🔥 TRENDING बैंकों की 3 दिवसीय हड़ताल टली: 5-दिवसी... પીરછલ્લા બાળ ગણેશ મહોત્સવ Parineeti Chopra slams industry bias a... Thai Sprinter Boonson Wins Sprint Doub... Mohammad Kaif says youth can learn fit... India Ascends as Global News Hub, Says...
28 Sep 2026•
ગુજરાતી मराठी ਪੰਜਾਬੀ বাংলা
ಸಮರ್ಪಕವಾಗಿ ಮನವರಿಕೆ ಮಾಡಿಕೊಡಬೇಕು ಶಾಸಕಿ ಕರೆಮ್ಮ ಜಿ ನಾಯಕ

ಸಮರ್ಪಕವಾಗಿ ಮನವರಿಕೆ ಮಾಡಿಕೊಡಬೇಕು ಶಾಸಕಿ ಕರೆಮ್ಮ ಜಿ ನಾಯಕ

✍️ Reporter: MAHAMAD WALI QURESHI 🗓 08 Sep 2026, 10:52 PM 👁 66
Watch on: ▶️ YouTube
Share: 💬 WhatsApp 📘 Facebook 𝕏 Post
ಸಮರ್ಪಕವಾಗಿ ಮನವರಿಕೆ ಮಾಡಿಕೊಡಬೇಕು ಶಾಸಕಿ ಕರೆಮ್ಮ ಜಿ ನಾಯಕ

ನೀಡ್ 24 ನ್ಯೂಸ್ ಸೆ 8

ದೇವದುರ್ಗ: ಪ್ರಜಾಪ್ರಭುತ್ವ ಆಡಳಿತದಲ್ಲಿ ಪ್ರಜೆಗಳೇ ರಾಜರು, ರಾಜಕಾರಣಿಗಳು ಮತ್ತು ಅಧಿಕಾರಿಗಳು ಪ್ರಯಾಸೇವಕರು ಆದ್ದರಿಂದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಜನರಿಗಾಗಿ ಕಾಯದೆ, ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಯಾವಾಗ ಜನರಿಗೆ ತಮ್ಮ ಸಮಸ್ಯೆಗಳು ಬಗೆಹರಿಯುತ್ತವೆ ಎಂಬ ಭರವಸೆ ಮೂಡುತ್ತದೆಯೋ ಆಗ ಮಾತ್ರ ಪ್ರಜಾ ಸೇವಾ ಆಂದೋಲನ ಯಶಸ್ವಿಯಾಗುತ್ತದೆ ಎಂದು ಶಾಸಕಿ ಕರೆಮ್ಮ ಜಿ. ನಾಯಕ ಹೇಳಿದರು.

ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. 2023ರಿಂದ ಜನರಿಗೆ ಸಮೀಪವಾಗುವ ರೀತಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಸರ್ಕಾರದ ಯೋಜನೆಗಳು ಕೇವಲ ಘೋಷಣೆಗೆ ಸೀಮಿತವಾಗದೆ, ಅವು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುಷ್ಠಾನದ ಪರಿಣಾಮವನ್ನು ಪರಿಶೀಲಿಸುವುದು ಅಗತ್ಯ ಅಧಿಕಾರಿಗಳ ಕರ್ತವ್ಯ ಎಂದರು.

