🔥 TRENDING અમદાવાદમાં દાણીલીમડા વિસ્તારમાં ગાંજાન... துளசியாம்பட்டினத்தில் ஔவையார் மணிமண்டப... Odisha shuts schools, Anganwadis in 6... Elephant 'Raju' Spotted Near Dharuadih... Caste Census Panel Extends Invitation... Andhra Pradesh CM Thanks Karnataka CM...
18 Nov 2026•
ગુજરાતી मराठी ਪੰਜਾਬੀ বাংলা

ಲಿಂಗಸೂರು ಸಮಾಜ ಕಲ್ಯಾಣಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಒತ್ತಾಯ

✍️ Reporter: Khaja Hussain 🗓 18 Nov 2026, 08:30 PM 👁 17
Share: 💬 WhatsApp 📘 Facebook 𝕏 Post
**ರಾಯಚೂರು ಬ್ರೇಕಿಂಗ್ ನ್ಯೂಸ್**

# ಲಿಂಗಸೂರು ಸಮಾಜ ಕಲ್ಯಾಣಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಒತ್ತಾಯ

### ವಸತಿ ನಿಲಯಗಳಿಗೆ ಭೇಟಿ ನೀಡದೆ, ವಿದ್ಯಾರ್ಥಿಗಳ ಮೂಲಸೌಕರ್ಯ ಸಮಸ್ಯೆ ನಿರ್ಲಕ್ಷ್ಯ ಆರೋಪ; ಕ್ರಮ ಕೈಗೊಳ್ಳದಿದ್ದರೆ ಧರಣಿ ಎಚ್ಚರಿಕೆ

**ರಾಯಚೂರು: 18** ಲಿಂಗಸೂರು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿದ್ದು, ವಿದ್ಯಾರ್ಥಿಗಳ ವಸತಿ ನಿಲಯಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ದಿನಾಂಕ 18-11-2026ರಂದು ಸಲ್ಲಿಸಿದ ಮನವಿಯಲ್ಲಿ, ಲಿಂಗಸೂರು ತಾಲೂಕಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ವಿದ್ಯಾರ್ಥಿಗಳಿಗೆ ಸ್ನಾನ ಮಾಡಲು ಬಿಸಿನೀರಿನ ವ್ಯವಸ್ಥೆ ಇಲ್ಲದೆ ತೊಂದರೆಯಾಗುತ್ತಿದ್ದು, ಬೋರ್‌ವೆಲ್ ನೀರನ್ನೇ ಅಡುಗೆ ಹಾಗೂ ಕುಡಿಯಲು ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಲಿಂಗಸೂರು ತಾಲೂಕು ಸಮಾಜ ಕಲ್ಯಾಣಾಧಿಕಾರಿ ರವೀಂದ್ರ ಅವರು ದೇವದುರ್ಗ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯಲ್ಲಿಯೂ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಎರಡೂ ಕಡೆಗಳ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಶೀಲಿಸುತ್ತಿಲ್ಲ ಹಾಗೂ ಕಚೇರಿಗೂ ಸರಿಯಾಗಿ ಹಾಜರಾಗದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.

ವಸತಿ ನಿಲಯಗಳಲ್ಲಿನ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಲಿಂಗಸೂರು ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಮಲ್ಲಪ್ಪ ಗೌಡರು, ಸಿಂಧನೂರು ತಾಲೂಕಾಧ್ಯಕ್ಷ ಎಸ್. ನಿರುಪಾಡಿ, ಲಿಂಗಸೂರು ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಸಜ್ಜಾಪೂರ, ದೇವದುರ್ಗ ತಾಲೂಕು ಉಪಾಧ್ಯಕ್ಷ ದುರುಗಪ್ಪ ಸಮುದ್ರ, ಅಂಬರೀಶ ಯರಮರಸ್, ಮಸ್ಕಿ ತಾಲೂಕಾಧ್ಯಕ್ಷ ರಮೇಶ ಸಿ ಸೇರಿದಂತೆ ಸಂಘಟನೆಯ ಮುಖಂಡರು ಇದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App