🔥 TRENDING कासुमोर बावसी फतेहगढ़ उपखंड मूलाना में नवनिर्वाचित स... దువ్వ గ్రామంలో కార్తీక పౌర్ణమి సందర్భం... બાબરા તાલુકા ગળકોટડીમાં પવનચક્કી થાંભલ... Actor Chiranjeevi to Launch Multiplex... Education Times Releases School Assemb...
24 Nov 2026•
ગુજરાતી मराठी ਪੰਜਾਬੀ বাংলা

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಬೀನ್ ಮೊಹಪಾತ್ರ ಬಳಿಚಕ್ರ ಗ್ರಾಮ ಪಂಚಾಯತ್ ಕಚೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ

✍️ Reporter: Ningappa 🗓 24 Nov 2026, 12:09 PM 👁 10
Share: 💬 WhatsApp 📘 Facebook 𝕏 Post
ಯಾದಗಿರಿ: ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಜುಬಿನ್ ಮೊಹಪಾತ್ರ ಭಾ.ಆ.ಸೇ ರವರು ಸೋಮವಾರ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮ ಪಂಚಾಯತ್ ಕಚೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿದರು.

ಸ್ಥಳದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕಾರ: ಮೊದಲಿಗೆ ಗ್ರಾಮ ಪಂಚಾಯತ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅವರು, ಕಚೇರಿಯ ಹಾಜರಾತಿ ಪುಸ್ತಕ, ಕಡತಗಳ ನಿರ್ವಹಣೆ ಹಾಗೂ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದ ಅವರು, ಜನರ ಸಮಸ್ಯೆಗಳನ್ನು ಆಲಿಸಿ ಸಂಬಂಧಪಟ್ಟ ಪಿಡಿಓ ಹಾಗೂ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವಂತೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ತಪಾಸಣೆ: ತದನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಅವರು, ಆಸ್ಪತ್ರೆಯ ವಾರ್ಡ್ಗಳು, ಪ್ರಯೋಗಾಲಯ ಹಾಗೂ ಔಷಧ ವಿತರಣಾ ಕೇಂದ್ರವನ್ನು ಪರಿಶೀಲಿಸಿದರು.

ಆಸ್ಪತ್ರೆಯಲ್ಲಿರುವ ಔಷಧ ದಾಸ್ತಾನು ಹಾಗೂ ಅವಧಿ ಮೀರಿದ ಔಷಧಗಳ ಕುರಿತು ತಪಾಸಣೆ ನಡೆಸಿದರು. ಚಿಕಿತ್ಸೆಗಾಗಿ ಬಂದಿದ್ದ ರೋಗಿಗಳೊಂದಿಗೆ ಸಂವಾದ ನಡೆಸಿ, ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಬಡ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಚಿಕಿತ್ಸೆ ನೀಡಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚರಿಕೆ: ಇದೇ ವೇಳೆ ಕ್ಷೇತ್ರ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ಪಷ್ಟ ಸಂದೇಶ ರವಾನಿಸಿ, "ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುವುದು ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಇಂತಹ ಅನಿರೀಕ್ಷಿತ ಭೇಟಿಗಳು ಮುಂದುವರಿಯಲಿದ್ದು, ಕರ್ತವ್ಯ ಲೋಪ ಕಂಡುಬಂದಲ್ಲಿ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು" ಎಂದು ಖಡಕ್ ಎಚ್ಚರಿಕೆ ನೀಡಿದರು.
📲Get App