ಪ್ರಜಾ ಸೇವಾ ಆಂದೋಲನದ ಉದ್ದೇಶವನ್ನು

ದೇವದುರ್ಗ ಹಾಗೂ ಅರಕೆರಾ ತಾಲೂಕುಗಳು ಬರಗಾಲ ಪಟ್ಟಿಗೆ ಸೇರ್ಪಡೆಯಾಗಲು ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನವೂ ಕಾರಣವಾಗಿದೆ. ಇದೀಗ ಬರಗಾಲ ಪರಿಹಾರವನ್ನು ರೈತರಿಗೆ ಯಾವ ರೀತಿಯಲ್ಲಿ ಸಮರ್ಪಕವಾಗಿ ವಿತರಿಸಬೇಕು ಎಂಬುದರ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಅರ್ಹ ರೈತರಿಗೆ ಪರಿಹಾರ ತಲುಪುವಂತೆ ಕ್ರಮವಹಿಸಬೇಕು ಎಂದರು. ಕೆಇಬಿ ಇಲಾಖೆಯ ವಿದ್ಯುತ್ ವ್ಯತ್ಯಯದ ಕುರಿತು ರೈತರಿಂದ ಹಲವು ದೂರುಗಳು ಬರುತ್ತಿವೆ. ಹೊಲಗಳಿಗೆ ನೀರು ಹಾಯಿಸಲು ಹೆಚ್ಚಿನ ಅವಧಿಗೆ ವಿದ್ಯುತ್ ನೀಡುವಂತೆ ರೈತರು ಮನವಿ ಮಾಡುತ್ತಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದು, ಕೃಷಿ

ಜನರಿಗೆ ಅಧಿಕಾರಿಗಳು ಸಮರ್ಪಕವಾಗಿ ಮನವರಿಕೆ ಮಾಡಿಕೊಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯವಿದ್ದು, ಕ್ಷೇತ್ರದ ಸಮಸ್ಯೆಗಳ ಕುರಿತು ತಮ್ಮೊಂದಿಗೆ

ಪೂರೈಕೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಅನುದಾನದಲ್ಲಿ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸದ್ಬಳಕೆಯಾಗಬೇಕು ಎಂಬುದು ತಮ್ಮ ಉದ್ದೇಶವಾಗಿದೆ ಕ್ಷೇತ್ರದ ಜನರಿಗೆ ನೇರವಾಗಿ ಅನುಕೂಲವಾಗುವ ಎಂದು ಕರೆಮ್ಮ ಜಿ. ನಾಯಕ ಹೇಳಿದರು. ಚಿಜನರ ಸಮಸ್ಯೆಗಳಿಗೆ ಸ್ಪಂದಿಸುವ ಈ ಕಾರ್ಯಕ್ರಮದ ಉದ್ದೇಶ ಹೆಮ್ಮೆ ಮೂಡಿಸುವಂತಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯದಿಂದ

ನಿರಂತರ ಸಂಪರ್ಕದಲ್ಲಿರಬೇಕು. ಪ್ರತಿಯೊಬ್ಬರೂ ಈ ಕಾರ್ಯಕ್ರಮಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮತ್ತಷ್ಟು ವಿಶ್ವಾಸ ಮೂಡಲಿದೆ ಎಂದರು.

ಈ ಸಂದರ್ಭದಲ್ಲಿ ತಹಶಿಲ್ದಾ‌ರ್ ನಾಗಮ್ಮ ಕಟ್ಟಿಮನಿ.

ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ, ಸಮಾಜ ಕಲ್ಯಾಣ ಅಧಿಕಾರಿ ರಾಜಕುಮಾರ ಡೊಣೀ, ಮುಖ್ಯ ಅಧಿಕಾರಿ ಹಂಪಯ್ಯ ಸಹಾಯಕ ಕೃಷಿ ನಿರ್ದೇಶಕ ಕೆ. ಶ್ರೀನಿವಾಸ ನಾಯಕ. ಶಿವರಾಜ ಪೂಜಾರಿ, ಪಿಡಬ್ಲ್ಯೂಡಿ ಎ ಇ ಇ ಇರಾಲಾಲ್, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಮಹೇಶ ನಾಯಕ, ಟಿ ಶ್ರೀನಿವಾಸ, ಮಹಮ್ಮದ್ ಅಲಿ. ಪಿಐ ಮಂಜುನಾಥ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕರ್ನಾಟಕ ಒನ್ ಆಪರೇಟರ್‌ಗಳು ವಿವಿಧ ಇಲಾಖೆಯ ಸಿಬ್ಬಂದಿಗಳುಸೇರಿದಂತೆ ಸಾರ್ವನಿಕರು ಇದ್ದರು... ವರದಿ ವಲಿ ಖುರೇಷಿ
📲Get App