🔥 TRENDING चलते ऑटो से कूदी छात्रा, विरोध पर चालक... அரசு ஆண்கள் மேல்நிலைப்பள்ளியில், 1993... Virender Sehwag's Hilarious Reaction t... Scripted Video Circulates as Real Hara... Secret Spot Goes Viral, Crowds Overwhe... Seoul Blames Kyiv for Breach of Secrec...
28 Sep 2026•
ગુજરાતી मराठी ਪੰਜਾਬੀ বাংলা
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಗೆ ಹಾಗೂ ದೈಹಿಕ ಶಿಕ್ಷಕಿ ಮಮತ ಆದಿ ಅವರಿಗೆ ಶಾಸಕಿ ಜಿ ಕರೆಮ್ಮ ನಾಯಕ ಸನ್ಮಾನ

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಗೆ ಹಾಗೂ ದೈಹಿಕ ಶಿಕ್ಷಕಿ ಮಮತ ಆದಿ ಅವರಿಗೆ ಶಾಸಕಿ ಜಿ ಕರೆಮ್ಮ ನಾಯಕ ಸನ್ಮಾನ

✍️ Reporter: MAHAMAD WALI QURESHI 🗓 18 Sep 2026, 01:12 PM 👁 56
Watch on: ▶️ YouTube
Share: 💬 WhatsApp 📘 Facebook 𝕏 Post
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪತ್ನಿಗೆ ಹಾಗೂ ದೈಹಿಕ ಶಿಕ್ಷಕಿ ಮಮತಾ ಆದಿ ಅವರಿಗೆ ಶಾಸಕಿ ಕರೆಮ್ಮ ಸನ್ಮಾನ
ನೀಡ್ 24 ನ್ಯೂಸ್
ದೇವದುರ್ಗ ಸೆ 17 ತಾಲೂಕು ಆಡಳಿತದಿಂದ ಆಯೋಜಿಸಲಾದ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಸಮಾರಂಭವು ಅರ್ಥಪೂರ್ಣವಾಗಿ ಜರುಗಿತು.
ಸಮಾರಂಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವ ಸಲುವಾಗಿ, ಸ್ವಾತಂತ್ರ್ಯ ಹೋರಾಟಗಾರ ದಿ. ರಾಜಶೇಖರಪ್ಪ ಆದಿ ಅವರ ಪತ್ನಿ ಕಮಲಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿಜಾಮನ ದಬ್ಬಾಳಿಕೆಯ ವಿರುದ್ಧ ಹೋರಾಡಿದ ಹೋರಾಟಗಾರರ ಕುಟುಂಬಕ್ಕೆ ನೀಡಿದ ಗೌರವಕ್ಕೆ ನೆರೆದಿದ್ದ ಜನತೆ ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಹಾಗೆಯೇ ಶಿಕ್ಷಣ ಇಲಾಖೆಯ ಯೋಜನೆಯಂತೆ ಪ್ರತಿಯೊಂದು ಸರ್ಕಾರಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರಿಂದ ಅಚ್ಚುಕಟ್ಟಾಗಿ ನಾಡಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಲು ನಿರಂತರವಾಗಿ ಪ್ರೇರೇಪಿಸಿ, ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡುತ್ತಾ ಬಂದಿರುವ ಬಾಲಕಿಯರ ಪ್ರೌಢಶಾಲೆಯ ದೈಹಿಕ ಶಿಕ್ಷಕಿ ಮಮತಾ ಆದಿ ಅವರ ಸೇವೆಯನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ಇಬ್ಬರಿಗೂ ಶಾಲು, ಹಾರ ಹಾಕಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ತಹಶೀಲ್ದಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ, ಪುರಸಭೆ ಮುಖ್ಯಾಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು..
📲Get App