🔥 TRENDING बागमती नदी का जलस्तर बढ़ा, माड़र पुल क... Karnataka FDA Calls Centre to Act on 2... भारी बारिश से निंबड़ी चांदावता के खेतो... MSRTC Bus Crash Near Belapur Flyover I... Two Arrested in Murder of Hindu Trader... Road Agency and Contractor Penalised O...
28 Sep 2026•
ગુજરાતી मराठी ਪੰਜਾਬੀ বাংলা
ಮೂಮೀನ ಪುರ ಮುಖ್ಯ ರಸ್ತೆಯಲ್ಲಿ ಬಿಡಾಡಿ ದನಗಳು ಹಾವಳಿ

ಮೂಮೀನ ಪುರ ಮುಖ್ಯ ರಸ್ತೆಯಲ್ಲಿ ಬಿಡಾಡಿ ದನಗಳು ಹಾವಳಿ

✍️ Reporter: MAHAMAD WALI QURESHI 🗓 05 Sep 2026, 09:10 AM 👁 63
Watch on: ▶️ YouTube
Share: 💬 WhatsApp 📘 Facebook 𝕏 Post
ಮೊಮೀನ್ ಪುರ ಮುಖ್ಯ ರಸ್ತೆಯಲ್ಲಿ ಬಿಡಾಡಿ ದನಗಳ ಹಾವಳಿ: ವಾಹನ ಸವಾರರಲ್ಲಿ ಆತಂಕ

ದೇವದುರ್ಗ, ಸೆ.3: ನಗರದ ವಾರ್ಡ್ ನಂ.10ರ ಮೊಮೀನ್ ಪುರ ಮುಖ್ಯ ರಸ್ತೆಯ ಕಟ್ಟಗುರು ಕಟ್ಟಿಯಲ್ಲಿ ಬಿಡಾಡಿ ದನಕರುಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮುಖ್ಯ ರಸ್ತೆಯಲ್ಲೇ ದನಕರುಗಳು ಗುಂಪು ಗುಂಪಾಗಿ ಓಡಾಡುತ್ತಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಮಧ್ಯದಲ್ಲೇ ದನಕರುಗಳು ನಿಂತುಕೊಳ್ಳುತ್ತಿರುವುದರಿಂದ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದೆ.

ದನಕರುಗಳು ಏಕಾಏಕಿ ರಸ್ತೆಗೆ ಬರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದರ ಜೊತೆಗೆ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಹಾಕುತ್ತಿರುವುದರಿಂದ ದನಕರುಗಳು ಕಸದ ರಾಶಿಗಳ ಬಳಿ ಸೇರಿ ಕಸ ತಿನ್ನುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಇದರಿಂದ ನಗರದ ಸ್ವಚ್ಛತೆಗೂ ಧಕ್ಕೆಯಾಗುವುದರ ಜೊತೆಗೆ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.

ಈ ಸಮಸ್ಯೆ ಹಲವು ದಿನಗಳಿಂದ ಮುಂದುವರಿದಿದ್ದರೂ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ರಸ್ತೆಗೆ ದನಗಳನ್ನು ಬಿಡುವ ಮಾಲೀಕರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ, ಬಿಡಾಡಿ ದನಗಳ ನಿಯಂತ್ರಣ ಹಾಗೂ ರಸ್ತೆ ಬದಿಯ ಕಸ ತೆರವುಗೊಳಿಸುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವನಾಥ್ ಬಲ್ಲಿದವ್, ಮೋಹನ್ ಬಲ್ಲಿದವ್, ವಲಿ ಖುರೇಷಿ, ಬಾವದೀನ್ ಸಂಶುದ್ದೀನ್ ಹೌದುಡಿ Nice ಪಾಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ ವಲಿ ಖುರೇಷಿ ದೇವದುರ್ಗ
📲Get App