🔥 ट्रेंडिंग बैंकों की 3 दिवसीय हड़ताल टली: 5-दिवसी... પીરછલ્લા બાળ ગણેશ મહોત્સવ परीनीति चोपड़ा ने OTT व टीवी कलाकारों... थाई धावक बूनसन ने दोहरी जीत हासिल की,... मोहम्मद कैफ़ ने कहा, युवाओं को विराट क... इंडिया बन गया विश्व समाचार का केंद्र,...
28 सित. 2026•
ગુજરાતી मराठी ਪੰਜਾਬੀ বাংলা

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಶೇಷ ಉಪನ್ಯಾಸ

✍️ रिपोर्टर: Viswanatha D R 🗓 23 सित. 2026, 02:04 PM 👁 48
शेयर करें: 💬 WhatsApp 📘 Facebook 𝕏 Post
ದಾವಣಗೆರೆ ಸೆ. 23: ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟೆಂಬರ್ 24ರಂದು ಬೆಳಗ್ಗೆ 11.30ಕ್ಕೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯೂಎಸಿ) ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅನಿತಾ ಕುಮಾರಿ ಜೆ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾ.ಸ.ಬ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಂಗಸ್ವಾಮಿ ಟಿ.ಆರ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪ್ರಜಾಪ್ರಭುತ್ವದ ಮಹತ್ವ, ಅದರ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಜವಾಬ್ದಾರಿಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ರುದ್ರೇಶ್ ಬಿ.ಜೆ., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಉಷಾ ಎಂ.ಆರ್., ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
📲Get App