🔥 ट्रेंडिंग मेघालय ने बलगज हवाई अड्डा एएआई को सौंप... मेघालय सरकार ने दीर्घकालिक ऋण लेकर कर्... राकेश शर्मा ने सरकार पर बार्सर के उपेक... बिलासपुर में भटकता हुआ बैल ने बुजुर्ग... हिमाचल के हमीरपुर में नौकरी घोटाले में... छिंदवाड़ा में 58.79 करोड़ रुपये की मंज...
19 नव. 2026•
ગુજરાતી मराठी ਪੰਜਾਬੀ বাংলা

ಮಾದಕ ವಸ್ತುಗಳ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಕನ್ನಡಪರ ಸಂಘಟನೆಗಳ ಸಹಕಾರಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಜಾಗೃತಿ ಕಾರ್ಯಕ್ರಮ ನಡೆಸಲು ಸಂಘಟನೆಗಳ ಮುಖಂಡರ ಒಮ್ಮತದ ನಿರ್ಣಯ

✍️ रिपोर्टर: Khaja Hussain 🗓 19 नव. 2026, 09:29 PM 👁 29
शेयर करें: 💬 WhatsApp 📘 Facebook 𝕏 Post
**ರಾಯಚೂರು ಬ್ರೇಕಿಂಗ್ ನ್ಯೂಸ್**

# ಮಾದಕ ವಸ್ತುಗಳ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಕನ್ನಡಪರ ಸಂಘಟನೆಗಳ ಸಹಕಾರ

### ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಜಾಗೃತಿ ಕಾರ್ಯಕ್ರಮ ನಡೆಸಲು ಸಂಘಟನೆಗಳ ಮುಖಂಡರ ಒಮ್ಮತದ ನಿರ್ಣಯ

**ರಾಯಚೂರು:** ನಗರದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶದಿಂದ ಕನ್ನಡಪರ ಸಂಘಟನೆಗಳ ಒಕ್ಕೂಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮುಖಂಡರ ಪೂರ್ವಭಾವಿ ಸಭೆ ನ.18ರಂದು ನಡೆಯಿತು.

ಈಗಾಗಲೇ ರಾಯಚೂರು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವುದು ಕೇವಲ ಜಿಲ್ಲಾಡಳಿತದ ಜವಾಬ್ದಾರಿಯಲ್ಲ; ರಾಯಚೂರಿನ ಪ್ರತಿಯೊಬ್ಬ ನಾಗರಿಕರ ಕರ್ತವ್ಯವೂ ಆಗಿದೆ. ಅದರಲ್ಲೂ ವಿವಿಧ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಈ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಎಐಎಂಐಎಂ ಪಕ್ಷದ ರಾಯಚೂರು ನಗರ ಅಧ್ಯಕ್ಷ ಶಬ್ಬೀರ್ ಅಹ್ಮದ್ ಹೌದಡಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನ.18ರಂದು ಎಐಎಂಐಎಂ ಪಕ್ಷದ ವತಿಯಿಂದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಸಮಾಜದ ಆರೋಗ್ಯ, ಯುವಜನರ ಭವಿಷ್ಯ ಹಾಗೂ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ವಿವಿಧ ಸಂಘಟನೆಗಳ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿತ್ತು.

ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪದಾಧಿಕಾರಿಗಳು ಒಮ್ಮತದ ನಿರ್ಣಯ ಕೈಗೊಂಡು, ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಮಾದಕ ವಸ್ತುಗಳ ವಿರುದ್ಧ ಜನಜಾಗೃತಿ ಮೂಡಿಸುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ತೀರ್ಮಾನಿಸಿದರು.

ನಗರದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಎಲ್ಲ ಸಂಘಟನೆಗಳು ಒಗ್ಗಟ್ಟಿನಿಂದ ಸಹಕಾರ ನೀಡಬೇಕು ಎಂದು ಶಬ್ಬೀರ್ ಅಹ್ಮದ್ ಹೌದಡಿ ಮನವಿ ಮಾಡಿದ್ದಾರೆ.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App