ಅಂತರ್ಜಾತೀಯ ವಿವಾಹಿತ ಮಹಿಳೆಗೆ ಬಹಿಷ್ಕಾರ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ
ಅಂತರ್ಜಾತೀಯ ವಿವಾಹಿತ ಮಹಿಳೆಗೆ ಬಹಿಷ್ಕಾರ
ಲಿಂಗಸುಗೂರು: ಅಂತರ್ಜಾತೀಯ ವಿವಾಹವಾಗಿದ್ದಕ್ಕೆ ಮಹಿಳೆ ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಜಾತಿ ಆಧಾರಿತ ನಿಂದನೆ, ಕೌಟುಂಬಿಕ ದೌರ್ಜನ್ಯ ಮತ್ತು ಸಾಮಾಜಿಕ ಬಹಿಷ್ಕಾರ ಹೇರಲಾಗಿದೆ ಎಂದು ಆರೋಪಿಸಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ (AIRWO) ನೇತೃತ್ವದಲ್ಲಿ ಪಟ್ಟಣದ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಪಟ್ಟಣದ ಗಡಿಯಾರ ಚೌಕದ ಫುಟ್ಪಾತ್ನಲ್ಲಿ ವಾಸಿಸುತ್ತಿರುವ ಶ್ರೀಮತಿ ಅಮೃತ್ (26) ಅವರು 2021ರಲ್ಲಿ ದರ್ಶನ್ ಮೆಹತಾ ಎಂಬುವವರನ್ನು ಅಂತರ್ಜಾತೀಯ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಕಳೆದ ಒಂದು ವರ್ಷದಿಂದ ಪತಿ ದರ್ಶನ್ ಮೆಹತಾ ಪತ್ನಿ ಹಾಗೂ ಮಕ್ಕಳನ್ನು ತೊರೆದು ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.
ಕಳೆದ 30 ದಿನಗಳಿಂದ ಅಮೃತ್ ಅವರು ಇಬ್ಬರು ಮಕ್ಕಳೊಂದಿಗೆ ಗಂಡನ ಮನೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡುತ್ತಿದ್ದರೂ, ಪತಿ ಹಾಗೂ ಅವರ ಕುಟುಂಬದವರು ಮನೆಗೆ ಸೇರಿಸಿಕೊಳ್ಳದೆ ಜಾತಿ ನಿಂದನೆ ಮಾಡಿದ್ದಲ್ಲದೆ, ನಾಯಿಯನ್ನು ಬಿಟ್ಟು ಬೆದರಿಸುವಂತಹ ಅಮಾನವೀಯ ಕೃತ್ಯ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದರಿಂದಾಗಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಬೀದಿಯಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪತಿ ದರ್ಶನ್ ಮೆಹತಾ ಹಾಗೂ ಅವರ ಕುಟುಂಬದವರ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಿ, ಜಾತಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂತ್ರಸ್ತೆ ಹಾಗೂ ಮಕ್ಕಳಿಗೆ ತಕ್ಷಣ ಪೊಲೀಸ್ ರಕ್ಷಣೆ ಒದಗಿಸಿ, ಸುರಕ್ಷಿತ ವಸತಿ ವ್ಯವಸ್ಥೆ ಕಲ್ಪಿಸಬೇಕು. ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಅಗತ್ಯ ಆಹಾರ, ವಸತಿ, ಶಿಕ್ಷಣ ಹಾಗೂ ವೈದ್ಯಕೀಯ ವೆಚ್ಚ ದೊರೆಯುವಂತೆ ಕಾನೂನು ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪ್ರಧಾನ ಕಾರ್ಯದರ್ಶಿ ಆರ್. ಮಾನಸಯ್ಯ, ದಲಿತ ಮುಖಂಡ ನಿಂಗಪ್ಪ ಪರಂಗಿ, ಮಹಿಳಾ ಸಬಲೀಕರಣ ಸಂಸ್ಥೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷೆ ವಿಜಯರಾಣಿ, ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಶಿವಮ್ಮ, ಸಂಚಾಲಕಿ ರತ್ನ ಕಟ್ಟಿಮನಿ, ಅಮರಯ್ಯ ಘಂಟಿ, ಆದೇಶ ನಗನೂರು, ತಿಪ್ಪರಾಜ ಗೆಜ್ಜಲಗಟ್ಟಾ, ಬಸವರಾಜ ಹಿರೇಹೆಸರೂರು, ಚಿದಾನಂದ ಸೇರಿದಂತೆ ಇದ್ದರು.