🔥 TRENDING Junior National Badminton Championship... BJP Calls on State to Start Talks with... Government Raises Dearness Allowance b... त्रिवेणी धाम में नव दिवसीय श्री सीतारा... Zothankhuma sworn in as Mizoram's new... Arunachal Governor Calls on Tawang Stu...
19 Nov 2026•
ગુજરાતી मराठी ਪੰਜਾਬੀ বাংলা

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೂತನ ಪ್ರಾಂಶುಪಾಲರ ನೇಮಕಾತಿ ಆದೇಶ ವಿತರಣೆ

✍️ Reporter: Viswanatha D R 🗓 19 Nov 2026, 06:09 PM 👁 54
Share: 💬 WhatsApp 📘 Facebook 𝕏 Post
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ನೂತನವಾಗಿ ಆಯ್ಕೆಯಾದ ಪ್ರಾಂಶುಪಾಲರಿಗೆ ನೇಮಕಾತಿ ಆದೇಶ ವಿತರಿಸಲಾಯಿತು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ‘ಶೈಕ್ಷಣಿಕ ಸಾರಥ್ಯ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೂತನವಾಗಿ ಆಯ್ಕೆಯಾದ ಪ್ರಾಂಶುಪಾಲರಿಗೆ ನೇಮಕಾತಿ ಆದೇಶಗಳನ್ನು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸುವಲ್ಲಿ ಪ್ರಾಂಶುಪಾಲರ ನಾಯಕತ್ವ ಮಹತ್ವದ ಪಾತ್ರ ವಹಿಸುತ್ತದೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ನಡುವೆ ಸಮನ್ವಯ ಸಾಧಿಸಿ, ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ನಿರ್ಮಿಸುವ ಜವಾಬ್ದಾರಿ ಪ್ರಾಂಶುಪಾಲರ ಮೇಲಿದೆ. ನೂತನ ಪ್ರಾಂಶುಪಾಲರ ನೇತೃತ್ವದಲ್ಲಿ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರ ಮತ್ತಷ್ಟು ಪ್ರಗತಿ ಸಾಧಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
📲Get App