शिक्षा
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ: ಚಂದ್ರಕಾಂತ ಗಂಗಶೆಟ್ಟಿ
ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಮಾರ್ಗದರ್ಶನ ಮುಖ್ಯ ಹಳ್ಳಿಖೇಡ (ಬಿ): ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯ ಶಿಕ್ಷಣದಷ್ಟೇ ಸಾಂಸ್ಕೃತಿಕ ಚಟುವಟಿಕೆಗಳೂ ಮಹತ್ವದ್ದಾಗಿವೆ. ಕೇವಲ ಅಂಕ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ: ಚಂದ್ರಕಾಂತ ಗಂಗಶೆಟ್ಟಿ
ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಮಾರ್ಗದರ್ಶನ ಮುಖ್ಯ
ಹಳ್ಳಿಖೇಡ (ಬಿ): ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯ ಶಿಕ್ಷಣದಷ್ಟೇ ಸಾಂಸ್ಕೃತಿಕ ಚಟುವಟಿಕೆಗಳೂ ಮಹತ್ವದ್ದಾಗಿವೆ. ಕೇವಲ ಅಂಕ ಗಳಿಸುವ ವಿದ್ಯಾರ್ಥಿಗಳನ್ನು ರೂಪಿಸುವುದಲ್ಲದೆ, ಉತ್ತಮ ವ್ಯಕ್ತಿತ್ವ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿ ಹೊಂದಿರುವ ಪ್ರಜ್ಞಾವಂತ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ನಿಜವಾದ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೀದರ್ ಉಪನಿರ್ದೇಶಕ ಚಂದ್ರಕಾಂತ ಗಂಗಶೆಟ್ಟಿ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೀದರ್ ಹಾಗೂ ಹಳ್ಳಿಖೇಡ (ಬಿ)ಯ ಬಸವತೀರ್ಥ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಪಠ್ಯ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸಲು ಅವಕಾಶ ಕಲ್ಪಿಸುವುದು ಅಗತ್ಯ. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದರು.
ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವುದು, ಅನುಭವ ಪಡೆಯುವುದು ಹಾಗೂ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂಸ್ಥೆಯ ಕಾರ್ಯಾಧ್ಯಕ್ಷ ಕೇಶವರಾವ ತಳಗಟ್ಟೇಕರ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಓಂಪ್ರಕಾಶ ದಡ್ಡೆ, ಮನ್ಮಥ ಡೋಲೆ, ಶಿವರಾಜ ಬಿರಾದಾರ, ಶಿವರಾಜ ನಾಯಕ, ಭಗವಾನ ಬಿರಾದಾರ, ಮಾಣಿಕ ರೆಡ್ಡಿ, ಸೂರ್ಯಕಾಂತ ಐನಾಪುರ ಹಾಗೂ ಮಸ್ತಾನ್ ಪಟೇಲ್ ವೇದಿಕೆಯಲ್ಲಿದ್ದರು. ಸೋಮಯ್ಯ ಸ್ವಾಮಿ ಹಿರೇಮಠ, ಗುಂಡಯ್ಯ ಎಸ್. ತೀರ್ಥ ಸೇರಿದಂತೆ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.