🔥 ट्रेंडिंग રાજકોટ: મોરબી રોડ હડાળા ગામના પાટિયા પ... चार असम मजदूरों की मौत मेघालय में सीप्... भारत में बलात्कार मामलों में वृद्धि ने... अयुष्मान खुराना ने निभाया पाकिस्तान के... मडोना और टेलर स्विफ्ट ने जीता एमटीवी व... टीवीके मंत्री ने उदयनिधि स्टालिन की टि...
28 सित. 2026•
ગુજરાતી मराठी ਪੰਜਾਬੀ বাংলা
ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ: ಶಾಸಕ ಬಿ.ಪಿ. ಹರೀಶ್

ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಅಗತ್ಯ: ಶಾಸಕ ಬಿ.ಪಿ. ಹರೀಶ್

✍️ रिपोर्टर: Viswanatha D R 🗓 08 सित. 2026, 01:46 PM 👁 143
यहाँ देखें: ▶️ YouTube
शेयर करें: 💬 WhatsApp 📘 Facebook 𝕏 Post
ಹರಿಹರ, ಸೆ. 8: ವಿದ್ಯಾರ್ಥಿಗಳಲ್ಲಿ ಪ್ರತಿಭೆ, ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಯುವಕರು ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ದೂರವಿದ್ದು, ದೈಹಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಬೇಕು ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಪಿ. ಹರೀಶ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ 2026–27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಯುವ ರೆಡ್‌ಕ್ರಾಸ್, ಎನ್‌ಎಸ್‌ಎಸ್, ರೋವರ್ಸ್‌ ಮತ್ತು ರೇಂಜರ್ಸ್‌ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಬಿ.ಬಿ. ನಂದ್ಯಾಲ ಮಾತನಾಡಿ, ವಿದ್ಯಾರ್ಥಿಗಳು ಸವಾಲುಗಳನ್ನು ಎದುರಿಸಿ ಗುರಿ ಸಾಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವುದರ ಜತೆಗೆ ಉತ್ತಮ ವಿದ್ಯಾರ್ಥಿ, ಮಗ ಹಾಗೂ ಜವಾಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳಬೇಕು. ಶಿಕ್ಷಕರ ಮಾತುಗಳನ್ನು ಗಮನವಿಟ್ಟು ಆಲಿಸಿ, ಮುಖ್ಯ ಅಂಶಗಳನ್ನು ದಾಖಲಿಸಿಕೊಳ್ಳುವ ಹಾಗೂ ಶಿಕ್ಷಕರೊಂದಿಗೆ ಉತ್ತಮ ಸಂವಹನ ಬೆಳೆಸಿಕೊಳ್ಳುವಂತೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಶಕುಂತಲಾ ಎನ್. ಮಾತನಾಡಿ, ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿರುವ ಕಲೆ ಮತ್ತು ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗುತ್ತವೆ. ಮಹಿಳೆಯರು ಆರ್ಥಿಕ ಹಾಗೂ ಬೌದ್ಧಿಕವಾಗಿ ಸಬಲರಾಗಬೇಕು ಎಂದು ಹೇಳಿದರು.

ಡಿ ಆರ್‌ ಎಂ ಪಿಯು ಕಾಲೇಜ ಪ್ರಾಂಶುಪಾಲರಾದ ರಾಜಶೇಖರಯ್ಯ ಎಸ್. ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಸ್ಕಾರ ಹಾಗೂ ಜವಾಬ್ದಾರಿಯುತ ಜೀವನವನ್ನು ರೂಢಿಸಿಕೊಳ್ಳಬೇಕು ಎಂದರು. ಸರ್ಕಾರಿ ಪಿಯು ಕಾಲೇಜು, ಮಲೆಬೆನ್ನೂರಿನ ಪ್ರಾಂಶುಪಾಲರಾದ ಭಾಗ್ಯ ಮಾತನಾಡಿ, ಸರಳತೆ, ಆತ್ಮವಿಶ್ವಾಸ ಹಾಗೂ ಆತ್ಮತೃಪ್ತಿಯೊಂದಿಗೆ ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಚಂದ್ರಶೇಖರ್ ಸಿ. ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಡಾ. ಗೌರಮ್ಮ ಎಸ್.ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಐಕ್ಯೂಎಸಿ ಸಂಚಾಲಕ ಡಾ. ಯೋಗೀಶ್ ಕೆ.ಎಂ. ಸೇರಿದಂತೆ ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹನುಮಂತಪ್ಪ ಕೆ.ವೈ. ವಂದಿಸಿದರು. ರಾಘವೇಂದ್ರ ಜಿ.ಪಿ. ನಿರೂಪಿಸಿದರು.
📲Get App