🔥 TRENDING સરપંચ, તલાટી અને ટીડીઓની હાજરીમાં દુકા... पंचायत चुनाव 2026 के तृतीय चरण के मध्य... JTET 2026 में प्रश्नपत्र चोरी का मामला... ખેડૂત પરિવારોના યુવાનો દ્વારા સંચાલિત... भाजपा प्रदेश अध्यक्ष मदन राठौड़ ने मां... मुख्यमंत्री रेखा गुप्ता ने उत्तराखंड क...
01 Nov 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

✍️ Reporter: Khaja Hussain 🗓 01 Nov 2026, 08:45 PM 👁 19
Share: 💬 WhatsApp 📘 Facebook 𝕏 Post
**ಜಾಲಹಳ್ಳಿ | ಬ್ರೇಕಿಂಗ್ ನ್ಯೂಸ್**

# ಜಾಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

### ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ; ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಯಲು ಕರವೇ ಮುಖಂಡರ ಆಗ್ರಹ

**ಜಾಲಹಳ್ಳಿ, ನ. 1:** ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವವನ್ನು ನ. 1ರಂದು ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮಂತಿ ಶಿವಬಸಪ್ಪ ರಾಮ ಪಾಳಿ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಹಮಾನ್ ಖುರೇಶಿ ಅವರು, 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ನೇತೃತ್ವದಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಕರ್ನಾಟಕದ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ಬೆಳವಣಿಗೆಯಲ್ಲಿ ಹಲವು ಮಹನೀಯರ ಕೊಡುಗೆ ಮಹತ್ವದ್ದಾಗಿದೆ. ಕರ್ನಾಟಕ ಏಕೀಕರಣಕ್ಕಾಗಿ ಆಲೂರು ವೆಂಕಟರಾಯರು ಸೇರಿದಂತೆ ಅನೇಕ ಹೋರಾಟಗಾರರು ಶ್ರಮಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪತ್ರಕರ್ತ ಖಾಜಾ ಹುಸೇನ್ ಬಾಬಾ ಅವರು, ದೇಶಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಸೇರಿದಂತೆ ಅನೇಕ ಮಹಾನ್ ಸಾಹಿತಿಗಳು, ಕವಿಗಳು ಹಾಗೂ ಕಲಾವಿದರನ್ನು ನಾಡು ದೇಶಕ್ಕೆ ನೀಡಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಗೌರವಗಳನ್ನು ಪಡೆದ ಕನ್ನಡಿಗರು ನಮ್ಮ ನಾಡಿನ ಹೆಮ್ಮೆ. ಇಂತಹ ಶ್ರೀಮಂತ ಪರಂಪರೆಯನ್ನು ಹೊಂದಿರುವ ಕರ್ನಾಟಕದ ಕನ್ನಡ ಭಾಷೆ, ಸಂಸ್ಕೃತಿ ಮತ್ತು ನೆಲದ ಗೌರವವನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇಕು ಎಂದು ಹೇಳಿದರು.

ಬಾಕ್ಸ್ ನಲ್ಲಿ

ಕರವೇ ತಾಲೂಕು ಅಧ್ಯಕ್ಷ ಹಾಗೂ ಮುಖಂಡ ನಂದಪ್ಪ ಪಿ. ಮಡ್ಡಿ ಮಾತನಾಡಿ, ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಇರುವ ಅಂಗಡಿ-ಮುಂಗಟ್ಟುಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಯುವಂತೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

**ಕಾರ್ಯಕ್ರಮದಲ್ಲಿ ಉಪಸ್ಥಿತಿ:**

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮಂತಿ ಶಿವಬಸಪ್ಪ ರಾಮ ಪಾಳಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿ ಅಷ್ಟಗಿ, ಉಪಾಧ್ಯಕ್ಷ ವೀರೇಶ ಅರಕೇರಾ, ಗ್ರಾಮ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಮಾನ್, ತಿಮ್ಮಣ್ಣ ನಾಯಕ ದಿವಾನ್, ಕರವೇ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ, ವೀರೇಶ ಗೌಳಿ, ದುರುಗಪ್ಪ ರಾಮ ಪಾಳಿ, ಆಂಜನೇಯ ರಾಮ ಪಾಳಿ, ವೆಂಕೋಬ ಬಿಲ್ ಕಲೆಕ್ಟರ್, ಮುದರಂಗ ರಾಯಪ್ಪ, ಬಸವರಾಜ್, ಸೋಹೇಲ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.

ಬಾಕ್ಸ್ ನಲ್ಲಿ

**33 ಸದಸ್ಯರ ಪೈಕಿ ಕೇವಲ ನಾಲ್ವರು ಹಾಜರು!**

ಜಾಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 33 ಸದಸ್ಯರಿದ್ದು, 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಕೇವಲ ನಾಲ್ವರು ಸದಸ್ಯರು ಮಾತ್ರ ಹಾಜರಾಗಿದ್ದರು. ನಾಡಹಬ್ಬದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಜನಪ್ರತಿನಿಧಿಗಳು ಗೈರಾಗಿರುವುದು ಸಾರ್ವಜನಿಕರ ಗಮನ ಸೆಳೆಯಿತು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App