸಹಯೋಗದಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಗೆ ಆರು ಲ್ಯಾಪ್ಟಾಪ್ಗಳನ್ನು ಉಚಿತವಾಗಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಇಂಡಿವಿಲೇಜ್ ಫೌಂಡೇಶನ್ನ ಕಾರ್ಯಕ್ರಮ ಸಂಯೋಜಕಿ ಸುಪ್ರಿಯಾ ಕಟೇಕರ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಡಿಜಿಟಲ್ ಶಿಕ್ಷಣ ತಲುಪಿಸುವ ಉದ್ದೇಶದಿಂದ ಸಂಸ್ಥೆಯ ವತಿಯಿಂದ ಉಚಿತವಾಗಿ ಲ್ಯಾಪ್ಟಾಪ್ಗಳನ್ನು ವಿತರಿಸಲಾಗುತ್ತಿದೆ. ಕಂಪ್ಯೂಟರ್ ಲ್ಯಾಬ್ ಸ್ಥಾಪನೆಯಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಬಳಕೆಯ ಪ್ರಾಯೋಗಿಕ ಜ್ಞಾನ, ಡಿಜಿಟಲ್ ಕೌಶಲ್ಯ ಹಾಗೂ ತಂತ್ರಜ್ಞಾನ ಆಧಾರಿತ ಕಲಿಕೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಾಂತ್ರಿಕ ಜ್ಞಾನ ಅತ್ಯಂತ ಅವಶ್ಯಕವಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳಿಗೂ ನಗರ ಪ್ರದೇಶದ ವಿದ್ಯಾರ್ಥಿಗಳಂತೆ ಡಿಜಿಟಲ್ ಶಿಕ್ಷಣದ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಿ.ಜಿ.ಐ ಮತ್ತು ಇಂಡಿವಿಲೇಜ್ ಫೌಂಡೇಶನ್ ನಿರಂತರವಾಗಿ ಶ್ರಮಿಸುತ್ತಿವೆ ಎಂದರು.
ಈ ಸಂದರ್ಭದಲ್ಲಿ ಶಾಲೆಗೆ ಆರು ಲ್ಯಾಪ್ಟಾಪ್ಗಳನ್ನು ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಇಂದಿರಾಬಾಯಿ, ಎಸ್ಡಿಎಂಸಿ ಅಧ್ಯಕ್ಷ ಶೇಖಪ್ಪ ಕಟಗಲ್, ಸಿಆರ್ಪಿ ಪರಶುರಾಮ್ ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕರು, ಇಂಡಿವಿಲೇಜ್ ಫೌಂಡೇಶನ್ ಸಿಬ್ಬಂದಿಗಳಾದ ಮೌನೇಶ, ನಾಗರಾಜ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.