ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ: ರವಿ ಹಂಜ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಬಸವ ಮಂಟಪ’ ಕೃತಿ ಮುಟ್ಟುಗೋಲು ಹಾಕಿ, ಸುಮೋಟೋ ಪ್ರಕರಣ ದಾಖಲಿಸಿ: ಚಂದ್ರಶೇಖರ ನಾಡಗೌಡ ಒತ್ತಾಯ
**ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್**
# ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ: ರವಿ ಹಂಜ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
### ‘ಬಸವ ಮಂಟಪ’ ಕೃತಿ ಮುಟ್ಟುಗೋಲು ಹಾಕಿ, ಸುಮೋಟೋ ಪ್ರಕರಣ ದಾಖಲಿಸಿ: ಚಂದ್ರಶೇಖರ ನಾಡಗೌಡ ಒತ್ತಾಯ
**ಜಾಲಹಳ್ಳಿ, ನ. 21:** ಕರ್ನಾಟಕದ ಸಾಂಸ್ಕೃತಿಕ ನಾಯಕ, ಸಮಾನತೆಯ ಹರಿಕಾರ ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿವಾಸಿ ಭಾರತೀಯ ಲೇಖಕ ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರಕರ್ತ ಹಾಗೂ ಬಸವ ಸಮಿತಿ ಸಂಚಾಲಕ ಚಂದ್ರಶೇಖರ ನಾಡಗೌಡ ಒತ್ತಾಯಿಸಿದ್ದಾರೆ.
12ನೇ ಶತಮಾನದಲ್ಲಿ ಸಾಮಾಜಿಕ ಸಮಾನತೆ, ಮಾನವೀಯ ಮೌಲ್ಯಗಳು ಹಾಗೂ ಜಾತಿರಹಿತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಬಸವಣ್ಣನವರ ಕುರಿತು ರವಿ ಹಂಜ್ ನೀಡಿರುವ ಹೇಳಿಕೆಗಳು ಬಸವ ಅನುಯಾಯಿಗಳ ಭಾವನೆಗಳಿಗೆ ನೋವುಂಟು ಮಾಡಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಸವಣ್ಣನವರ ವಚನಗಳನ್ನು ಉಲ್ಲೇಖಿಸುವ ನೆಪದಲ್ಲಿ ಅವರ ತತ್ವಾದರ್ಶಗಳನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ. ಬಸವಣ್ಣನವರು ಬಿಜ್ಜಳನ ಬಂಡಾರವನ್ನು ಕದ್ದವರು ಹಾಗೂ ಬಿಜ್ಜಳನ ಹತ್ಯೆಗೆ ಕಾರಣರಾದವರು ಎಂಬ ಅರ್ಥ ಬರುವಂತೆ ಹೇಳಿಕೆ ನೀಡುವ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ ಮಾಡಲಾಗಿದೆ. ಇಂತಹ ಹೇಳಿಕೆಗಳು ಬಸವಣ್ಣನವರ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ತರುವಂತಿವೆ ಎಂದು ಆರೋಪಿಸಿದರು.
ಬಸವಣ್ಣನವರು ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾದವರಲ್ಲ. ಅವರ ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶಗಳು ಇಡೀ ಮಾನವಕುಲಕ್ಕೆ ಮಾರ್ಗದರ್ಶಿಯಾಗಿವೆ. ರಾಜ್ಯ ಸರ್ಕಾರವೇ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಸಂದರ್ಭದಲ್ಲಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು ಖಂಡನೀಯ ಎಂದರು.
ಕಳೆದ ಎರಡು ವರ್ಷಗಳಿಂದ ರವಿ ಹಂಜ್ ಅವರು ಬಸವಣ್ಣನವರ ಕುರಿತು ವಿವಾದಾತ್ಮಕ ವಿಷಯಗಳನ್ನು ಒಳಗೊಂಡ ಅಂಕಣಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸುತ್ತಿದ್ದು, ಇದೀಗ ಅವುಗಳನ್ನು ‘ಬಸವ ಮಂಟಪ’ ಎಂಬ ಕೃತಿಯ ರೂಪದಲ್ಲಿ ಹೊರತಂದಿದ್ದಾರೆ. ಅಲ್ಲದೆ, ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುವ ವೇಳೆ ಲಿಂಗಾಯತ ಸಮುದಾಯವನ್ನು ಅವಹೇಳನಕಾರಿಯಾಗಿ ಸಂಬೋಧಿಸಿ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರಿದರು.
