ಯಲಗಟ್ಟಾ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಪರದಾಟ: ಟ್ಯಾಂಕರ್ ಮೂಲಕ ನೀರು ಸರಬರಾಜು
ಲಿಂಗಸಗೂರು, ನ. 25: ತಾಲೂಕಿನ ಯಲಗಟ್ಟಾ ಗ್ರಾಮದಲ್ಲಿ ನೀರಿಗಾಗಿ ಗ್ರಾಮಸ್ಥರು ಹಲುಬುತ್ತಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯ ಹಾಗೂ ಕುಡಿಯುವ ನೀರು ಇಲ್ಲದೆ ಬೋರ್‌ವೆಲ್‌ಗಳು ಮತ್ತು ಬಾವಿಗಳಲ್ಲಿ ನೀರು ಬತ್ತಿ ಹೋಗಿದ್ದು, ಬಳಕೆ ನೀರು ಹಾಗೂ ಕುಡಿಯುವ ನೀರಿಗಾಗಿ ಜನರು ಪರಿತಪಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಜಲಧಾರೆ (ಜಲದಾನ) ಯೋಜನೆಯ ನೀರಿನ ಪೈಪ್‌ಲೈನ್ ಕಾಮಗಾರಿ ಮಾಡುತ್ತಿರುವ ಸಿಬ್ಬಂದಿಗಳ ಮೂಲಕ ಟ್ಯಾಂಕರ್‌ಗಳ ಮೂಲಕ ನೀರಿನ ಅನುಕೂಲತೆ ಕಲ್ಪಿಸಲಾಯಿತು. ಇದರಿಂದ ಗ್ರಾಮದ ಮಹಿಳೆಯರು ಮತ್ತು ಯುವಕರು ನೀರಿನ ಬಂಡಿಗಳ ಮೂಲಕ ನೀರು ಹಿಡಿದುಕೊಂಡರು.
ಬೇಸಿಗೆ ಕೊನೆಯಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದನ್ನು ಸರಿಪಡಿಸಲು ಇಲಾಖೆ ಮತ್ತು ಆಡಳಿತ ಅಧಿಕಾರಿಗಳು ಜನರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ಕಂಬಗಳ ವ್ಯವಸ್ಥೆ ಹಾಗೂ ರಸ್ತೆಗಳ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.