🔥 TRENDING David Beckham Commends Madhya Pradesh... Md Salim warns against Mamata Banerjee... JEE Main 2027 Session‑1 registration c... West Bengal CM announces ₹212 crore ai... Four injured in deadly family feud tur... గ్రామాభివృద్ధికి కొత్త ఆలోచనలతో శెట్టి...
22 Nov 2026•
ગુજરાતી मराठी ਪੰਜਾਬੀ বাংলা
Health

ಬ್ರಿಮ್ಸ್ ಆಸ್ಪತ್ರೆಯಲ್ಲಿ ಔಷಧ ಕೊರತೆ: ಒಂದು ವಾರದಲ್ಲಿ ಸಮಸ್ಯೆ ಪರಿಹರಿಸಲು ಭೀಮಾ ಕೋರೆಗಾಂವ್ ಸೇನೆ ಒತ್ತಾಯ

✍️ Reporter: Basavaraj pujari 🗓 22 Nov 2026, 09:18 PM 👁 24
Share: 💬 WhatsApp 📘 Facebook 𝕏 Post

ಬೀದರ್: ನಗರದ ಬ್ರೀಮ್ಸ್ ಬೋಧಕ ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಡ ರೋಗಿಗಳು ತೊಂದರೆ ಅನುಭವಿಸುತ್ತಿದ್ದು, ಒಂದು ವಾರದೊಳಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಭೀಮಾ ಕೋರೆಗಾಂವ್ ಸೇನೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಔಷಧ ಕೊರತೆ: ಒಂದು ವಾರದಲ್ಲಿ ಸಮಸ್ಯೆ ಪರಿಹರಿಸಲು ಭೀಮಾ ಕೋರೆಗಾಂವ್ ಸೇನೆ ಒತ್ತಾಯ

ಬೀದರ್: ನಗರದ ಬ್ರೀಮ್ಸ್ ಬೋಧಕ ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಡ ರೋಗಿಗಳು ತೊಂದರೆ ಅನುಭವಿಸುತ್ತಿದ್ದು, ಒಂದು ವಾರದೊಳಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಭೀಮಾ ಕೋರೆಗಾಂವ್ ಸೇನೆ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಈ ಕುರಿತು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಸಂಸ್ಥೆಯ ಜಿಲ್ಲಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ರವಿ ಭೂಸಂಡೆ ಚಿದ್ರಿ ಅವರು ನ.22ರಂದು ಮನವಿ ಸಲ್ಲಿಸಿದ್ದಾರೆ.

ಬ್ರೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಬಡ ರೋಗಿಗಳಿಗೆ ಅಗತ್ಯ ಔಷಧಗಳು ಲಭ್ಯವಿಲ್ಲದ ಕಾರಣ, ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರೂ ಹೊರಗಿನ ಔಷಧ ಅಂಗಡಿಗಳಿAದ ದುಬಾರಿ ಬೆಲೆಗೆ ಔಷಧ ಖರೀದಿಸುವ ಅನಿವಾರ್ಯತೆ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ವೈದ್ಯರು ಹಾಜರಾತಿ ದಾಖಲಿಸಿ, ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸದೆ ತಮ್ಮ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹೃದಯ ಶಸ್ತ್ರಚಿಕಿತ್ಸಾ ಕೇಂದ್ರ ಉದ್ಘಾಟನೆಯಾಗಿ ಸುಮಾರು 18 ತಿಂಗಳು ಕಳೆದರೂ ಇದುವರೆಗೆ ಒಂದೂ ಹೃದಯ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೃದಯ ಸಂಬAಧಿ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲಿಯೇ ನಡೆಸದೆ, ಕಮಿಷನ್ ನೀಡುವ ಖಾಸಗಿ ಲ್ಯಾಬ್‌ಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ರೋಗಿಗಳನ್ನು ಕಳುಹಿಸಲಾಗುತ್ತಿದೆ ಎಂದು ದೂರಿದ್ದಾರೆ.

ಮಕ್ಕಳಲ್ಲಿ ರಕ್ತಕಣಗಳ ಕೊರತೆಗೆ ಸಂಬAಧಿಸಿದ ಚಿಕಿತ್ಸೆಗೆ ಅಗತ್ಯವಿರುವ ಆeಜಿeಡಿಚಿsiಡಿox ಆisಠಿeಡಿsibಟe 500 mg ಮಾತ್ರೆಗಳು ಕಳೆದ ಮೂರು ತಿಂಗಳಿAದ ಆಸ್ಪತ್ರೆಯಲ್ಲಿ ಲಭ್ಯವಿಲ್ಲ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಹಣದ ಆಸೆಯಿಂದ ಖಾಸಗಿ ಆಸ್ಪತ್ರೆಗಳಿಗೆ ತೆರಳುವಂತೆ ಸಿಬ್ಬಂದಿ ಸೂಚಿಸುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದಾರೆ.

ಇದಲ್ಲದೆ, ಆಸ್ಪತ್ರೆಯಲ್ಲಿ 10–15 ವರ್ಷಗಳಿಂದ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಎಲ್ಲ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಒಂದು ವಾರದೊಳಗೆ ಪರಿಹಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ರವಿ ಭೂಸಂಡೆ ಚಿದ್ರಿ ಎಚ್ಚರಿಸಿದ್ದಾರೆ.
📲Get App