ದೇವದುರ್ಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆಗೆ ಚಾಲನೆ
**ದೇವದುರ್ಗ | ಬ್ರೇಕಿಂಗ್ ನ್ಯೂಸ್**
# ದೇವದುರ್ಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆಗೆ ಚಾಲನೆ
**ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳಿಂದ ಯಾತ್ರೆಗೆ ಚಾಲನೆ**
**ದೇವದುರ್ಗ, ಅ. 19:** ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಇಂದು ಡಾ. ಬಿ.ಆರ್. ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಲಾಯಿತು. ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಯಾತ್ರೆಗೆ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಸಮಾಜ ಸುಧಾರಕ ಹಾಗೂ ಸಮಾನತೆಯ ಹರಿಕಾರರಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಈ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ಸಮಾಜದಲ್ಲಿ ಸಮಾನತೆ, ಸಹೋದರತ್ವ, ಸಾಮಾಜಿಕ ನ್ಯಾಯ ಹಾಗೂ ಶೈಕ್ಷಣಿಕ ಜಾಗೃತಿಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಇಂತಹ ಯಾತ್ರೆಗಳು ಮಹತ್ವದ ಪಾತ್ರ ವಹಿಸುತ್ತವೆ.
ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾರಿದ **“ಶಿಕ್ಷಣ, ಸಂಘಟನೆ ಮತ್ತು ಹೋರಾಟ”** ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಹಾಗೂ ಅವರ ವಿಚಾರಧಾರೆಗಳನ್ನು ಜನಸಾಮಾನ್ಯರಲ್ಲಿ ಬಿತ್ತರಿಸುವುದು ಈ ಯಾತ್ರೆಯ ಆಶಯವಾಗಿದೆ.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಾಜಕುಮಾರ್ ಡಿ., ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಪುರಸಭೆಯ ಮುಖ್ಯಾಧಿಕಾರಿ ಹಂಪಯ್ಯ, ಹನುಮಂತಪ್ಪ ಮನ್ನಾಪುರಿ, ವಿಶ್ವನಾಥ್ ಬಲ್ಲಿದೇವ್, ರಂಗನಾಥ್ ಕೊಂಬಿನ್, ಮಲ್ಲಿಕಾರ್ಜುನ ಬೊಮ್ಮನಾಳ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**