🔥 TRENDING અહમદાબાદ અને ગાંધીનગરમાં પ્રતિબંધિત હુ... Bee queen is Local Honey war in Saffr... सोनवर्षा अंचल में निगरानी टीम ने रिश्व... ભુજ નજીક પાયરકા ગામની સીમમાં આવેલી વાડ... Dastgeer Sahib isa 200 years oid activ... बार एसोसिएशन में महासचिव एवं अध्यक्ष प...
05 Nov 2026•
ગુજરાતી मराठी ਪੰਜਾਬੀ বাংলা

ಗಾಣದಾಳ: ಎಸ್‌ಸಿ ಕಾಲೋನಿಯಲ್ಲಿ ರಸ್ತೆ ಮೇಲೆ ಹರಿಯುತ್ತಿರುವ ಚರಂಡಿ ನೀರು - ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

✍️ Reporter: Ningappa 🗓 05 Nov 2026, 07:50 AM 👁 15
Share: 💬 WhatsApp 📘 Facebook 𝕏 Post

ರಾಯಚೂರು ಜಿಲ್ಲೆ ಅರಕೇರಾ ತಾಲೂಕು ಗಾಣದಾಳ ಗ್ರಾಮದ ವಾರ್ಡ್ 1ರ ಎಸ್‌ಸಿ ಕಾಲೋನಿಯಲ್ಲಿ ತಿಂಗಳುಗಳಿಂದ ರಸ್ತೆ ಮೇಲೆ ಚರಂಡಿ ನೀರು ಹರಿವು - ಪಂಚಾಯಿತಿಗೆ ತಿಳಿಸಿದರೂ ಕ್ರಮವಿಲ್ಲ ಎಂದು ಸ್ಥಳೀಯರ ಆರೋಪ - ದುರ್ವಾಸನೆ, ಅನೈರ್ಮಲ್ಯ, ಡೆಂಗ್ಯೂ-ಮಲೇರಿಯಾ ಭೀತಿ - ಕೂಡಲೇ ಚರಂಡಿ ದುರಸ್ತಿ ಹಾಗೂ ಶಾಶ್ವತ ಪರಿಹಾರಕ್ಕೆ ವಾರ್ಡ್ ನಿವಾಸಿಗಳ ಆಗ್ರಹ

ಗಾಣದಾಳ ಎಸ್‌ಸಿ ಕಾಲೋನಿಯಲ್ಲಿ ರಸ್ತೆ ಮೇಲೆ ಚರಂಡಿ ನೀರು - ನಿರ್ಲಕ್ಷ್ಯಕ್ಕೆ ಆಕ್ರೋಶ

ಗಾಣದಾಳ, ನ. 4: ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಗಾಣದಾಳ ಗ್ರಾಮದ ವಾರ್ಡ್ ನಂ. 1ರ ಎಸ್‌ಸಿ ಕಾಲೋನಿಯಲ್ಲಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದು ಹಲವು ತಿಂಗಳುಗಳು ಕಳೆದಿದ್ದರೂ, ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪರಿಣಾಮವಾಗಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆ ಹಾಗೂ ಅನೈರ್ಮಲ್ಯದಿಂದ ನಿವಾಸಿಗಳು ಬೇಸತ್ತಿದ್ದಾರೆ.

ಕೊಳಚೆ ನೀರು ರಸ್ತೆಯ ಮೇಲೆ ನಿಂತು ಹರಿಯುತ್ತಿರುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಿದೆ. ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ.

ಈ ಕುರಿತು ಮಾತನಾಡಿದ ವಾರ್ಡ್‌ನ ಯಾಕೂಬ್ ದೂಡಮನಿ ಹಾಗೂ ಸ್ಥಳೀಯ ನಾಗರಿಕರು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚರಂಡಿ ಕಾಮಗಾರಿಯನ್ನು ದುರಸ್ತಿಗೊಳಿಸಬೇಕು. ಕೊಳಚೆ ನೀರು ರಸ್ತೆಯ ಮೇಲೆ ಹರಿಯದಂತೆ ಶಾಶ್ವತ ಪರಿಹಾರ ಕಲ್ಪಿಸುವುದರ ಜೊತೆಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಧಿಕಾರಿಗಳು ಶೀಘ್ರದಲ್ಲೇ ಸಮಸ್ಯೆ ಬಗೆಹರಿಸದಿದ್ದರೆ ಗ್ರಾಮಸ್ಥರೊಂದಿಗೆ ಸೇರಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ
📲Get App