🔥 TRENDING Main shooter in Parol Sarpanch murder... RIMS conducts tree‑planting drive and... 128 People Killed on Maharashtra’s Sam... Indian Woman’s Kind Act After Bicycle... India's road safety data shows fewer c... Prime Video’s 6 Must‑Watch Enemies‑to‑...
28 Sep 2026•
ગુજરાતી मराठी ਪੰਜਾਬੀ বাংলা

ಹರಿಹರದ ಸ. ಪ್ರ. ದ. ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದಿಂದ ವಿಶೇಷ ಉಪನ್ಯಾಸ

✍️ Reporter: Viswanatha D R 🗓 21 Sep 2026, 01:12 PM 👁 42
Share: 💬 WhatsApp 📘 Facebook 𝕏 Post
ಹರಿಹರ, ಸೆ. 21: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಶಕುಂತಲಾ ವಹಿಸಿದ್ದರು. ಅವರು ಮಾತನಾಡಿ, “ಇಂಗ್ಲಿಷ್ ಜೀವನದ ಭಾಷೆಯಾಗಿದ್ದು, ಉತ್ತಮ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಇಂಗ್ಲಿಷ್ ಭಾಷೆಯ ಜ್ಞಾನ ಅಗತ್ಯ. ಇಂಗ್ಲಿಷ್ ಭಾಷೆಯನ್ನು ಕಲಿಯುವುದು ಸುಲಭವಾಗಬೇಕಾದರೆ ಮೊದಲು ನಾವು ಆ ಭಾಷೆಯನ್ನು ಪ್ರೀತಿಸಬೇಕು” ಎಂದು ಹೇಳಿದರು.

ವಿಶೇಷ ಅತಿಥಿಗಳನ್ನು ಡಾ. ಅಬ್ದುಲ್ ಬಶೀರ್ ಕಾರ್ಯಕ್ರಮದಲ್ಲಿ ಪರಿಚಯಿಸಿದರು . ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರೊ. ರೇವಣಸಿದ್ಧಪ್ಪ ಎಂ. ಬಿ. ಅವರು ಫೋನೆಟಿಕ್ಸ್, ಇಂಗ್ಲಿಷ್ ಪದಗಳ ಬಳಕೆ, ಸರಿಯಾದ ಉಚ್ಚಾರಣೆ ಹಾಗೂ ಇಂಗ್ಲಿಷ್ ಭಾಷೆಯ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರಾದ ಪ್ರಕಾಶ್, ಜಿ. ಪಿ. ಮನೋಹರ್, ಕೆ. ಎಸ್. ಡಾ. ಅಬ್ದುಲ್ ಬಷೀರ್ ಹಾಗೂ ವಿಶ್ವನಾಥ್ ಡಿ. ಆರ್. ಮತ್ತು ಕನ್ನಡ ಉಪನ್ಯಾಸಕರಾದ ಡಾ. ಗೌರಮ್ಮ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಕಾರ್ಯಕ್ರಮದ ಆರಂಭದಲ್ಲಿ ಅರ್ಪಿತಾ ಪ್ರಾರ್ಥನೆ ನೆರವೇರಿಸಿದರು. ಮೇಘನಾ ಸ್ವಾಗತಿಸಿದರು. ಲಕ್ಷ್ಮಿ ಮತ್ತು ರಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಗೌಸಿಯ ವಂದನಾರ್ಪಣೆ ಸಲ್ಲಿಸಿದರು.

ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಭಾಷೆಯ ಕುರಿತು ಆಸಕ್ತಿ ಮೂಡಿಸುವುದರ ಜೊತೆಗೆ, ಸರಿಯಾದ ಉಚ್ಚಾರಣೆ, ಪದಗಳ ಬಳಕೆ ಹಾಗೂ ಸಂವಹನ ಕೌಶಲ್ಯಗಳ ಮಹತ್ವವನ್ನು ತಿಳಿಸಿಕೊಡುವಲ್ಲಿ ಕಾರ್ಯಕ್ರಮವು ಸಹಕಾರಿಯಾಯಿತು.
📲Get App