ಹೊಸೂರು ಸಿದ್ದಾಪುರದಲ್ಲಿ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ–2026’ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಘೋಷವಾಕ್ಯ
📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್
ಹೊಸೂರು ಸಿದ್ದಾಪುರದಲ್ಲಿ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ–2026’
“ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಘೋಷವಾಕ್ಯ
ಹೊಸೂರು ಸಿದ್ದಾಪುರ12: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ದೇವದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ–2026’ ಕಾರ್ಯಕ್ರಮ ನಡೆಯಿತು.
“ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ಕರೆಮ್ಮ ಜಿ. ನಾಯಕ ಅವರು, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೇವೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಆಂದೋಲನದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ, ಶುದ್ಧ ಕುಡಿಯುವ ನೀರು, ಸ್ವಚ್ಛ ಗ್ರಾಮ–ಸುಂದರ ಗ್ರಾಮ, ಸಾಮಾಜಿಕ ಭದ್ರತಾ ಯೋಜನೆಗಳು, ವೃದ್ಧಾಪ್ಯ–ವಿಧವಾ–ವಿಕಲಚೇತನರ ಪಿಂಚಣಿ, ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಸೇವೆಗಳು, ರೈತರಿಗೆ ವಿವಿಧ ಸೌಲಭ್ಯಗಳು ಸೇರಿದಂತೆ ಹಲವು ಸರ್ಕಾರಿ ಸೇವೆಗಳನ್ನು ಒದಗಿಸಲಾಯಿತು.
ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಿ, ಸ್ಥಳದಲ್ಲಿಯೇ ಮಾಹಿತಿ ಹಾಗೂ ಪರಿಹಾರ ಪಡೆಯಲು ಮುಂದಾದರು.
ಬಾಕ್ಸ್ ನಲ್ಲಿ
ಜಾಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಮನವಿ
ಇದೇ ಸಂದರ್ಭದಲ್ಲಿ ಜಾಲಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಬುಡ್ಡಪ್ಪ ಕಾವಲಿ ಅವರು, ದೇವದುರ್ಗ ತಾಲೂಕಿನ ಪ್ರಮುಖ ಹಾಗೂ ಅತಿ ದೊಡ್ಡ ಪಟ್ಟಣಗಳಲ್ಲಿ ಒಂದಾಗಿರುವ ಜಾಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಧಾದೇವಿ, ಜಾಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ವೈಶಾಲಿ ಜಳಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