🔥 TRENDING ರಾಯಚೂರು ಐಬಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರ... मलारना डूंगर पंचायत चुनाव में कांग्रेस... जालौर के काकरिया वास में बाबा खाटू श्य... एकादशी के पावन अवसर पर खाटू श्याम मंदि... ಜಿಲ್ಲಾ ಸವಿತಾ ಸಮಾಜದ ನೂತನ ಅಧ್ಯಕ್ಷರಾಗಿ ನಾ... NBCC India Donates CSR-Funded Medical...
20 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನಲ್ಲಿ ಮಿಶನ್ 60+ ಕಾರ್ಯಾಗಾರ ಉದ್ಘಾಟನೆ - ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.100 ಫಲಿತಾಂಶ ಗುರಿ - ಹಿಂದುಳಿದ ಮಕ್ಕಳಿಗೆ ವಿಶೇಷ ಆದ್ಯತೆ

✍️ Reporter: Ningappa 🗓 20 Nov 2026, 09:27 PM 👁 14
Share: 💬 WhatsApp 📘 Facebook 𝕏 Post

ರಾಯಚೂರಿನಲ್ಲಿ ಮಿಶನ್ 60+ ಕಾರ್ಯಾಗಾರ ಉದ್ಘಾಟನೆ - ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.100 ಫಲಿತಾಂಶ ಗುರಿ - ರಾಯಚೂರು, ಯಾದಗಿರಿ ಜಿಲ್ಲೆಗಳ ಅಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕರಿಗೆ ವಿಶೇಷ ತರಬೇತಿ - ಹೆಚ್ಚುವರಿ ತರಗತಿಗಳಿಂದ ಉತ್ತಮ ಫಲಿತಾಂಶ - ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಅಂಕ ಗಳಿಸಲಿ ಎಂದು ಸೂಚನೆ

ರಾಯಚೂರು: ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 100 ರಷ್ಟು ಫಲಿತಾಂಶ ಸಾಧಿಸುವ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಆದ್ಯತೆ ನೀಡುವ ಸಂಬಂಧದ ಮಿಶನ್ 60+ ಎಂಬ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.

ಈ ಕಾರ್ಯಾಗಾರದಲ್ಲಿ ಕಲಬುರಗಿ ವಿಭಾಗದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ, ಪ್ರಾಂಶುಪಾಲರಿಗೆ, ಸಂಪನ್ಮೂಲ ವ್ಯಕ್ತಿಗಳಿಗೆ ಮತ್ತು ತಾಲ್ಲೂಕುಗಳ ಎಲ್ಲಾ ಮಾಧ್ಯಮ ಹಾಗೂ ಎಲ್ಲಾ ವಿಷಯಗಳ ತಾಲ್ಲೂಕು ಸಂಪನ್ಮೂಲ ವ್ಯಕ್ತಿಗಳಿಗೆ / ಶಿಕ್ಷಕರಿಗೆ ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿಯನ್ನು ನೀಡಲಾಗುತ್ತಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ವಿಶೇಷ ಆಸಕ್ತಿ ವಹಿಸಿ ಹೆಚ್ಚುವರಿ ತರಗತಿಗಳನ್ನು ನಡೆಸಿ, ಮಕ್ಕಳಿಗೆ ಕಲಿಕೆಗೆ ಪೂರಕವಾದ ಅವಕಾಶಗಳನ್ನು ಕಲ್ಪಿಸಿದ ಪರಿಣಾಮ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವಾಗಿದೆ. ಈ ಬಾರಿಯೂ ಅದೇ ಬದ್ಧತೆ ಮತ್ತು ಪರಿಶ್ರಮದೊಂದಿಗೆ ಕಾರ್ಯನಿರ್ವಹಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಅಂಕ ಗಳಿಸುವಂತೆ ಸಿದ್ಧಪಡಿಸಬೇಕು. ಶೇ.100ರಷ್ಟು ಫಲಿತಾಂಶ ಸಾಧಿಸುವ ಗುರಿಯನ್ನು ಎಲ್ಲರೂ ಹೊಂದಬೇಕು ಎಂದು ಸೂಚಿಸಿದೆ. ಶಿಕ್ಷಕರು ಮತ್ತು ಅಧಿಕಾರಿಗಳು ಮುಕ್ತ ಮನಸ್ಸಿನಿಂದ ಸಹಕರಿಸಿ ಮಿಷನ್-60+ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದರ ಜತೆಗೆ ಅವರಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂದು ಹೇಳಿದೆ.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಎಸ್. ಭರತ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಅವಿನಾಶ್ ಶಿಂಧೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕಿ ಅನಿತಾ ನಜಾರೆ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕಿ ಮಂಗಳ ನಾಯಕಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
📲Get App