12ನೇ ಶತಮಾನದಲ್ಲಿಯೇ ಕ್ರಾಂತಿಕಾರಿ ಬದಲಾವಣೆಗೆ ಕಾರಣರಾದ ಮಹಾನ್ ಮಾನವತಾವಾದಿ ಬಸವಣ್ಣನವರ ಕುರಿತು ಯಾರೇ ನಿಂದನೆ ಮಾಡಿದರೂ ಸಹಿಸುವುದಿಲ್ಲ. ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹದ ಚಿಂತನೆಗಳು ಈ ಭೂಮಿ ಇರುವವರೆಗೂ ಜೀವಂತವಾಗಿರಲಿವೆ. ಕಾಲ ಬದಲಾಗಬಹುದು, ಆಡಳಿತ ಬದಲಾಗಬಹುದು; ಆದರೆ ಬಸವಣ್ಣನವರ ಮಾನವೀಯತೆ ಮತ್ತು ಸಮಾನತೆಯ ತತ್ವಗಳನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಶೋಷಣೆಗೆ ಒಳಗಾದ ಮಹಿಳೆಯರಿಗೆ ಲಿಂಗದೀಕ್ಷೆ ನೀಡಿ ವಾಕ್ ಸ್ವಾತಂತ್ರ್ಯ ಹಾಗೂ ಸಾಮಾಜಿಕ ಗೌರವದೊಂದಿಗೆ ಬದುಕುವ ಅವಕಾಶ ಕಲ್ಪಿಸುವ ಮೂಲಕ ಮಹಿಳಾ ಸಮಾನತೆಗೆ ಬಸವಣ್ಣನವರು ಮಹತ್ವದ ಕೊಡುಗೆ ನೀಡಿದ್ದಾರೆ. ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿ, ಶೋಷಣೆ ಮತ್ತು ಅಸಮಾನತೆ ಇಲ್ಲದ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ವಿಶ್ವಗುರು ಬಸವಣ್ಣನವರ ಚಾರಿತ್ರ್ಯದ ಕುರಿತು ಕೀಳಾಗಿ ಮಾತನಾಡುವುದು ಸಹಿಸಲಾಗದು ಎಂದರು.
ಐತಿಹಾಸಿಕ ಹಾಗೂ ಸಾಹಿತ್ಯಿಕ ಆಧಾರಗಳಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಬಸವಣ್ಣನವರ ಕುರಿತು ಹೇಳಿಕೆ ನೀಡುವುದು ಖಂಡನೀಯ. ಬಸವಣ್ಣನವರ ಚಾರಿತ್ರ್ಯಕ್ಕೆ ಧಕ್ಕೆ ತರುವುದರ ಜೊತೆಗೆ ವಚನ ಸಾಹಿತ್ಯವನ್ನು ವಿಡಂಬನೆ ಮತ್ತು ವ್ಯಂಗ್ಯಕ್ಕೆ ಗುರಿಪಡಿಸುವ ಉದ್ದೇಶ ಹೊಂದಿರುವಂತೆ ಇಂತಹ ಹೇಳಿಕೆಗಳು ಕಂಡುಬರುತ್ತವೆ ಎಂದು ಆಕ್ಷೇಪಿಸಿದರು.
ಬಸವಣ್ಣನವರ ವಿಚಾರಧಾರೆಗಳನ್ನು ವಿರೂಪಗೊಳಿಸಲು ಹಾಗೂ ಹತ್ತಿಕ್ಕಲು ಪಟ್ಟಭದ್ರ ಹಿತಾಸಕ್ತಿಗಳು ನಿರಂತರ ಪ್ರಯತ್ನ ನಡೆಸುತ್ತಿವೆ. ಇಂತಹ ಬೆಳವಣಿಗೆಗಳು ರಾಜ್ಯ ಹಾಗೂ ಹೊರರಾಜ್ಯಗಳ ಬಸವಪ್ರೇಮಿಗಳು ಮತ್ತು ಲಿಂಗಾಯತ ಸಮುದಾಯದವರಿಗೆ ತೀವ್ರ ನೋವುಂಟು ಮಾಡಿವೆ. ಸಮಾಜದಲ್ಲಿ ಸೌಹಾರ್ದತೆ, ಪ್ರೀತಿ, ಸಮಾನತೆ, ವ್ಯಕ್ತಿತ್ವದ ಘನತೆ ಹಾಗೂ ಪರಸ್ಪರ ಗೌರವಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ಖಂಡಿಸಬೇಕು ಎಂದರು.
ಸಮಾಜದಲ್ಲಿ ಶಾಂತಿಭಂಗ ಉಂಟುಮಾಡುವ ಹಾಗೂ ಮಾನವೀಯ ಸಂಬಂಧಗಳನ್ನು ಹಾಳುಮಾಡುವ ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ರವಿ ಹಂಜ್ ಅವರ ಲೇಖನಗಳನ್ನು ಸಂಗ್ರಹಿಸಿ ಪ್ರಕಟಿಸಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕು ಎಂದು ಚಂದ್ರಶೇಖರ ನಾಡಗೌಡ ಆಗ್ರಹಿಸಿದರು.
**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**