ಜಾಲಹಳ್ಳಿ ಅಭಿವೃದ್ಧಿಗೆ ಎಂಟು ಬೇಡಿಕೆಗಳ ಮನವಿ ಸಲ್ಲಿಸಿದ ಕೃಷಿ ಕೂಲಿಕಾರರ ಸಂಘವಿದ್ಯಾರ್ಥಿನಿಯರ ವಸತಿ ನಿಲಯ, ರಸ್ತೆ ಡಿವೈಡರ್ ನಿರ್ಮಾಣ, ಬಾಕಿ ಕೂಲಿ ಪಾವತಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಒತ್ತಾಯ
Watch on:
📘 Facebook
**ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್**
# ಜಾಲಹಳ್ಳಿ ಅಭಿವೃದ್ಧಿಗೆ ಎಂಟು ಬೇಡಿಕೆಗಳ ಮನವಿ ಸಲ್ಲಿಸಿದ ಕೃಷಿ ಕೂಲಿಕಾರರ ಸಂಘ
### ವಿದ್ಯಾರ್ಥಿನಿಯರ ವಸತಿ ನಿಲಯ, ರಸ್ತೆ ಡಿವೈಡರ್ ನಿರ್ಮಾಣ, ಬಾಕಿ ಕೂಲಿ ಪಾವತಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಒತ್ತಾಯ
**ಜಾಲಹಳ್ಳಿ, ನ.15:** ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮವು ಸುತ್ತಮುತ್ತಲಿನ ಸುಮಾರು 25 ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ಇಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ಜಾಲಹಳ್ಳಿ ಹೋಬಳಿ ಘಟಕವು ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಎಂಟು ಬೇಡಿಕೆಗಳ ಮನವಿ ಸಲ್ಲಿಸಿದೆ.
ನ.14ರಂದು ಜಾಲಹಳ್ಳಿಯ ಅಂಬಿಗರ ಚೌಡಯ್ಯ ಭವನದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕಿ ಕರೆಮ್ಮ ಜಿ. ನಾಯಕ ಅವರನ್ನು ಸಂಘದ ಪದಾಧಿಕಾರಿಗಳು ಭೇಟಿಯಾಗಿ ಮನವಿ ಸಲ್ಲಿಸಿದರು.
ಜಾಲಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಿಸಬೇಕು. ಬಸವೇಶ್ವರ ವೃತ್ತದಿಂದ ಬಾಲಕರ ಪ್ರೌಢಶಾಲೆಯವರೆಗೆ ರಸ್ತೆ ಡಿವೈಡರ್ ನಿರ್ಮಿಸಬೇಕು. ವಾಲ್ಮೀಕಿ ವೃತ್ತದಿಂದ ಶ್ರೀ ರಂಗನಾಥ ದೇವಾಲಯದವರೆಗೆ ರಸ್ತೆ ಅಭಿವೃದ್ಧಿಪಡಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ.
ಇದರೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸಿದ ಕೂಲಿ ಕಾರ್ಮಿಕರಿಗೆ ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿರುವ ಕೂಲಿ ಹಣವನ್ನು ಕೂಡಲೇ ಪಾವತಿಸಬೇಕು. ಶ್ರೀ ಲಕ್ಷ್ಮೀರಂಗನಾಥ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದ ಸ್ಥಳವನ್ನು ಅಭಿವೃದ್ಧಿಪಡಿಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ವಾಲ್ಮೀಕಿ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅಲ್ಲದೆ, ಜಾಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಟ್ಕಾ, ಜೂಜಾಟ ಮತ್ತು ಅಕ್ರಮ ಸಾರಾಯಿ ಮಾರಾಟದಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಈ ಕುರಿತು ಸಂಬಂಧಪಟ್ಟ ಪೊಲೀಸ್ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಶಾಸಕರ ಗಮನಕ್ಕೆ ತಂದರು.
ಒಟ್ಟು ಎಂಟು ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಗ್ರಾಮೀಣ ಭಾಗದ ಜನರ ಅಗತ್ಯಗಳನ್ನು ಪರಿಗಣಿಸಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವಂತೆ ಶಾಸಕರನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸುರೇಶ್ ಗೌಡ, ನರೇಶ್, ಶರಣಪ್ಪ ನಾಯಕ, ಆನಂದ್, ಲಿಂಗಣ್ಣ ನಾಯಕ ಮಕಾಸಿ, ಚಂದ್ರಶೇಖರ್ ನಾಯಕ ಸೇರಿದಂತೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ಜಾಲಹಳ್ಳಿ ಹೋಬಳಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**