🔥 ट्रेंडिंग यमन के होदेइदा‑सना में फँसे 19 भारतीय... यूपी के सीएम योगी आदित्यनाथ ने 2027 चु... दिवाली पर फटाके की दुर्घटनाओं से तीन म... गुवाहाटी में कार टक्कर से महिला गंभीर... बंटवाड़ में समूह ने संघर्षरत परिवार के... IIFA ने उषा उथुप को श्रद्धांजलि, उनके...
09 नव. 2026•
ગુજરાતી मराठी ਪੰਜਾਬੀ বাংলা
ಶಿಕ್ಷಕರ ನೇಮಕಾತಿ: ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ಅ.26ಕ್ಕೆ ವಿಸ್ತರಣೆ

ಶಿಕ್ಷಕರ ನೇಮಕಾತಿ: ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ಅ.26ಕ್ಕೆ ವಿಸ್ತರಣೆ

✍️ रिपोर्टर: Viswanatha D R 🗓 24 सित. 2026, 07:48 PM 👁 722
शेयर करें: 💬 WhatsApp 📘 Facebook 𝕏 Post
Worked for 43s


ಬೆಂಗಳೂರು, ಸೆ.24: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ PST (ಸಾಮಾನ್ಯ ಶಿಕ್ಷಕ), PE ಗ್ರೇಡ್-II, GPT, CST ಸೇರಿದಂತೆ ವಿವಿಧ ವೃಂದದ ಶಿಕ್ಷಕರ ಹುದ್ದೆಗಳು ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹಶಿಕ್ಷಕರ (AM) ವೃಂದದ ಗ್ರೇಡ್-1 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹಿಂದೆ ಜಿಲ್ಲೆ/ವಿಭಾಗವಾರು ಅಧಿಸೂಚನೆ ಹೊರಡಿಸಲಾಗಿತ್ತು.

ಅದರಂತೆ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 2026ರ ಅಕ್ಟೋಬರ್ 26ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಯನ್ನು ಖಚಿತಪಡಿಸಿಕೊಳ್ಳಲು ಅಕ್ಟೋಬರ್ 28, 2026 ಕೊನೆಯ ದಿನವಾಗಿದೆ.

ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತವಾಗಿ ಪರೀಕ್ಷೆಯನ್ನು 2026ರ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ schooleducation.karnataka.gov.in ಪರಿಶೀಲಿಸುವಂತೆ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಅರ್ಜಿ ಸಲ್ಲಿಕೆ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಸಹಾಯವಾಣಿ 080-22483140, 22483145, 9449588020 ಸಂಪರ್ಕಿಸಬಹುದು.
📲Get App