ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ತಡೆಯುವಲ್ಲಿ ಜಿಲ್ಲಾ ಆಡಳಿತ ಸಂಪೂರ್ಣ ವಿಫಲ ದಲಿತ ಸಮುದಾಯದ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ- ವಿಶ್ವನಾಥ ಬಲ್ಲಿದವ್
ರಾಯಚೂರು: ಎಸಿ ಎಸ್ಟಿ ಕುಂದುಕೊರತೆ ಸಭೆಯಲ್ಲಿ ಬೀಮ್ ಆರ್ಮಿ ಜಿಲ್ಲಾಧ್ಯಕ್ಷ ವಿಶ್ವನಾಥ ಬಲ್ಲಿದವ್ ಎಸ್ಪಿ ಮತ್ತು ಜಿಲ್ಲಾಧಿಕಾರಿಗಳಿಗೆ ಅಕ್ರಮ ಚಟುವಟಿಕೆಗಳ ಬಗ್ಗೆ ಮತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲಿ ಹೊಟೇಲ್ ಪಾನ್ ಶಾಪ ಸೇರಿದಂತೆ ಮನೆ ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ,ಮಟ್ಕ ರಾಜಾರೋಷವಾಗಿ ಬರೆಯುತ್ತಿದ್ದಾರೆ, ಅಕ್ರಮ ಚಟುವಟಿಕೆ ಮಾಡುವವರ ಜೊತೆಗೆ ಪೋಲಿಸ್ ಗುಪ್ತಚರ ಸಿಬ್ಬಂದಿ ಇರುವುದು ಸಾಮಾನ್ಯವಾಗಿದೆ ಎಂದು ರಾಯಚೂರು ಜಿಲ್ಲಾ ಪೋಲಿಸ್ ಕಾರ್ಯವೈಖರಿ ಸಮರ್ಥವಾಗಿಲ್ಲ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.
ಗುಪ್ತಚರ(ಇಂಟಲಿಜೆನ್ಸ್) ಸಿಬ್ಬಂದಿಗಳನ್ನು ಬೇರೆಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಎಡಿಜಿ ಎಸ್ಪಿ ಡಿಸಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.