🔥 TRENDING Ambala Construction Site Collapse Leav... Kharif Acreage Surpasses Five‑Year Ave... Rumor of Student Rape Sparks Protests... 3-Day Bank Strike Called Off After Lat... India’s Diplomatic Dilemma: Navigating... Pakistan reaches Asian Games cricket s...
28 Sep 2026•
ગુજરાતી मराठी ਪੰਜਾਬੀ বাংলা
ಗಣೇಶೋತ್ಸವ ನಿಯಮ ಪಾಲನೆ ಸುರಕ್ಷತೆ ಜಿಲ್ಲಾಧಿಕಾರಿ ಸೂಚನೆ

ಗಣೇಶೋತ್ಸವ ನಿಯಮ ಪಾಲನೆ ಸುರಕ್ಷತೆ ಜಿಲ್ಲಾಧಿಕಾರಿ ಸೂಚನೆ

✍️ Reporter: MAHAMAD WALI QURESHI 🗓 09 Sep 2026, 09:44 PM 👁 57
Watch on: ▶️ YouTube
Share: 💬 WhatsApp 📘 Facebook 𝕏 Post
ಗಣೇಶೋತ್ಸವ ನಿಯಮ ಪಾಲನೆ, ಸುರಕ್ಷತೆಗೆ ಜಿಲ್ಲಾಧಿಕಾರಿ ಸೂಚನೆ..

ನೀಡ್ 24 ನ್ಯೂಸ್

ರಾಯಚೂರು, ಸೆ.09-

ಗಣೇಶೋತ್ಸ ವದ ಪೂರ್ವಸಿದ್ದತೆ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪ್ರಕ್ರಿಯೆ ಹಾಗೂ ಸುರಕ್ಷತಾ ವ್ಯವಸ್ಥೆಗಳ ಕುರಿತು ಜಿಲ್ಲಾಧಿಕಾರಿ ಶ್ರೀಮತಿ ಪೂವಿತಾ ಎಸ್. ಅವರ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಯಿತು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೋಹಪಾತ್ರ ಹಾಗೂ ಪೊಲೀಸ್ ವರಿಷ್ಠಾಧಿಕಾರಿ

ಅರುಣಾಂಕ್ಷು ಗಿರಿ ಉಪಸ್ಥಿತರಿದ್ದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಸರ್ಕಾರದ ಮಾರ್ಗಸೂಚಿ ಹಾಗೂ ನಿಗದಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿಯೊಂದು ಪ್ರಸ್ತಾವಿತ ಸ್ಥಳವನ್ನು ಕಡ್ಡಾಯವಾಗಿ ಪರಿಶೀಲಿಸಿ, ಸಾರ್ವಜನಿಕ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಗೆ ಯಾವುದೇ ತೊಂದರೆಯಾಗದಿರುವುದನ್ನು ಖಚಿತಪಡಿಸಿಕೊಂಡ ಬಳಿಕವೇ ನಿಯಮಾನುಸಾರ
ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಜಿಲ್ಲಾಧಿಕಾರಿಗಳು ನಗರದ ವಿವಿಧ ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು ಹಾಗೂ ಮಾವಿನ ಕೆರೆ ಸೇರಿದಂತೆ ವಿಸರ್ಜನೆಗೆ ಗುರುತಿಸಲಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರತಿಷ್ಠಾಪನೆ ಮತ್ತು ವಿಸರ್ಜನಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯುತ್ ಮಾರ್ಗ, ತಂತಿಗಳು, ಗಿಡ-ಮರಗಳು ಸೇರಿದಂತೆ ಸಂಭವನೀಯ ಅಪಾಯದ ಅಂಶಗಳನ್ನು ಗುರುತಿಸಿ, ಯಾವುದೇ ಅವಘಡ ಸಂಭವಿಸದಂತೆ ಕ್ರಮ ಕೈಗೊಳ್ಳುವಂತೆ ಜೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ನಿರ್ವಹಣೆ, ವಿದ್ಯುತ್ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ಎಲ್ಲ ವಿಭಾಗಗಳ ನಡುವೆ ಸಮನ್ವಯ ಸಾಧಿಸಿ, ಅಗತ್ಯ ಪೂರ್ವಸಿದ್ಧತಾ ಕಾರ್ಯಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಗಣೇಶೋತ್ಸವವನ್ನು ಶಾಂತಿಯುತ, ಸುವ್ಯವಸ್ಥಿತ ಹಾಗೂ ಸುರಕ್ಷಿತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ವರದಿ ವಲಿ ಖುರೇಷಿ
📲Get App