ಮಾನ್ವಿಯಲ್ಲಿ ಚತುಷ್ಪಥ ರಾಜ್ಯ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ - ಸುರಕ್ಷಿತ, ಸುಗಮ ಸಂಚಾರಕ್ಕೆ ಆದ್ಯತೆ, ಡಿವೈಡರ್, ಬೀದಿ ದೀಪ, ಎಚ್ಚರಿಕೆ ಫಲಕ ಅಳವಡಿಕೆಗೆ ಸೂಚನೆ - ಶಾಸಕ ಹಂಪಯ್ಯ ನಾಯಕ, ಎನ್ ಎಸ್ ಬೋಸರಾಜು ಚರ್ಚೆ
ಮಾನ್ವಿ ಪ್ರವಾಸಿ ಮಂದಿರದಲ್ಲಿ ಶಾಸಕ ಹಂಪಯ್ಯ ನಾಯಕ ಅವರೊಂದಿಗೆ ರಾಜ್ಯ ಹೆದ್ದಾರಿ ಅಧಿಕಾರಿಗಳು, ಗುತ್ತಿಗೆದಾರರ ಸಭೆ - ಎನ್ ಎಸ್ ಬೋಸರಾಜು ಅವರಿಂದ ಚತುಷ್ಪಥ ಹೆದ್ದಾರಿ ಕಾಮಗಾರಿ ಪ್ರಗತಿ, ರಸ್ತೆ ಸುರಕ್ಷತಾ ಕ್ರಮಗಳ ಸಮಗ್ರ ಚರ್ಚೆ - ಅಂತಿಮ ಹಂತದಲ್ಲಿರುವ ಕಾಮಗಾರಿ ತ್ವರಿತ ಪೂರ್ಣಕ್ಕೆ, ಗುಣಮಟ್ಟದಲ್ಲಿ ರಾಜಿ ಇಲ್ಲದೆ ನಿಗದಿತ ಅವಧಿಯಲ್ಲಿ ಮುಗಿಸಲು ಸೂಚನೆ
ಮಾನ್ವಿಯಲ್ಲಿ ಚತುಷ್ಪಥ ರಾಜ್ಯ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ
ಮಾನ್ವಿ: ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನ್ಯ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ ಅವರೊಂದಿಗೆ ರಾಜ್ಯ ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ನಡೆಸಿ, ಚತುಷ್ಪಥ ರಾಜ್ಯ ಹೆದ್ದಾರಿಯ ಕಾಮಗಾರಿಗಳ ಪ್ರಗತಿ ಹಾಗೂ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಮಾನ್ಯ ಎನ್ ಎಸ್ ಬೋಸರಾಜ ಸಾಹೇಬರು ಸಮಗ್ರವಾಗಿ ಚರ್ಚಿಸಿದರು.
ಮಾನ್ವಿ ಪಟ್ಟಣದ ಮೂಲಕ ಹಾದುಹೋಗುವ ಚತುಷ್ಪಥ ರಾಜ್ಯ ಹೆದ್ದಾರಿ ಕಾಮಗಾರಿ ಅಂತಿಮ ಹಂತದಲ್ಲಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಸ್ಥಳಗಳಲ್ಲಿ ಡಿವೈಡರ್‌ಗಳ ನಿರ್ಮಾಣ, ಬೀದಿ ದೀಪಗಳ ಅಳವಡಿಕೆ ಹಾಗೂ ವಾಹನ ಸವಾರರಿಗೆ ಅನುಕೂಲವಾಗುವಂತೆ ಮಾರ್ಗಸೂಚಿ ಮತ್ತು ಎಚ್ಚರಿಕೆ ಫಲಕಗಳನ್ನು ಸ್ಥಾಪಿಸಲು ನಿರ್ದೇಶನ ನೀಡಲಾಯಿತು.
ಇದರ ಜತೆಗೆ, ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ಅಪಘಾತ ಮುಕ್ತ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಲಾಯಿತು.
ಪಟ್ಟಣದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಯಾವುದೇ ಅನಾನುಕೂಲವಾಗದಂತೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಮುರಳೀಧರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಬ್ದುಲ್ ಗಫೂರ್ ಸಾಬ್, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ಬಿ.ಕೆ. ಅಮರೇಶಪ್ಪ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನೋದ್, ಮಾನ್ವಿ ಪುರಸಭೆಯ ಮುಖ್ಯಾಧಿಕಾರಿ, ಜೆಸ್ಕಾಂ ಸಹಾಯಕ ಎಂಜಿನಿಯರ್, ಗುತ್ತಿಗೆದಾರ ಸುಬ್ರಮಣ್ಯ, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ನಬಿ ರಸೂಲ್, ಕೆ. ಸಾಜಿಯಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.