🔥 ट्रेंडिंग छतरपुर के टहनगा में किराना दुकान से 22... निर्माणाधीन घर में बिजली से आठ की मौत,... जयपुर पुलिस मुख्यालय के बाहर महिंद्रा... मानसिक रोगी पिता ने अहमदाबाद के गांव म... मुरबाडमध्ये आगरी सेनेच्या वतीने ‘विद्य... मुरबाडमध्ये आगरी सेनेच्या वतीने ‘विद्य...
02 नव. 2026•
ગુજરાતી मराठी ਪੰਜਾਬੀ বাংলা
शिक्षा

ಶಿಕ್ಷಕ ವೃತ್ತಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಅಮಿತ್ ಸೊಲಪೂರ ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

✍️ रिपोर्टर: Basavaraj pujari 🗓 02 नव. 2026, 02:03 PM 👁 24
शेयर करें: 💬 WhatsApp 📘 Facebook 𝕏 Post

ಬೀದರ್: ಶಿಕ್ಷಕ ವೃತ್ತಿಯೊಂದಿಗೆ ಶಿಕ್ಷಣ, ಸಮಾಜ ಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಅಮಿತ್ ಸೊಲಪೂರ ಅವರಿಗೆ 2026ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವ

ಶಿಕ್ಷಕ ವೃತ್ತಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಅಮಿತ್ ಸೊಲಪೂರ ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೀದರ್: ಶಿಕ್ಷಕ ವೃತ್ತಿಯೊಂದಿಗೆ ಶಿಕ್ಷಣ, ಸಮಾಜ ಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಅಮಿತ್ ಸೊಲಪೂರ ಅವರಿಗೆ 2026ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೃತ್ತಿಯಲ್ಲಿ ಖಾಸಗಿ ಶಿಕ್ಷಕರಾಗಿರುವ ಅಮಿತ್ ಸೊಲಪೂರ ಅವರು 2016ರಲ್ಲಿ ಬೀದರ್‌ನಲ್ಲಿ ‘ಸ್ಪರ್ಧಾಗುರು ಬೀದರ್ IಂS ಮತ್ತು ಏಂS ಸ್ಟಡಿ ಸೆಂಟರ್’ ಸ್ಥಾಪಿಸಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಚಿತ ಕಾರ್ಯಾಗಾರ ಹಾಗೂ ತರಬೇತಿ ನೀಡುತ್ತಿದ್ದಾರೆ. ಇವರ ಮಾರ್ಗದರ್ಶನದಲ್ಲಿ 160ಕ್ಕೂ ಅಧಿಕ ಬಡ ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಹುದ್ದೆಗಳನ್ನು ಪಡೆದು ಉದ್ಯೋಗಿಗಳಾಗಿದ್ದಾರೆ.

ಅಲ್ಲದೆ, ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಓಒಒS ಮತ್ತು ಓಖಿSಇ ಪರೀಕ್ಷೆಗಳಿಗಾಗಿ ಉಚಿತ ತರಬೇತಿ ನೀಡುತ್ತಿದ್ದು, ಈವರೆಗೆ 1,000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಇವರಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾರ್ಷಿಕ ₹12,000 ವಿದ್ಯಾರ್ಥಿವೇತನ ಪಡೆಯಲು ಅರ್ಹತೆ ಗಳಿಸಿರುವುದು ಇವರ ಶಿಕ್ಷಣ ಸೇವೆಗೆ ಸಾಕ್ಷಿಯಾಗಿದೆ.

ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ನಿಸರ್ಗ ಕಾನ್ವೆಂಟ್ ಶಾಲೆಯನ್ನು ಸ್ಥಾಪಿಸಿ ಶಿಕ್ಷಣ ಸೇವೆ ಮುಂದುವರಿಸಿದ್ದಾರೆ.

ಶಿಕ್ಷಣ ಕ್ಷೇತ್ರದ ಜತೆಗೆ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೂ ಕೊಡುಗೆ ನೀಡುತ್ತಿದ್ದಾರೆ. 72ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಕನ್ನಡಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕನ್ನಡ ನಾಡು-ನುಡಿಯ ಪರವಾಗಿ ಧ್ವನಿ ಎತ್ತಿದ್ದಾರೆ. ಉತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪ್ರಶಸ್ತಿ ಹಾಗೂ ಗೌರವಗಳಿಗೂ ಭಾಜನರಾಗಿದ್ದಾರೆ.

ಅವರ ಶಿಕ್ಷಣ, ಸಮಾಜ ಸೇವೆ ಹಾಗೂ ಕನ್ನಡಪರ ಕಾರ್ಯಗಳನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ, ಮಾಲಾ ಬಿ. ನಾರಾಯಣರಾವ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
📲Get App