🔥 TRENDING बिजली अधिकारियों का हटताल जारी, यूनियन... MLC चुनाव को लेकर प्रशासन अलर्ट, पोलिं... स्वामित्व योजना में लापरवाही पर डिण्डौ... Sajid ansari Amritsar Police Arrest Two Heroin Smug... Ludhiana Couple Succumbs to Road Accid...
22 Oct 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ ಸಮೀಪದ ಲಿಂಗದಹಳ್ಳಿ ನದಿ ದಂಡೆಯ ಹೊಲದಲ್ಲಿ ಮೊಸಳೆ ಪ್ರತ್ಯಕ್ಷ!

✍️ Reporter: Khaja Hussain 🗓 22 Oct 2026, 09:10 PM 👁 24
Share: 💬 WhatsApp 📘 Facebook 𝕏 Post
ಜಾಲಹಳ್ಳಿ | ಬ್ರೇಕಿಂಗ್ ನ್ಯೂಸ್

### ಜಾಲಹಳ್ಳಿ ಸಮೀಪದ ಲಿಂಗದಹಳ್ಳಿ ನದಿ ದಂಡೆಯ ಹೊಲದಲ್ಲಿ ಮೊಸಳೆ ಪ್ರತ್ಯಕ್ಷ!

### ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ನಾರಾಯಣ್ ನೇತೃತ್ವದಲ್ಲಿ ಮೊಸಳೆ ಸೆರೆ

ಜಾಲಹಳ್ಳಿ, ಅ. 21: ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಸಮೀಪದ ಲಿಂಗದಹಳ್ಳಿ ಗ್ರಾಮದ ನದಿ ದಂಡೆಯಲ್ಲಿರುವ ದೇವರಾಜ್ ಅವರಿಗೆ ಸೇರಿದ ಹೊಲದಲ್ಲಿ ಮೊಸಳೆಯೊಂದು ಕಾಣಿಸಿಕೊಂಡ ಘಟನೆ ಅಕ್ಟೋಬರ್ 21, 2026ರಂದು ನಡೆದಿದೆ.

ಹೊಲದಲ್ಲಿ ಮೊಸಳೆ ಕಾಣಿಸಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ನಾರಾಯಣ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಬಳಿಕ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದರು.

ನದಿ ದಂಡೆಯ ಹೊಲದಲ್ಲಿ ಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿ ಮೊಸಳೆಯನ್ನು ಸೆರೆಹಿಡಿದಿರುವುದರಿಂದ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಲು ನೆರವಾಯಿತು.ಈ ಸಂದರ್ಭದಲ್ಲಿ ಊರಿನ ಎಲ್ಲಾ ಗ್ರಾಮಸ್ಥರು ಫಾರೆಸ್ಟ್ ಅಧಿಕಾರಿ ಗಳಿಗೆ ನೇರವಾದರೂ

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App