ಜಾಲಹಳ್ಳಿಯಲ್ಲಿ ಸೆ.19ಕ್ಕೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
📰 ಜಾಲಹಳ್ಳಿ–ದೇವದುರ್ಗ | ಬ್ರೇಕಿಂಗ್ ನ್ಯೂಸ್
ಜಾಲಹಳ್ಳಿಯಲ್ಲಿ ಸೆ.19ಕ್ಕೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ಶಿಕ್ಷಣದ ಗುಣಮಟ್ಟ, NEP–SEP ಕುರಿತು ಸಮಾವೇಶದಲ್ಲಿ ಚರ್ಚೆ: ನಾಗರಾಜ ಮಸ್ಕಿ
ಜಾಲಹಳ್ಳಿ, ಸೆ.13: ರಾಯಚೂರು ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ 2026ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.19ರಂದು ಜಾಲಹಳ್ಳಿಯ ಶ್ರೀ ಜಗದಾರಾಧ್ಯ ಜಯಶಾಂತೇಶ್ವರ ಸಭಾಭವನದಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ, ವಕೀಲ ನಾಗರಾಜ ಮಸ್ಕಿ ತಿಳಿಸಿದರು.
ಜಾಲಹಳ್ಳಿಯ ವಿದ್ಯಾಧರೆ ಇಂಗ್ಲಿಷ್ ಮಾಂಟೆಸ್ಸರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ಪ್ರತಿ ತಾಲೂಕಿನಿಂದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಒಟ್ಟು 15 ಮಂದಿ ಉತ್ತಮ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಆಯ್ಕೆ ಮಾಡಿ 2026ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಸಮಾವೇಶದಲ್ಲಿ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಕುರಿತು ವಿಚಾರ ವಿನಿಮಯ ಹಾಗೂ ಸಂವಾದ ನಡೆಯಲಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP) ಹಾಗೂ ರಾಜ್ಯ ಶಿಕ್ಷಣ ನೀತಿ (SEP) ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ನಾಗರಾಜ ಮಸ್ಕಿ ವಿವರಿಸಿದರು.
ಕಾರ್ಯಕ್ರಮದ ಅಂಗವಾಗಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಯನ್ನು ಬಸವೇಶ್ವರ ವೃತ್ತದಿಂದ ಶ್ರೀ ಜಗದಾರಾಧ್ಯ ಜಯಶಾಂತೇಶ್ವರ ಸಭಾಭವನದವರೆಗೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಶ್ರೀ ಜಗದಾರಾಧ್ಯ ಜಯಶಾಂತೇಶ್ವರ ಮಠದ ಪೂಜ್ಯರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲೆಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸುವ ನಿರೀಕ್ಷೆಯಿದೆ. ಸ್ಥಳೀಯ ಶಾಸಕಿ ಕರೇಮ್ಮ ಜಿ. ನಾಯಕ ಅವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಾಗರಾಜ ಮಸ್ಕಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದವರು
ದೇವದುರ್ಗ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಂಕರಲಿಂಗಯ್ಯ ಸ್ವಾಮಿ, ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ದೇಸಾಯಿ, ಉಪಾಧ್ಯಕ್ಷ ಮಾರೆಪ್ಪ ಕೊತ್ತದೊಡ್ಡಿ, ಮಲ್ಲಪ್ಪ ಕುಂಬಾರ, ಮಂಜುನಾಥ ತೋರಣದಿನ್ನಿ, ಮೈಬೂಬ ಕಂದಗಲ್, ಚನ್ನಪ್ಪ ಬೂದಿನಾಳ, ಡಾ. ವಿಜಯರೆಡ್ಡಿ, ಬಸವರಾಜ ಕೊಪ್ಪರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