🔥 ट्रेंडिंग સાણંદ ના બળિયાદેવ મંદિરમાં પ્રાગટ્ય દિ... प्रधानमंत्री मोदी ने नेपाल के लिए 24,0... मेघालय पुलिस अधिकारी को रिश्वत के आरोप... छह अवामी लीग नेता 2024 विरोध मामले में... साबरूम में चुनावी अभियान के दौरान कांग... त्रिपुरा में संयुक्त पुलिस कार्रवाई मे...
23 नव. 2026•
ગુજરાતી मराठी ਪੰਜਾਬੀ বাংলা
शिक्षा

ಬೀದರ್ ತಾಲ್ಲೂಕಿನ ರಟಕಲಪುರದಲ್ಲಿ ಮೌಲಾನಾ ಆಜಾದ್ ಶಾಲೆ ಹಾಗೂ ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವೃತ್ತಿಪರ ವಸತಿ ನಿಲಯ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂ

✍️ रिपोर्टर: Basavaraj pujari 🗓 23 नव. 2026, 07:20 PM 👁 25
शेयर करें: 💬 WhatsApp 📘 Facebook 𝕏 Post

ಚಿತ್ರ 2 ಬೀದರ್ ತಾಲ್ಲೂಕಿನ ಮಾಳೆಗಾಂವ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ವ್ಯವಹಾರಗಳು, ಹಜ್ ಹಾಗೂ ವಕ್ಫ್ ಸಚಿವ ಯು.ಟಿ. ಖಾದರ್ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ

ಬೀದರ್ ತಾಲ್ಲೂಕಿನ ರಟಕಲಪುರದಲ್ಲಿ ಮೌಲಾನಾ ಆಜಾದ್ ಶಾಲೆ ಹಾಗೂ ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವೃತ್ತಿಪರ ವಸತಿ ನಿಲಯ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ವ್ಯವಹಾರಗಳು, ಹಜ್ ಹಾಗೂ ವಕ್ಫ್ ಸಚಿವ ಯು.ಟಿ. ಖಾದರ್ ಉದ್ಘಾಟಿಸಿದರು


ಬೀದರ್ ತಾಲ್ಲೂಕಿನ ಮಾಳೆಗಾಂವ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ವ್ಯವಹಾರಗಳು, ಹಜ್ ಹಾಗೂ ವಕ್ಫ್ ಸಚಿವ ಯು.ಟಿ. ಖಾದರ್ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು


ಮೌಲಾನಾ ಆಜಾದ್ ಶಾಲೆ ಕಟ್ಟಡ ಉದ್ಘಾಟನೆ, ಪಿಎಚ್‍ಸಿ ಕಟ್ಟಡಕ್ಕೆ ಶಂಕುಸ್ಥಾಪನೆ

ಬೀದರ್: ತಾಲ್ಲೂಕಿನ ರಟಕಲಪುರದಲ್ಲಿ ಮೌಲಾನಾ ಆಜಾದ್ ಶಾಲೆ ಹಾಗೂ ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವೃತ್ತಿಪರ ವಸತಿ ನಿಲಯ ಕಟ್ಟಡದ ಉದ್ಘಾಟನೆ ಹಾಗೂ ಮಾಳೆಗಾಂವ್ ಗ್ರಾಮದಲ್ಲಿ ಪಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಶಂಕುಸ್ಥಾಪನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ವ್ಯವಹಾರಗಳು, ಹಜ್ ಹಾಗೂ ವಕ್ಫ್ ಸಚಿವ ಯು.ಟಿ. ಖಾದರ್ ಭಾನುವಾರ ನೆರವೇರಿಸಿದರು.
ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಧ್ಯೇಯವಾಗಿದೆ ಎಂದು ಅವರು ತಿಳಿಸಿದರು.
ರಟಕಪುರದಲ್ಲಿ ರೂ. 4.85 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಶಾಲೆ ಹಾಗೂ ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವೃತ್ತಿಪರ ವಸತಿ ನಿಲಯವನ್ನು ನಿರ್ಮಿಸಲಾಗಿದೆ. ಇದರಿಂದ ಅಲ್ಪಸಂಖ್ಯಾತರ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಸೌಲಭ್ಯ, ವೃತ್ತಿಪರ ತರಬೇತಿ ಸಿಗಲಿದೆ. ಹೆಣ್ಣುಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಸಾವಲಂಬನೆಗೆ ನೆರವಾಗಲಿದೆ ಎಂದು ಶಾಸಕ ರಹೀಂಖಾನ್ ತಿಳಿಸಿದರು.
ಮಾಳೆಗಾಂವ್ ಗ್ರಾಮದಲ್ಲಿ ರೂ. 5 ಕೋಟಿ ವೆಚ್ಚದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡವು ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಸಂಸದ ಸಾಗರ್ ಖಂಡ್ರೆ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಜಿ.ಪಂ. ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಮತ್ತಿತರರು ಇದ್ದರು.
📲Get App