ರಾಯಚೂರಿನಲ್ಲಿ ಕನಕದಾಸರ ಜಯಂತಿ ಆಚರಣೆ - ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ - ಸಮಾನತೆ, ಸಹಬಾಳ್ವೆ, ಮಾನವೀಯತೆಯ ಸಂದೇಶ ಸ್ಮರಣೆ
ರಾಯಚೂರಿನಲ್ಲಿ ಕನಕದಾಸರ ಜಯಂತಿ ಆಚರಣೆ - ಜಿಲ್ಲಾಡಳಿತದ ವತಿಯಿಂದ ಆಯೋಜನೆ - ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ - ದಾಸಸಾಹಿತ್ಯ, ಕೀರ್ತನೆಗಳ ಮೂಲಕ ಸಮಾನತೆ, ಸಹಬಾಳ್ವೆ, ಮಾನವೀಯತೆ, ಸಾಮಾಜಿಕ ನ್ಯಾಯದ ಸಂದೇಶ - ಸಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಲು ಕರೆ
ರಾಯಚೂರು:ರಾಯಚೂರು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆಯಲ್ಲಿ ಯುವ ನಾಯಕ ರವಿ ಬೋಸರಾಜ ಭಾಗವಹಿಸಿ, ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.
ನಂತರ ಮಾತನಾಡಿದ ಅವರು, ತಮ್ಮ ದಾಸಸಾಹಿತ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜಕ್ಕೆ ಸಮಾನತೆ, ಸಹಬಾಳ್ವೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಸಾರಿದ ಕನಕದಾಸರು ಕನ್ನಡ ನಾಡಿನ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಯ ಅಮೂಲ್ಯ ರತ್ನವಾಗಿದ್ದಾರೆ.
ಜಾತಿ-ಧರ್ಮಗಳ ಎಲ್ಲೆಗಳನ್ನು ಮೀರಿದ ಅವರ ಚಿಂತನೆಗಳು, ಮಾನವೀಯ ಮೌಲ್ಯಗಳು ಮತ್ತು ಸಮ ಸಮಾಜದ ಕನಸು ಇಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು, ಸಮಾನತೆ ಮತ್ತು ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.