राजनीति
-ಕುಮಾರಸ್ವಾಮಿ ಅವರಿಗೆ ಅಗೌರವದ ಮಾತು: ಜನರ ಭಾವನೆಗಳಿಗೆ ಧಕ್ಕೆ-- ರಾಜಶೇಖರ್ ಜವಳೆ
यहाँ देखें:
▶️ YouTube
ಬೀದರ್: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ನಿರುದ್ಯೋಗಿ ಸಚಿವ’ ಎಂದು ಕರೆದಿರುವುದು ಖಂಡನೀಯ. ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ
-ಕುಮಾರಸ್ವಾಮಿ ಅವರಿಗೆ ಅಗೌರವದ ಮಾತು: ಜನರ ಭಾವನೆಗಳಿಗೆ ಧಕ್ಕೆ-- ರಾಜಶೇಖರ್ ಜವಳೆ
ಬೀದರ್: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ನಿರುದ್ಯೋಗಿ ಸಚಿವ’ ಎಂದು ಕರೆದಿರುವುದು ಖಂಡನೀಯ. ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವವರು ಸಾರ್ವಜನಿಕವಾಗಿ ಮಾತನಾಡುವಾಗ ಮಾತಿನ ಘನತೆ, ಸಂಯಮ ಹಾಗೂ ಹುದ್ದೆಯ ಗೌರವವನ್ನು ಕಾಪಾಡಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಜವಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದ ಸಂದರ್ಭದಲ್ಲಿ ರೈತರ ಹಿತಾಸಕ್ತಿಗೆ ವಿಶೇಷ ಆದ್ಯತೆ ನೀಡಿದ್ದರು. ರೈತರ ಸಂಕಷ್ಟವನ್ನು ಮನಗಂಡು ಕೃಷಿ ಸಾಲ ಮನ್ನಾ ಯೋಜನೆ ಜಾರಿಗೊಳಿಸುವ ಮೂಲಕ ರೈತ ಸಮುದಾಯಕ್ಕೆ ನೆರವಾಗಿದ್ದರು. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವುದರ ಜೊತೆಗೆ ರೈತರ ಬದುಕಿನಲ್ಲಿ ಆರ್ಥಿಕ ಭದ್ರತೆ ಮೂಡಿಸಲು ಹಲವು ಜನಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದರು ಎಂದು ಅವರು ತಿಳಿಸಿದ್ದಾರೆ.
ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ರಾಜ್ಯದ ವಿವಿಧ ಗ್ರಾಮಗಳಿಗೆ ತೆರಳಿ ಸಾಮಾನ್ಯ ಜನರೊಂದಿಗೆ ವಾಸ್ತವ್ಯ ಹೂಡಿ, ಅವರ ಸಮಸ್ಯೆಗಳನ್ನು ನೇರವಾಗಿ ಆಲಿಸುವ ವಿಶಿಷ್ಟ ಆಡಳಿತ ಮಾದರಿಯನ್ನು ಪರಿಚಯಿಸಿದ್ದರು. ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು, ರಸ್ತೆ, ವಿದ್ಯುತ್, ಶಿಕ್ಷಣ, ಆರೋಗ್ಯ ಹಾಗೂ ರೈತರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಲು ಪ್ರಯತ್ನಿಸಿದ್ದರು. ಅವರ ಈ ಕಾರ್ಯಗಳನ್ನು ಜನರು ಇಂದಿಗೂ ಸ್ಮರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ನಾಯಕರ ಆಡಳಿತ ಮತ್ತು ಕಾರ್ಯವೈಖರಿಯನ್ನು ಟೀಕಿಸುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೆ ವೈಯಕ್ತಿಕವಾಗಿ ಹೀಯಾಳಿಸುವ ಹಾಗೂ ಅವಮಾನಿಸುವ ಪದಗಳನ್ನು ಬಳಸುವುದು ಆರೋಗ್ಯಕರ ರಾಜಕೀಯ ಸಂಸ್ಕೃತಿಯಲ್ಲ. ಕುಮಾರಸ್ವಾಮಿ ಅವರು ಪ್ರಸ್ತುತ ಕೇಂದ್ರ ಸಚಿವರಾಗಿ ಕೈಗಾರಿಕೆ ಮತ್ತು ಉಕ್ಕು ಕ್ಷೇತ್ರದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆಯ ಬಗ್ಗೆ ಟೀಕೆಗಳಿದ್ದರೆ ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಆಧಾರದ ಮೇಲೆ ಚರ್ಚಿಸಲಿ ಎಂದು ಅವರು ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯಿಂದ ಜೆಡಿಎಸ್ ಕಾರ್ಯಕರ್ತರು, ರೈತರು ಹಾಗೂ ಕುಮಾರಸ್ವಾಮಿ ಅವರ ಅಭಿಮಾನಿಗಳಿಗೆ ನೋವಾಗಿದೆ. ರಾಜಕೀಯ ನಾಯಕರು ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ ರಾಜ್ಯದ ಅಭಿವೃದ್ಧಿ, ನಿರುದ್ಯೋಗ ಸಮಸ್ಯೆ, ರೈತರ ಸಂಕಷ್ಟ ಹಾಗೂ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಕುರಿತು ಗಂಭೀರ ಚರ್ಚೆ ನಡೆಸಬೇಕು. ಸಾರ್ವಜನಿಕ ಜೀವನದಲ್ಲಿ ಪರಸ್ಪರ ಗೌರವ ಮತ್ತು ಸಂಯಮ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯವಾಗಿದೆ ಎಂದು ರಾಜಶೇಖರ್ ಜವಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.