🔥 TRENDING Ambala Construction Site Collapse Leav... Kharif Acreage Surpasses Five‑Year Ave... Rumor of Student Rape Sparks Protests... 3-Day Bank Strike Called Off After Lat... India’s Diplomatic Dilemma: Navigating... Pakistan reaches Asian Games cricket s...
28 Sep 2026•
ગુજરાતી मराठी ਪੰਜਾਬੀ বাংলা
ತಂಗಡಗಿ ವಿರುದ್ಧದ ಟೀಕೆಗೆ ತೀವ್ರ ಆಕ್ಷೇಪ ಜನಾರ್ಧನ ರೆಡ್ಡಿಗೆ ದೇವರಾಜ ಕೋಟೆ ತಿರುಗೇಟು

ತಂಗಡಗಿ ವಿರುದ್ಧದ ಟೀಕೆಗೆ ತೀವ್ರ ಆಕ್ಷೇಪ ಜನಾರ್ಧನ ರೆಡ್ಡಿಗೆ ದೇವರಾಜ ಕೋಟೆ ತಿರುಗೇಟು

✍️ Reporter: MAHAMAD WALI QURESHI 🗓 09 Sep 2026, 01:02 PM 👁 64
Watch on: ▶️ YouTube
Share: 💬 WhatsApp 📘 Facebook 𝕏 Post
ತಂಗಡಗಿ ವಿರುದ್ಧದ ಟೀಕೆಗೆ ತೀವ್ರ ಆಕ್ಷೇಪ: ಜನಾರ್ಧನ ರೆಡ್ಡಿಗೆ ; ದೇವರಾಜ ಕೋಟೆ ತಿರುಗೇಟು

ನೀಡ್ 24 ನ್ಯೂಸ್ ಸೆ 9

ದೇವದುರ್ಗ : ಸಚಿವ ಶಿವರಾಜ್ ತಂಗಡಗಿ ಅವರ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ಡಿ ಮಾಡಿರುವ ಟೀಕೆಗಳಿಗೆ ಕಾಂಗ್ರೆಸ್ ಮುಖಂಡ ದೇವರಾಜ ಕೋಟೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಕೀಯ ಕಾರಣಕ್ಕಾಗಿ ಆಧಾರರಹಿತ ಆರೋಪ ಮಾಡುವ ಬದಲು ಅಭಿವೃದ್ಧಿ ವಿಚಾರದಲ್ಲಿ ಬರುವಂತೆ ಹಾಕಿದ್ದಾರೆ. ಪಟ್ಟಣದಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಶಿವರಾಜ್ ತಂಗಡಗಿ ಅವರು ಸಚಿವರಾಗಿ ಹಾಗೂ ಜನಪ್ರತಿನಿಧಿಯಾಗಿ ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳ ಪರಿಹಾರಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಕುಡಿಯುವ ನೀರು, ರಸ್ತೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸೇರಿದಂತೆ ಕ್ಷೇತ್ರದ ಅಗತ್ಯತೆಗಳ ಕುರಿತು ಸರ್ಕಾರದ ಗಮನ ಸೆಳೆದು. ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಜನರಿಗೆ ತಲುಪುವಂತೆ ತಂಗಡಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು. "ಜನಾರ್ಧನ ರೆಡ್ಡಿ ಅವರು ಮೊದಲು ತಮ್ಮ

ಆಡಳಿತಾವಧಿಯಲ್ಲಿ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಜನರಿಗೆ ಉತ್ತರಿಸಲಿ. ತಂಗಡಗಿ ಅವರ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸುವ ಮೊದಲು ತಮ್ಮ ಸಾಧನೆಗಳ ಲೆಕ್ಕವನ್ನು ಜನರ ಮುಂದಿಡಲಿ" ಎಂದು ತಿರುಗೇಟು ನೀಡಿದರು. ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ ಯಾರು ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ದಾಖಲೆಗಳ ಸಮೇತ ಜನರ ಮುಂದೆ ಚರ್ಚಿಸೋಣ ಎಂದು ಅವರು ಹೇಳಿದರು. ಉದ್ಯೋಗ, ಶಿಕ್ಷಣ, ಆರೋಗ್ಯ ಕುಡಿಯುವ ನೀರು, ರಸ್ತೆ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ಜನಪ್ರತಿನಿಧಿಗಳ ಆದ್ಯತೆಯಾಗಬೇಕು ಎಂದರು. ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿಯುತ ಭಾಷೆ ಬಳಸಬೇಕು. ವೈಯಕ್ತಿಕ ಟೀಕೆಗಳನ್ನು ಬದಿಗಿಟ್ಟು ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ಜನಾರ್ಧನ ರೆಡ್ಡಿ ಅವರು ತಮ್ಮ ಹೇಳಿಕೆಗಳನ್ನು ಮರುಪುಶೀಲಿಸಬೇಕು ಎಂದು ಆಗ್ರಹಿಸಿದರು. ಸಚಿವ ಶಿವರಾಜ್ ತಂಗಡಗಿ ಅವರ ಜನಪರ ಕಾರ್ಯಗಳಿಗೆ ಕ್ಷೇತ್ರದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನತೆ ಅವರ ಪರವಾಗಿ ಒಗ್ಗಟ್ಟಾಗಿ ನಿಂತಿದ್ದಾರೆ. ರಾಜಕೀಯ ಆರೋಪಗಳಿಗೆ ತಂಗಡಗಿ ಅವರು ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ ನೀಡಲಿದ್ದಾರೆ ಎಂದು ಸಪ್ತಪಡಿಸಿದರು.
📲Get App