🔥 ट्रेंडिंग मुंबई लोकल ट्रेन में चाकू से हमला, 53... ರಾಯಚೂರು ಜಿಲ್ಲಾ ಸಮಿತಿ ಸಭೆ ಯಶಸ್ವಿ - ಸಿಂಧ... ବିଜେଡି ଜିଲ୍ଲା ସମ୍ପାଦକ ଭାବେ ଚିରଞ୍ଜିତ ବା... मनीष कुमार झा के लापता होने की सूचना,... ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವರ ಅಧ್ಯಕ್ಷ... अररिया के आदर्श मध्य विद्यालय में सहयो...
17 नव. 2026•
ગુજરાતી मराठी ਪੰਜਾਬੀ বাংলা

ರೈತರ ಹಿತಕ್ಕಾಗಿ ಗಬ್ಬೂರಿನಿಂದ ನಾರಾಯಣಪುರ ಜಲಾಶಯದವರೆಗೆ ಪಾದಯಾತ್ರೆ: ಜಾಲಹಳ್ಳಿಗೆ ತಲುಪಿದ ಹೋರಾಟಗಾರರುನ.20ರಂದು ನಾರಾಯಣಪುರ ಜಲಾಶಯಕ್ಕೆ ಮುತ್ತಿಗೆ; ಪಾದಯಾತ್ರೆಗೆ ಜಾಲಹಳ್ಳಿ ರೈತರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಬೆಂಬಲ

✍️ रिपोर्टर: Khaja Hussain 🗓 17 नव. 2026, 09:37 PM 👁 22
शेयर करें: 💬 WhatsApp 📘 Facebook 𝕏 Post
ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್

### ರೈತರ ಹಿತಕ್ಕಾಗಿ ಗಬ್ಬೂರಿನಿಂದ ನಾರಾಯಣಪುರ ಜಲಾಶಯದವರೆಗೆ ಪಾದಯಾತ್ರೆ: ಜಾಲಹಳ್ಳಿಗೆ ತಲುಪಿದ ಹೋರಾಟಗಾರರು

### ನ.20ರಂದು ನಾರಾಯಣಪುರ ಜಲಾಶಯಕ್ಕೆ ಮುತ್ತಿಗೆ; ಪಾದಯಾತ್ರೆಗೆ ಜಾಲಹಳ್ಳಿ ರೈತರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಬೆಂಬಲ

ಜಾಲಹಳ್ಳಿ, ನ.17: ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ನೀರು ಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಅಭಿವೃದ್ಧಿ ಸೇನೆ, ಬೆಂಗಳೂರು ವತಿಯಿಂದ ರಾಜ್ಯಾಧ್ಯಕ್ಷ ಮಸ್ತಾನ್ ನಾಯಕ್ ಅವರ ನೇತೃತ್ವದಲ್ಲಿ ನವೆಂಬರ್ 15ರಿಂದ ಗಬ್ಬೂರಿನಿಂದ ನಾರಾಯಣಪುರ ಜಲಾಶಯದವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ ಮೂರನೇ ದಿನವಾದ ಮಂಗಳವಾರ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯ ಬಸವೇಶ್ವರ ವೃತ್ತಕ್ಕೆ ತಲುಪಿತು.

ಪಾದಯಾತ್ರೆ ಜಾಲಹಳ್ಳಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು, ರೈತ ಮುಖಂಡರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಹೋರಾಟಗಾರರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಚಂದಪ್ಪ ಬುದ್ಧಿನ್ನಿ ಅವರು, ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮಸ್ತಾನ್ ನಾಯಕ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ನ.20ರಂದು ನಡೆಯಲಿರುವ ನಾರಾಯಣಪುರ ಜಲಾಶಯ ಮುತ್ತಿಗೆ ಕಾರ್ಯಕ್ರಮದಲ್ಲಿ ಎಲ್ಲ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಕರೆ ನೀಡಿದರು.

