🔥 TRENDING Suriya’s ‘Scene’ Breaks Records, Ranks... Mookuthi Amman 2 Day 11 Box Office Rep... Mookuthi Amman 2 Nets Strong Earnings... Secret Mephedrone Lab Discovered in Gu... Vice President to Inaugurate MLA Train... Kanak News Odisha Releases 8 PM Weathe...
16 Nov 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ ಶೌಚಾಲಯ ಧ್ವಂಸ ಪ್ರಕರಣ: ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆಸ್ವಚ್ಛ ಭಾರತ ಅಭಿಯಾನದಡಿ ನಿರ್ಮಿಸಿದ್ದ ವೈಯಕ್ತಿಕ ಶೌಚಾಲಯ ಧ್ವಂಸ ಆರೋಪ; ಡಿ.18ಕ್ಕೆ ಮುಂದಿನ ವಿಚಾರಣೆ ನಿಗದಿ

✍️ Reporter: Khaja Hussain 🗓 16 Nov 2026, 10:18 AM 👁 23
Share: 💬 WhatsApp 📘 Facebook 𝕏 Post
.

**ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್**

# ಜಾಲಹಳ್ಳಿ ಶೌಚಾಲಯ ಧ್ವಂಸ ಪ್ರಕರಣ: ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ

### ಸ್ವಚ್ಛ ಭಾರತ ಅಭಿಯಾನದಡಿ ನಿರ್ಮಿಸಿದ್ದ ವೈಯಕ್ತಿಕ ಶೌಚಾಲಯ ಧ್ವಂಸ ಆರೋಪ; ಡಿ.18ಕ್ಕೆ ಮುಂದಿನ ವಿಚಾರಣೆ ನಿಗದಿ

**ಜಾಲಹಳ್ಳಿ, ನ.15:** ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ವಾರ್ಡ್‌ನಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ನಿರ್ಮಿಸಲಾಗಿದ್ದ ವೈಯಕ್ತಿಕ ಶೌಚಾಲಯವನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ವಯೋವೃದ್ಧ ಮಹಿಳೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದೇವದುರ್ಗ ತಾಲ್ಲೂಕು ಘಟಕದ ವತಿಯಿಂದ ಗುರುವಾರ ಜಾಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು.

**ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ:**

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ O.S. No.253/2026ರ ಅಡಿಯಲ್ಲಿ ಶರಣಪ್ಪ ಹೊಟ್ಟಿ ಅವರು ಲಕ್ಷ್ಮೀ ಅವರ ವಿರುದ್ಧ ದಾವೆ ಹೂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 13-11-2026ರಂದು ವಿವಾದಿತ ಆಸ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಆದೇಶ ಹೊರಡಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ನಿಗದಿಪಡಿಸಲಾಗಿದೆ. ನ್ಯಾಯಾಲಯದ ಈ ಆದೇಶವು ಮಧ್ಯಂತರ ತಡೆಯಾಜ್ಞೆಯಾಗಿದ್ದು, ಆಸ್ತಿಯ ಮಾಲೀಕತ್ವ ಅಥವಾ ವಿವಾದದ ಕುರಿತು ಅಂತಿಮ ತೀರ್ಪು ನೀಡಿದಂತಲ್ಲ ಎಂಬುದು ಗಮನಾರ್ಹ.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App