🔥 TRENDING TN CM to Meet AP Counterpart to Resolv... Congress Leader Gidugu Rudra Raju Dema... AP SIC sets record by resolving 7,034... Jigardan Gadhvi Vandalism Incident Roc... Boat capsizes in Vaishali, Bihar: 13 d... Two Children Die, 17 Burned in Gas Lea...
14 Oct 2026•
ગુજરાતી मराठी ਪੰਜਾਬੀ বাংলা
ಕೊಳ್ಳೇಗಾಲದಲ್ಲಿ ಅಭಿವೃದ್ಧಿ ಪರ್ವ: ಮತ್ತೊಮ್ಮೆ ಸೇವೆಗೆ ಅವಕಾಶ ನೀಡಿ— ಶಾಸಕ ಎ.ಆರ್. ಕೃಷ್ಣಮೂರ್ತಿ ಮನವಿ

ಕೊಳ್ಳೇಗಾಲದಲ್ಲಿ ಅಭಿವೃದ್ಧಿ ಪರ್ವ: ಮತ್ತೊಮ್ಮೆ ಸೇವೆಗೆ ಅವಕಾಶ ನೀಡಿ— ಶಾಸಕ ಎ.ಆರ್. ಕೃಷ್ಣಮೂರ್ತಿ ಮನವಿ

✍️ Reporter: Usman Khan 🗓 31 Aug 2026, 10:20 PM 👁 156
Share: 💬 WhatsApp 📘 Facebook 𝕏 Post
ಕೊಳ್ಳೇಗಾಲ: ‘ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಈ ಪ್ರಗತಿಯನ್ನು ಗಮನಿಸಿ ಕ್ಷೇತ್ರದ ಜನತೆ ಮತ್ತೊಮ್ಮೆ ಜನರ ಸೇವೆ ಮಾಡಲು ನನಗೆ ಅವಕಾಶ ನೀಡಬೇಕು’ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮನವಿ ಮಾಡಿದರು.
ತಾಲ್ಲೂಕಿನ ಚಿಲಕವಾಡಿ ಗ್ರಾಮದಲ್ಲಿ ಸೋಮವಾರ ಸೆಸ್ಕ್‌ (CESC) ಸೆಕ್ಷನ್ ಕಚೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಶಾಸಕನಾಗಿ ಆಯ್ಕೆಯಾದ ನಂತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನೂರಾರು ಕೋಟಿ ರೂಪಾಯಿ ಅನುದಾನ ತಂದು ರಸ್ತೆಗಳ ಅಭಿವೃದ್ಧಿ, ಕೆರೆಗಳ ಪುನಶ್ಚೇತನ, ವಿವಿಧ ಸಮುದಾಯ ಭವನಗಳು ಹಾಗೂ ಸ್ತ್ರೀಶಕ್ತಿ ಭವನಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅಭಿವೃದ್ಧಿ ಪರ್ವವನ್ನು ಮತದಾರರು ಬೆಂಬಲಿಸಬೇಕು’ ಎಂದರು.
ಶೀಘ್ರದಲ್ಲೇ ಬೃಹತ್ ಸಮಾವೇಶ:
‘ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ದಿನಾಂಕ ನಿಗದಿಯಾದ ಬಳಿಕ ಕೊಳ್ಳೇಗಾಲದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗುವುದು. ಆ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿ ವೆಚ್ಚದ ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡ ಯೋಜನೆಗಳ ಲೋಕಾರ್ಪಣೆ ನೆರವೇರಲಿದೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸೆಸ್ಕ್‌ ಕೊಳ್ಳೇಗಾಲ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ತಬಸಮ್ ಆಫ್ರೋಜ್, ಎಇಇ ಸುರೇಶ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ನಗರಸಭೆ ಮಾಜಿ ಅಧ್ಯಕ್ಷ ರಮೇಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
📲Get App