ಬಾಕ್ಸ್ ನಲ್ಲಿ

ಹೋರಾಟಗಾರ ಗಿರಿಯಪ್ಪ ಪೂಜಾರಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕರ್ನಾಟಕದ ಜಲಾಶಯಗಳಿಗೆ ನೀರು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಸರ್ವಪಕ್ಷ ನಿಯೋಗದೊಂದಿಗೆ ಕೇಂದ್ರ ಸರ್ಕಾರವನ್ನು ಭೇಟಿ ಮಾಡಿ ನೀರು ಬಿಡುಗಡೆಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು. ರೈತರ ಹಿತಕ್ಕಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಬಾಕ್ಸ್ ನಲ್ಲಿ

ಪಾದಯಾತ್ರೆಯ ನೇತೃತ್ವ ವಹಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಅಭಿವೃದ್ಧಿ ಸೇನೆಯ ರಾಜ್ಯಾಧ್ಯಕ್ಷ ಮಸ್ತಾನ್ ನಾಯಕ್ ಮಾತನಾಡಿ, ನ.20ರಂದು ನಾರಾಯಣಪುರ ಜಲಾಶಯಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹೋರಾಟಕ್ಕೆ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕಿನ ಜನಪ್ರತಿನಿಧಿಗಳು ರೈತರ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತುವ ಬದಲು ತೋರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಟೀಕಿಸಿದರು. ಸಿರವಾರ ಕ್ರಾಸ್‌ನಲ್ಲಿ ಹೋರಾಟ ನಡೆಸಿ, ಬೆಂಗಳೂರಿನ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜನಪ್ರತಿನಿಧಿಗಳು ಹೇಳಿಕೆ ನೀಡಿದ್ದಾರೆ. ಅವರು ನಿಜವಾಗಿಯೂ ರೈತರ ಪರವಾಗಿದ್ದರೆ ತಮ್ಮ ಮಾತಿನಂತೆ ನಡೆದುಕೊಳ್ಳಬೇಕು. ಜಿಲ್ಲೆಯ ಹಾಗೂ ತಾಲ್ಲೂಕಿನ ಜನಪ್ರತಿನಿಧಿಗಳು ರೈತರ ಪರವಾಗಿ ಪರಿಣಾಮಕಾರಿಯಾಗಿ ಧ್ವನಿ ಎತ್ತುವಲ್ಲಿ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಅಭಿವೃದ್ಧಿ ಸೇನೆಯ ರಾಯಚೂರು ಜಿಲ್ಲಾಧ್ಯಕ್ಷ ಸಂಗಮೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಆಂಜನೇಯ ಶಾಸ್ತ್ರಿ, ಲಿಂಗಸುಗೂರು ತಾಲ್ಲೂಕು ಅಧ್ಯಕ್ಷ ದೇಸಾಯಿ ನಾಯಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ರೈತ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಬಸವೇಶ್ವರ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಲಹಳ್ಳಿಯ ಪ್ರಗತಿಪರರು ಹಾಗೂ ವಿವಿಧ ಪಕ್ಷಗಳ ಮುಖಂಡರು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಚಂದಪ್ಪ ಬುದ್ಧಿನ್ನಿ, ಭೀಮಣ್ಣ ವಿರಗೋಟ್, ತಿಮ್ಮಣ್ಣ ನಾಯಕ ದಿವಾನ, ಈಶಣ್ಣ ಕಾಟಮಳ್ಳಿ, ಗಿರಿಯಪ್ಪ ಪೂಜಾರಿ, ರಂಗಪ್ಪ ಬಂಡಿ, ಯಮನೂರಪ್ಪ ನಾಯಕ, ಬಸವರಾಜ್ ಗೋಪಾಲಪುರ, ಸಲಬಣ್ಣ ಸಾಹುಕಾರ್, ಭೀಮನಗೌಡ ಪಾಟೀಲ್, ಮಹಾದೇವ ಯಾದವ್ ಸೇರಿದಂತೆ ಜಾಲಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App