🔥 TRENDING Delhi's AQI spikes to 331 on Nov 3, wi... Firecrackers sold openly in Delhi even... Amritsar Police Bust Weapons and Drug... ભારતના વધતા ફ્રી ટ્રેડ એગ્રીમેન્ટ નેટવ... Delhi Police Suspends ACP Manasvi Vash... Delhi High Court Declines Suo Motu Rev...
03 Nov 2026•
ગુજરાતી मराठी ਪੰਜਾਬੀ বাংলা

ದೇವದುರ್ಗದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ - ಅಗೌರವ ತೋರಿದವರ ವಿರುದ್ಧ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ್ರು ಬಣ) ಆಗ್ರಹ - ತಹಶೀಲ್ದಾರ್ ಗೆ ಮನವಿ

✍️ Reporter: Ningappa 🗓 03 Nov 2026, 05:22 PM 👁 11
Share: 💬 WhatsApp 📘 Facebook 𝕏 Post

ದೇವದುರ್ಗ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ನಿರ್ಲಕ್ಷ್ಯ, ಕನ್ನಡ ಬಾವುಟಕ್ಕೆ ಅಗೌರವ ತೋರಿದ ಆರೋಪ - ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ, ಅಮಾನತು ಶಿಫಾರಸಿಗೆ ಆಗ್ರಹಿಸಿ ತಹಶೀಲ್ದಾರ್ ಗೆ ಕರ್ನಾಟಕ ರಕ್ಷಣಾ ವೇದಿಕೆ ದೇವದುರ್ಗ ತಾಲೂಕು ಘಟಕದಿಂದ ಮನವಿ

ದೇವದುರ್ಗದಲ್ಲಿ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ ಆರೋಪ - ಕ್ರಮಕ್ಕೆ ಕರವೇ ಆಗ್ರಹ

ದೇವದುರ್ಗ, ನ. 3: 71ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಗೌರವ ತೋರಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ್ರು ಬಣ), ತಾಲೂಕು ಘಟಕ, ದೇವದುರ್ಗ ಹಾಗೂ ಜಾಲಹಳ್ಳಿ ಹೋಬಳಿ ಘಟಕದ ವತಿಯಿಂದ ತಹಶೀಲ್ದಾರ್, ದೇವದುರ್ಗ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಗಿದೆ.

ಮನವಿಯಲ್ಲಿ ತಿಳಿಸಿರುವಂತೆ, ಮೇಲ್ನೋಟ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ್ರು ಬಳಗ ದೇವದುರ್ಗ ತಾಲೂಕು ಘಟಕ ಹಾಗೂ ಜಾಲಹಳ್ಳಿ ಹೋಬಳಿ ಘಟಕದ ಪದಾಧಿಕಾರಿಗಳು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಗ್ರಾಮ ಪಂಚಾಯಿತಿ,ಜಾಲಹಳ್ಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ, 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸರ್ಕಾರದ ಮಾರ್ಗಸೂಚಿ ಹಾಗೂ ಆದೇಶಗಳಿದ್ದರೂ, ಸಂಘದ ವತಿಯಿಂದ ರಾಜ್ಯದಾದ್ಯಂತ ಸ್ವಾಭಿಮಾನಕ್ಕಾಗಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದಾಗ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಲಾಗಿದೆ.

ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಭಾಷೆಯ ಗೌರವದ ಸಂಕೇತವಾಗಿರುವ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಗೌರವ ತೋರುವುದು ಕನ್ನಡಪರ ಸಂಘಟನೆಗಳಿಗೆ ತೀವ್ರ ನೋವುಂಟು ಮಾಡಿದೆ. ಆದ್ದರಿಂದ, ಈ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ, ಕರ್ತವ್ಯ ಲೋಪ ಎಸಗಿರುವ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜವಾಬ್ದಾರಿಯುತ ವ್ಯಕ್ತಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರೆಂದು ಸಾಬೀತಾದಲ್ಲಿ ಅಮಾನತುಗೊಳಿಸುವಂತೆ ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ ಹಾಗೂ ಜಾಲಹಳ್ಳಿ ಹೋಬಳಿ ಘಟಕವು ಆಗ್ರಹಿಸಿದೆ.

ಕನ್ನಡ ರಾಜ್ಯೋತ್ಸವದಂತಹ ಮಹತ್ವದ ಕಾರ್ಯಕ್ರಮಕ್ಕೆ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅಗೌರವ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಮ್ರವಾಗಿ ಮನವಿ ಮಾಡಿಕೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಗುರುನಾಥರೆಡ್ಡಿ ಎಮ್ (ತಾ. ಕಾರ್ಯದರ್ಶಿ), ಭೀಮೇಶ್ ನಾಯಕ (ತಾ. ಸಂಚಾಲಕರು), ತಮ್ಮಣ್ಣ ಹೆಸರೇಡಿ (ಜಾ.ಹೋ. ಅಧ್ಯಕ್ಷರು), ನಂದ್ರಪ್ಪ ಪಿ ಮಟ್ಟಿ (ತಾಲೂಕು ಅಧ್ಯಕ್ಷರು ದೇವದುರ್ಗ) ಇದ್ದರು.
📲Get App