🔥 TRENDING उन्नाव में कचहरी के सामने होमगार्ड और... स्कार्पियो से 30 पेटी अवैध शराब जब्त,... ਯੁੱਧ ਨਸ਼ਿਆਂ ਵਿਰੁੱਧ: ਪਿੰਡ ਮਲੂਕਾ ਵਿੱਚ 14... गंगापुर सिटी में SBI शाखा से 10‑20 रुप... ग्राम पंचायत केशरपुरा पाटन सरपंच प्रत्... ਨਸ਼ਾ ਪੀੜਤਾਂ ਨੂੰ ਹੁਨਰ ਸਿਖਾ ਕੇ ਰੁਜ਼ਗਾਰ ਨ...
04 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರು ಕೃಷಿ ವಿವಿಗೆ ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ - ಕಲ್ಯಾಣ ಕರ್ನಾಟಕದ ಪ್ರಗತಿಪರ ರೈತರಿಗೆ ಅವಕಾಶ

✍️ Reporter: Ningappa 🗓 04 Nov 2026, 01:48 PM 👁 10
Share: 💬 WhatsApp 📘 Facebook 𝕏 Post

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕೃಷಿ ರತ್ನ ಪ್ರಶಸ್ತಿ ಪ್ರದಾನ - 2025-26ನೇ ಸಾಲಿಗೆ ಅರ್ಜಿ ಆಹ್ವಾನ, ಕಲ್ಯಾಣ ಕರ್ನಾಟಕದ ಅರ್ಹ ರೈತರು ನ.12ರೊಳಗೆ ಅರ್ಜಿ ಸಲ್ಲಿಸಲು ಸೂಚನೆ, ವಿಸ್ತರಣಾ ನಿರ್ದೇಶಕರ ಮಾಹಿತಿ

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ ರಾಯಚೂರು ಕೃಷಿ ವಿವಿ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರನ್ನು ಗುರುತಿಸಿ ಗೌರವಿಸಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವತಿಯಿಂದ ನೀಡಲಾಗುವ ಕೃಷಿ ರತ್ನ ಪ್ರಶಸ್ತಿಗೆ 2025-26ನೇ ಸಾಲಿನ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆಯನ್ನು 2026ರ ನ.22ರಂದು ರಾಯಚೂರು ಮುಖ್ಯ ಆವರಣದಲ್ಲಿ ಆಯೋಜಿಸಲಾಗುತ್ತಿದ್ದು ಈ ವೇಳೆ ಕೃಷಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅರ್ಹ ರೈತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿವೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿತ ದಾಖಲೆಗಳೊಂದಿಗೆ ನವೆಂಬರ್ 12ರ ಸಂಜೆ 5 ಗಂಟೆಯೊಳಗೆ ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಅಥವಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರ ಕಚೇರಿಗೆ ಸಲ್ಲಿಸಬೇಕು.

ಭೀಮರಾಯನಗುಡಿ, ಲಿಂಗಸೂಗೂರು, ಕೊಪ್ಪಳ, ನಾಲವಾರ, ದೇವದುರ್ಗ ಹಾಗೂ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳ ಮುಖ್ಯಸ್ಥರ ಕಚೇರಿಯಿಂದಲೂ ಮಾಹಿತಿ ಪಡೆಯಬಹುದು.

ಹೆಚ್ಚಿನ ವಿವರಗಳಿಗಾಗಿ 9480696314, 315, 316, 317, 318, 319, 334, 335, 336 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📲Get App