🔥 TRENDING Six Puppies Burned to Death by Teenage... Scarlett Johansson seeks deeper artist... अविरल शुक्ला Canadian Woman Travels to India for Da... MarketsMojo rates Haryana Leather Chem... Punjab Police Bust Gangster Network, A...
15 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನಲ್ಲಿ KPSC ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಗೆ ಸಿದ್ಧತೆ - 38 ಕೇಂದ್ರಗಳಲ್ಲಿ 11,482 ಅಭ್ಯರ್ಥಿಗಳು ಪರೀಕ್ಷೆ - ಜಿಲ್ಲಾಧಿಕಾರಿ ಪೂವಿತಾ ಎಸ್. ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ - ಕಟ್ಟುನಿಟ್ಟಿನ ಕ್ರಮಗಳಿಗೆ ಸೂಚನೆ

✍️ Reporter: Ningappa 🗓 15 Nov 2026, 11:48 AM 👁 17
Share: 💬 WhatsApp 📘 Facebook 𝕏 Post

ರಾಯಚೂರಿನಲ್ಲಿ KPSC ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಸಿದ್ಧತೆ - 38 ಕೇಂದ್ರಗಳಲ್ಲಿ 11,482 ಅಭ್ಯರ್ಥಿಗಳು - 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ, ಮೊಬೈಲ್ ನಿಷೇಧ, ಸಿಸಿಟಿವಿ, ಜಾಮರ್ ಬಳಕೆಗೆ ಸೂಚನೆ - ಜಿಲ್ಲಾಧಿಕಾರಿ ಪೂವಿತಾ ಎಸ್. ಅಧ್ಯಕ್ಷತೆಯಲ್ಲಿ ಸಭೆ

ರಾಯಚೂರಿನಲ್ಲಿ KPSC ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಗೆ ಸಿದ್ಧತೆ

ರಾಯಚೂರು: ಕರ್ನಾಟಕ ಲೋಕಸೇವಾ ಆಯೋಗದ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (319 ಹುದ್ದೆಗಳು) ಪೂರ್ವಭಾವಿ ಪರೀಕ್ಷೆಯನ್ನು ರಾಯಚೂರು ಜಿಲ್ಲೆಯಲ್ಲಿ ಸುಗಮವಾಗಿ, ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ಜರುಗಿತು.

ಜಿಲ್ಲೆಯ ಒಟ್ಟು 38 ಪರೀಕ್ಷಾ ಕೇಂದ್ರಗಳಲ್ಲಿ 11,482 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯ ಸುಸೂತ್ರ ನಿರ್ವಹಣೆಗಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಅಗತ್ಯ ನಿರ್ದೇಶನಗಳನ್ನು ನೀಡಿದರು.

ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದು ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವುದು.

ಪರೀಕ್ಷಾ ಕೊಠಡಿಗಳಲ್ಲಿ ಮೊಬೈಲ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸುವುದು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್‌ಕಾಸ್ಟಿಂಗ್ ಹಾಗೂ ಜಾಮರ್‌ಗಳ ಸಮರ್ಪಕ ಬಳಕೆಯನ್ನು ಖಚಿತಪಡಿಸಿಕೊಳ್ಳುವುದು.

ಪ್ರತಿ ಐದು ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಗ್ರೂಪ್-ಎ ಮತ್ತು ಗ್ರೂಪ್-ಬಿ ಅಧಿಕಾರಿಗಳನ್ನು ನಿಯೋಜಿಸಿ ನಿರಂತರ ಮೇಲ್ವಿಚಾರಣೆ ನಡೆಸುವುದು.

ಬೆಳಿಗ್ಗೆ 10.00 ಗಂಟೆಯ ನಂತರ ಹಾಗೂ ಮಧ್ಯಾಹ್ನ 2.00 ಗಂಟೆಯ ನಂತರ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಾವಕಾಶ ನೀಡದಿರುವುದು.

ಪರೀಕ್ಷೆಯ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ಸುಗಮ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಮಗೆ ವಹಿಸಿರುವ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
📲Get App