🔥 ट्रेंडिंग चाइनीज मंझा से बाइक सवार की मौत, दुखद... अखिलेश यादव ने कांग्रेस से UP चुनावों... दिल्ली कैफे में पार्टी के बाद कथित साम... यात्री सुरक्षित, कार पलटने के बाद लगी... रास अल खाइमा में हुए दुर्घटना में 13 ल... मध्य प्रदेश में ठंड का अटैक: भोपाल में...
25 नव. 2026•
ગુજરાતી मराठी ਪੰਜਾਬੀ বাংলা
शिक्षा

ಬೆಂಗಳೂರಿನಲ್ಲಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಸಭೆಯಲ್ಲಿ ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ರಾಜ್ಯ ಅ

✍️ रिपोर्टर: Basavaraj pujari 🗓 25 नव. 2026, 06:49 AM 👁 19
शेयर करें: 💬 WhatsApp 📘 Facebook 𝕏 Post

ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ: ಹೋರಾಟಕ್ಕೆ ಒಗ್ಗೂಡಿದ ಸಂಘಟನೆಗಳು ಬೀದರ್: ಖಾಸಗಿ ಅನುದಾನ ರಹಿತ ಶಾಲಾ, ಕಾಲೇಜುಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘಟಿತ ಹೋರಾಟ ನಡೆಸಲು ರಾಜ್ಯದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್

ಬೆಂಗಳೂರಿನಲ್ಲಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಸಭೆಯಲ್ಲಿ ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಮಾತನಾಡಿದರು


ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ: ಹೋರಾಟಕ್ಕೆ ಒಗ್ಗೂಡಿದ ಸಂಘಟನೆಗಳು

ಬೀದರ್: ಖಾಸಗಿ ಅನುದಾನ ರಹಿತ ಶಾಲಾ, ಕಾಲೇಜುಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘಟಿತ ಹೋರಾಟ ನಡೆಸಲು ರಾಜ್ಯದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಗಳು ಒಗ್ಗೂಡಿವೆ.
ಬೆಂಗಳೂರಿನ ಬ್ರಿಗೇಡ್ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಸಭೆಯಲ್ಲಿ ರಾಜ್ಯದ 10ಕ್ಕೂ ಹೆಚ್ಚು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಸಮನ್ವಯ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ತಿಳಿಸಿದರು.
ಮಾನ್ಯತೆ ನವೀಕರಣ, ಆರ್‍ಟಿಇ ಹಣ ಮರು ಪಾವತಿ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, ಭೂ ಪರಿವರ್ತನೆ, ಬಾಡಿಗೆ ಕರಾರು ಸೇರಿದಂತೆ ಹಲವು ವಿಚಾರಗಳಲ್ಲಿ ಶಾಲಾ ಆಡಳಿತ ಮಂಡಳಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿವೆ. ಈ ಸಮಸ್ಯೆಗಳ ಪರಿಹಾರದ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಬರುವ ದಿನಗಳಲ್ಲಿ ಸಮನ್ವಯ ಸಮಿತಿ ಮುಂದಾಳತ್ವದಲ್ಲಿ ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟ ನಡೆಸಲು ನಿರ್ಣಯಿಸಲಾಗಿದೆ ಎಂದು ಹೇಳಿದರು.
ಡಿಸೆಂಬರ್ 5 ರಂದು ಸಮಿತಿಯ ಮುಂದಿನ ಸಭೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಸಮನ್ವಯ ಸಮಿತಿಯನ್ನು ಸೇರಲು ಬಯಸುವ ಇತರೆ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಗಳು ಸಂಪರ್ಕಿಸಬಹುದು ಎಂದು ತಿಳಿಸಿದರು.
ವಿವಿಧ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು.
📲Get App