🔥 TRENDING पावसाअभावी खरीप पिके करपली! सरसकट मदती... Court Emphasizes Need for Evidence in... Delhi Police Dismantle Major Cyber Fra... Aaron Finch lauds Glenn Maxwell as exp... Police Parade Accused Shooter in Half-... Cannabis smuggler Satyadev, posing as...
03 Nov 2026•
ગુજરાતી मराठी ਪੰਜਾਬੀ বাংলা

ಕನ್ನಡ ರಾಜ್ಯೋತ್ಸವದ ಧ್ವಜಾರೋಹಣಕ್ಕೆ ಅಗೌರವ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಕರವೇ ಆಗ್ರಹ ### ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ಲಕ್ಷ್ಯದ ವಿರುದ್ಧ ತಹಸೀಲ್ದಾರ್‌ಗೆ ಮನವಿ

✍️ Reporter: Khaja Hussain 🗓 03 Nov 2026, 05:38 PM 👁 17
Watch on: 📘 Facebook
Share: 💬 WhatsApp 📘 Facebook 𝕏 Post
ದೇವದುರ್ಗ | ಬ್ರೇಕಿಂಗ್ ನ್ಯೂಸ್

### ಕನ್ನಡ ರಾಜ್ಯೋತ್ಸವದ ಧ್ವಜಾರೋಹಣಕ್ಕೆ ಅಗೌರವ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಕರವೇ ಆಗ್ರಹ

### ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ಲಕ್ಷ್ಯದ ವಿರುದ್ಧ ತಹಸೀಲ್ದಾರ್‌ಗೆ ಮನವಿ

ದೇವದುರ್ಗ, ನ. 3: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ದೇವದುರ್ಗ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದು ಹಾಗೂ ಧ್ವಜಾರೋಹಣ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಸಂಘದ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂದು ಕರವೇ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಭಾಷೆಯ ಗೌರವವನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕರ್ನಾಟಕ ರಾಜ್ಯೋತ್ಸವವು ನಾಡಿನ ಹೆಮ್ಮೆಯ ಸಂಕೇತವಾಗಿದ್ದು, ಇಂತಹ ಮಹತ್ವದ ದಿನದಂದು ರಾಜ್ಯೋತ್ಸವ ಆಚರಣೆಯಲ್ಲಿ ನಿರ್ಲಕ್ಷ್ಯ ತೋರುವುದು ಹಾಗೂ ಕನ್ನಡ ಧ್ವಜಾರೋಹಣಕ್ಕೆ ಅಗೌರವ ತೋರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಕಚೇರಿಗಳು ಹಾಗೂ ಸಹಕಾರ ಸಂಘಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಗೌರವಯುತವಾಗಿ ಆಚರಿಸಬೇಕು. ಕನ್ನಡ ನಾಡು-ನುಡಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಿರ್ಲಕ್ಷಿಸುವವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ತಾಲೂಕು ಸಂಚಾಲಕ ಭೀಮಣ್ಣ ನಾಯಕ, ಜಾಲಹಳ್ಳಿ ಹೋಬಳಿ ಕರವೇ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App