Politics
ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನ ಆಚರಣೆ
ಕೇಕ್ ಕತ್ತರಿಸಿ ಸಂಭ್ರಮಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೀದರ್: ಆಮ್ ಆದ್ಮಿ ಪಕ್ಷದ ಬೀದರ್ ಜಿಲ್ಲಾ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಹಾಗೂ ಪಕ್ಷದ ಸಂಸ್ಥಾಪನಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿA
ಸಂವಿಧಾನ ದಿನಾಚರಣೆ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನ ಆಚರಣೆ
ಕೇಕ್ ಕತ್ತರಿಸಿ ಸಂಭ್ರಮಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು
ಬೀದರ್: ಆಮ್ ಆದ್ಮಿ ಪಕ್ಷದ ಬೀದರ್ ಜಿಲ್ಲಾ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಹಾಗೂ ಪಕ್ಷದ ಸಂಸ್ಥಾಪನಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿAದ ಆಚರಿಸಲಾಯಿತು.
2011–12ರಲ್ಲಿ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ಎರಡು ಬಾರಿ ಸರ್ಕಾರ ರಚಿಸಿ, ಶಿಕ್ಷಣ, ಆರೋಗ್ಯ ಹಾಗೂ ಜನಸಾಮಾನ್ಯರ ಕಲ್ಯಾಣ ಕ್ಷೇತ್ರಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಮೊಹಲ್ಲಾ ಕ್ಲಿನಿಕ್‌ಗಳ ಮೂಲಕ ಆರೋಗ್ಯ ಸೇವೆ ಒದಗಿಸುವುದು, ಮಹಿಳೆಯರು ಹಾಗೂ ಬಡವರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪಕ್ಷದ ಮುಖಂಡರು ತಿಳಿಸಿದರು.
ಅದೇ ರೀತಿ ಪಂಜಾಬ್‌ನಲ್ಲಿಯೂ ಆಮ್ ಆದ್ಮಿ ಪಕ್ಷ ಸರ್ಕಾರವು ಸರ್ಕಾರಿ ಶಾಲೆಗಳ ಅಭಿವೃದ್ಧಿ, ಟೋಲ್‌ಮುಕ್ತ ಸೌಲಭ್ಯ ಹಾಗೂ ರೈತರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹4,250 ಬೆಲೆ ನೀಡುವ ಮೂಲಕ ರೈತರ ಹಿತಾಸಕ್ತಿಗೆ ಆದ್ಯತೆ ನೀಡಿದೆ ಎಂದು ಮುಖಂಡರು ಹೇಳಿದರು.
ಪಕ್ಷವು 14–15 ವರ್ಷಗಳ ರಾಜಕೀಯ ಪಯಣವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಸಮಸ್ತ ಜನತೆಗೆ ಆಮ್ ಆದ್ಮಿ ಪಕ್ಷದ ವತಿಯಿಂದ ಶುಭಾಶಯಗಳನ್ನು ತಿಳಿಸಲಾಯಿತು. ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು ಜನಪರ ಆಡಳಿತ ಹಾಗೂ ಭ್ರಷ್ಟಾಚಾರ ಮುಕ್ತ ವ್ಯವಸ್ಥೆಗಾಗಿ ಪಕ್ಷ ನಿರಂತರವಾಗಿ ಕಾರ್ಯನಿರ್ವಹಿಸಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಸಿದ್ದಪ್ಪ ಪೂಲಾರೆ, ಪ್ರಧಾನ ಕಾರ್ಯದರ್ಶಿ ಎಂ.ಡಿ. ಜಾವಿದ್, ಯುವ ಅಧ್ಯಕ್ಷ ವೆಂಕಟೇಶ ನಂದಿ, ಬಸವ ಅನುರಾಜ್ ಮುಲ್ಗೆ, ಮೋಹನ್ ಕುಮಾರ್, ಚಂದ್ರಶೇಖರ್ ಶರೀಕಾರ್, ರಾಜಣ್ಣ ಬಿರಾದಾರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.